ತೆಂಕನಿಡಿಯೂರು: ಮಂಗಳೂರು ವಿವಿ ಮಟ್ಟದ ಅಂತರ್ ಕಾಲೇಜು ಪುರುಷರ ಹಾಗೂ ಮಹಿಳೆಯರ ಕರಾಟೆ ಪಂದ್ಯಾಟ ಉದ್ಘಾಟನೆ

ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಹಾಗೂ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಜಂಟಿ ಆಶ್ರಯದಲ್ಲಿ ಮಂಗಳೂರು ವಿವಿ ಮಟ್ಟದ ಅಂತರ್ ಕಾಲೇಜು ಪುರುಷರ ಹಾಗೂ ಮಹಿಳೆಯರ ಕರಾಟೆ ಪಂದ್ಯಾಟ ಶನಿವಾರ ತೆಂಕನಿಡಿಯೂರು ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಉಡುಪಿ ಜಿಲ್ಲಾ ಆಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ ಮಾತನಾಡಿ, ಕ್ರೀಡಾ ಮನೋಭಾವದಿಂದ ಸ್ಪರ್ಧಿಗಳು ಕ್ರೀಡೆಯಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿ ಭಾಗವಹಿಸಿ ಎಂದು […]

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ. ಸಮಾಜದಲ್ಲಿ ಉತ್ತಮ ವಾತಾವರಣ ಸೃಷ್ಠಿಸಲು ಶಿಕ್ಷಕರು ವಹಿಸುವ ಪಾತ್ರ ಅತ್ಯಮುಲ್ಯವಾದದ್ದು. ತಮ್ಮ ಜೀವನದುದ್ದಕ್ಕೂ ಪ್ರತಿಯೊಬ್ಬರಿಗೂ ಶಿಕ್ಷಣದ ಅರಿವನ್ನು ಮೂಡಿಸಿ ಜ್ಞಾನಾರ್ಜನೆಯನ್ನು ಎರಕ ಹೊಯ್ಯುವ ಶಿಕ್ಷಕರುಗಳು ಮಕ್ಕಳ ಪಾಲಿಗೆ ಆ ದೇವರು ಕೊಟ್ಟ ವರ. ಇಂತಹ ಶಿಕ್ಷಕರಿಗೆ ಗೌರವ ಸೂಚಿಸಲು ಶಿಕ್ಷಕರ ದಿನವನ್ನು ಆಚರಿಸಲಾಗುತ್ತಿದೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಇಂದು ಬ್ರಹ್ಮಾವರದ ಶ್ಯಾಮಿಲಿ ಶನಾಯ ಸಭಾಂಗಣದಲ್ಲಿ ಜಿಲ್ಲಾಡಳಿತ, […]

ವಿಟ್ಲಪಿಂಡಿಯಲ್ಲಿ ‘ಸೊಳ್ಳೆ’–‘ನರ್ಸ್’ ಜೋಡಿ ವಿಶೇಷ ಆಕರ್ಷಣೆ: ವೇಷದ ಮೂಲಕ ಆರೋಗ್ಯ ಜಾಗೃತಿ!

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ನಡೆದ ವಿಟ್ಲಪಿಂಡಿ ಮಹೋತ್ಸವದಲ್ಲಿ ವಿವಿಧ ಆಕರ್ಷಕ ವೇಷಗಳ ನಡುವೆ ಮಲೇರಿಯಾ ಜಾಗೃತಿ ಮೂಡಿಸುವ ಸೊಳ್ಳೆ ಹಾಗೂ ನರ್ಸ್ ವೇಷಧಾರಿಗಳು ವಿಶೇಷವಾಗಿ ಗಮನ ಸೆಳೆದರು. ರಥಬೀದಿಯಲ್ಲಿ ಸಂಚರಿಸಿದ ವೇಷಧಾರಿಗಳು ಸಾರ್ವಜನಿಕರಲ್ಲಿ ಮಲೇರಿಯಾ ರೋಗದ ಕುರಿತು ಅರಿವು ಮೂಡಿಸುವ ಪ್ರಯತ್ನ ಮಾಡಿದರು. ಸೊಳ್ಳೆಯ ವೇಷದೊಂದಿಗೆ ನರ್ಸ್ ವೇಷಧಾರಿಯೊಬ್ಬರು ವಿಶಿಷ್ಟ ರೀತಿಯಲ್ಲಿ ಜಾಗೃತಿ ಸಂದೇಶ ಸಾರಿದರು. ನರ್ಸ್ ವೇಷಧಾರಿ ಒಂದು ಕೈಯಲ್ಲಿ ಇಂಜೆಕ್ಷನ್ ಹಿಡಿದುಕೊಂಡಿದ್ದರೆ, ಇನ್ನೊಂದು ಕೈಯಲ್ಲಿ ಮಲೇರಿಯಾ ರೋಗದ ಮುಂಜಾಗ್ರತಾ ಕ್ರಮಗಳು ಹಾಗೂ ನಿಯಂತ್ರಣದ […]

ವಿಟ್ಲಪಿಂಡಿ ವೈಭವಕ್ಕೆ ಸಾಕ್ಷಿಯಾದ ಕೃಷ್ಣನೂರು: ಚಿನ್ನದ ರಥೋತ್ಸವಕ್ಕೆ ಹರಿದುಬಂದ ಭಕ್ತಸಾಗರ

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಶನಿವಾರ ವಿಟ್ಲಪಿಂಡಿ ಮಹೋತ್ಸವವು ವಿಜೃಂಭಣೆಯಿಂದ ನೆರವೇರಿತು. ಚಿನ್ನದ ರಥೋತ್ಸವ, ಗೊಲ್ಲವೇಷಧಾರಿಗಳ ಕುಡಿಕೆ ಒಡೆಯುವ ಸಂಪ್ರದಾಯ, ವೈವಿಧ್ಯಮಯ ವೇಷಗಳ ಮೆರವಣಿಗೆ ಹಾಗೂ ಮಲ್ಲಯುದ್ಧ ಪ್ರದರ್ಶನ ಉತ್ಸವದ ಪ್ರಮುಖ ಆಕರ್ಷಣೆಯಾಗಿತ್ತು. ಶುಕ್ರವಾರ ಅಷ್ಟಮಿ ಹಬ್ಬ ಆರಂಭಗೊಂಡಿದ್ದು, ಇಡೀ ದಿನ ರಾಜಾಂಗಣ ಹಾಗೂ ರಥಬೀದಿಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶನಿವಾರ ಬೆಳಗ್ಗಿನಿಂದಲೇ ವಿಟ್ಲಪಿಂಡಿ ಉತ್ಸವದಲ್ಲಿ ಪಾಲ್ಗೊಳ್ಳಲು ಸಾವಿರಾರು ಭಕ್ತರು ಕೃಷ್ಣಮಠದತ್ತ ಆಗಮಿಸಿದ್ದರು. ಉತ್ಸವದ ಅಂಗವಾಗಿ ರಾಜಾಂಗಣದಲ್ಲಿ ಭಕ್ತರಿಗೆ ಅನ್ನಪ್ರಸಾದದ […]

ಉಡುಪಿಯಲ್ಲಿ ವಿಟ್ಲಪಿಂಡಿ ಸಂಭ್ರಮ: ಕೋಳಿ ವೇಷಕ್ಕೆ ಜನ ಫಿದಾ!

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಉಡುಪಿಯಲ್ಲಿ ಪರಾಕಾಷ್ಠೆ ತಲುಪಿದ್ದು, ಶನಿವಾರ ರಥಬೀದಿಯಲ್ಲಿ ನಡೆಯಲಿರುವ ವಿಟ್ಲಪಿಂಡಿ ಉತ್ಸವಕ್ಕೆ ಭರದ ಸಿದ್ಧತೆ ನಡೆದಿದೆ. ನಗರದಾದ್ಯಂತ ಹಬ್ಬದ ಸಂಭ್ರಮ ಮನೆಮಾಡಿದ್ದು, ವಿವಿಧ ಬಗೆಯ ವೇಷಧಾರಿಗಳು ಜನರನ್ನು ರಂಜಿಸುತ್ತಿದ್ದಾರೆ. ಹುಲಿವೇಷ, ರಾಕ್ಷಸ ವೇಷ ಸೇರಿದಂತೆ ವೈವಿಧ್ಯಮಯ ವೇಷಧಾರಿಗಳು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಿದ್ದು, ಅವರ ಕುಣಿತ, ಮೆರವಣಿಗೆ ಹಾಗೂ ಕಲರವ ಹಬ್ಬದ ಮೆರುಗನ್ನು ಮತ್ತಷ್ಟು ಹೆಚ್ಚಿಸಿದೆ. ಎಲ್ಲೆಡೆ ವೇಷಧಾರಿಗಳ ಆಕರ್ಷಕ ಪ್ರದರ್ಶನವನ್ನು ವೀಕ್ಷಿಸಲು ಸಾರ್ವಜನಿಕರು ಮುಗಿಬೀಳುತ್ತಿದ್ದಾರೆ. ಈ ನಡುವೆ ವಿಶಿಷ್ಟ ಕೋಳಿ ವೇಷಧಾರಿಗಳ […]