ನಿಟ್ಟೆ ತಾಂತ್ರಿಕ ಕಾಲೇಜು ಮತ್ತು ಅದಾನಿ ಸಿಮೆಂಟ್ಸ್ ನಡುವೆ ಎಂಒಯು ಸಹಿ

ಅಕಾಡೆಮಿಯಾ–ಉದ್ಯಮ ಸಹಯೋಗಕ್ಕೆ ಮಹತ್ವದ ಹೆಜ್ಜೆ ಕಾರ್ಕಳ: ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ)ಯ ಅಂಗ ಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಎಂಜಿನಿಯರಿಂಗ್ ವಿಭಾಗ ಹಾಗೂ ನಿಟ್ಟೆ ಸೆಂಟರ್ ಫಾರ್ ಇನ್‌ಫ್ರಾಸ್ಟ್ರಕ್ಚರ್ ಟೆಕ್ನಾಲಜಿ & ಎಂಜಿನಿಯರಿಂಗ್ ಸರ್ವಿಸಸ್ (N-CITES) ವತಿಯಿಂದ ಅದಾನಿ ಸಿಮೆಂಟ್ಸ್‌ನೊಂದಿಗೆ ಮಹತ್ವದ ಒಪ್ಪಂದ (MoU)ಕ್ಕೆ ಸೆಪ್ಟೆಂಬರ್ 3 ರಂದು ಸಹಿ ಮಾಡಲಾಯಿತು. ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ನಡೆದ ಈ ಸಮಾರಂಭವು ಶೈಕ್ಷಣಿಕ ಕ್ಷೇತ್ರ ಮತ್ತು ಉದ್ಯಮದ ನಡುವಿನ ಸಹಯೋಗವನ್ನು ಮತ್ತಷ್ಟು […]

ತಡರಾತ್ರಿ ಕೃಷ್ಣನಿಗೆ ಅರ್ಘ್ಯ ಪ್ರದಾನ: ಭಕ್ತಿಸಾಗರದಲ್ಲಿ ಉಡುಪಿ ಶ್ರೀಕೃಷ್ಣ ಮಠ

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮದ ಪ್ರಮುಖ ಧಾರ್ಮಿಕ ವಿಧಿಯಾದ ಅರ್ಘ್ಯ ಪ್ರದಾನವು ಉಡುಪಿಯ ಶ್ರೀಕೃಷ್ಣ ಮಠದಲ್ಲಿ ತಡರಾತ್ರಿ ಭಕ್ತಿಪೂರ್ವಕವಾಗಿ ನೆರವೇರಿತು. ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದ ಧಾರ್ಮಿಕ ವಿಧಿ ಮಠದ ಪರಿಸರದಲ್ಲಿ ವಿಶೇಷ ಭಕ್ತಿಯ ವಾತಾವರಣ ಸೃಷ್ಟಿಸಿತು. ಪರ್ಯಾಯ ಶ್ರೀ ಶೀರೂರು ಮಠದ ಪರ್ಯಾಯ ಪೀಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಹಾಗೂ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಶ್ರೀಕೃಷ್ಣನಿಗೆ ವಿಶೇಷವಾಗಿ ಅರ್ಘ್ಯ ಪ್ರದಾನ ಮಾಡಿದರು. ಬಳಿಕ ನೂರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಕೃಷ್ಣನಿಗೆ ಅರ್ಘ್ಯ […]

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆ.5ರಂದು ಮಂಗಳೂರಿನ ಹಲವೆಡೆ ವಾಹನ ಸಂಚಾರ ಬದಲಾವಣೆ; ಪರ್ಯಾಯ ಮಾರ್ಗ ಬಳಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಸೂಚನೆ.!

ಮಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆ.5ರಂದು ಮಂಗಳೂರು ನಗರದ ವಿವಿಧೆಡೆ ಮೊಸರುಕುಡಿಕೆ ಕಾರ್ಯಕ್ರಮಗಳು ಹಾಗೂ ಮೆರವಣಿಗೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ದಟ್ಟಣೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಾಧ್ಯವಾದಷ್ಟು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ. ವಾಹನ ಸಂಚಾರ ದಟ್ಟಣೆಯಾಗುವ ಸ್ಥಳಗಳು ಹಾಗೂ ಪರ್ಯಾಯ ಮಾರ್ಗಗಳ ವಿವರ: 1. ತೊಕ್ಕೊಟ್ಟು ಒಳಪೇಟೆ ಮೊಸರುಕುಡಿಕೆ: ರಾಷ್ಟ್ರೀಯ ಹೆದ್ದಾರಿ-66ರಲ್ಲಿ ತೊಕ್ಕೊಟ್ಟು ಜಂಕ್ಷನ್ ನಿಂದ ಕೊಲ್ಯ ಜಂಕ್ಷನ್ ವರೆಗೆ ಹಾಗೂ […]

ಉಡುಪಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 16 ಶಿಕ್ಷಕರ ಆಯ್ಕೆ

ಉಡುಪಿ: ಶಾಲಾ ಶಿಕ್ಷಣ ಇಲಾಖೆಯಿಂದ ನೀಡಲಾಗುವ 2026ನೇ ಸಾಲಿನ ಉಡುಪಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಜಿಲ್ಲೆಯ ವಿವಿಧ ತಾಲೂಕುಗಳ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 16ಶಿಕ್ಷಕರು ಆಯ್ಕೆಯಾಗಿದ್ದಾರೆ.ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬೈಂದೂರು ತಾಲೂಕಿನ ಸಾಲಿಮಕ್ಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಗಣೇಶ್, ಬ್ರಹ್ಮಾವರ ತಾಲೂಕಿನ ಆಲಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ರವಿ, ಕುಂದಾಪುರ ತಾಲೂಕಿನ ಅಲ್ಪಾಡಿ ಮೂರುಕೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಉಷಾಕುಮಾರಿ, ಉಡುಪಿ ತಾಲೂಕಿನ ವಳಕಾಡು ಸರ್ಕಾರಿ […]

ಹೆಬ್ರಿ: ನಿವೃತ್ತ ಪೋಸ್ಟ್ ಮಾಸ್ಟರ್ ನಾಪತ್ತೆ

ಉಡುಪಿ ಸೆಪ್ಟಂಬರ್ 04: ಹೆಬ್ರಿ ತಾಲೂಕು ಶೇಡಿಮನೆ ಗ್ರಾಮ ಅಗಳಿಬೈಲು ನಿವಾಸಿ ಸುರತ್ ಕುಮಾರ್ ಶೆಟ್ಟಿ (64) ಎಂಬ ವ್ಯಕ್ತಿಯು ನಿವೃತ್ತ ಪೋಸ್ಟ್ ಮಾಸ್ಟರ್ ಆಗಿದ್ದು, ಎಂದಿನAತೆ ಆಗಸ್ಟ್ 29 ರಂದು ಬೆಳಗ್ಗೆ 7 ಗಂಟೆಯ ಸುಮಾರಿಗೆ ವಾಕಿಂಗ್‌ಗೆ ಹೋದವರು ಈವರೆಗೂ ಮನೆಗೆ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.5 ಅಡಿ 4 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ಗೋಧಿ ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಅಮಾಸೆಬೈಲು […]