ಕೊಳ ಹಾಗೂ ವಡಭಾಂಡೇಶ್ವರ ವಾರ್ಡ್‌ಗಳಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್‌ ವಿತರಣೆ

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಕೊಳ ಹಾಗೂ ವಡಭಾಂಡೇಶ್ವರ ವಾರ್ಡ್‌ಗಳಲ್ಲಿ ತಾ.15.3.2023ರಂದು ಸಭೆಯನ್ನು ನಡೆಸಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್‌ ವಿತರಣೆಯನ್ನು ತೊಟ್ಟಂನಲ್ಲಿರುವ ಮಂಜುನಾಥೇಶ್ವರ ಭಜನಾ ಮಂದಿರದ ವಠಾರದಲ್ಲಿ ಮಾಡಲಾಯಿತು. ರಮೇಶ್ ಕಾಂಚನ್ ಅವರು ಸಭೆಯನ್ನುದ್ದೇಶಿಸಿ ಮಾತನಾಡುತ್ತ ಬಿಜೆಪಿ ಸರ್ಕಾರವು ಜನರಿಗೆ ಆಶ್ವಾಸನೆ ನೀಡಿ ಅದರ ತದ್ವಿರುದ್ಧವಾಗಿ ನಡೆಯುತ್ತಿದೆ. ದಿನಬಳಕೆ ವಸ್ತುಗಳ ಮೇಲೆ ಬೆಲೆ ಏರಿಕೆಯಿಂದ ಜನರು ಕಂಗೆಟ್ಟಿದ್ದಾರೆ. ಪೆಟ್ರೋಲ್, ಗ್ಯಾಸ್, ವಿದ್ಯುತ್, ಡಿಸೇಲ್‌ಗಳ ಬೆಲೆ ಏರಿಕೆಯಿಂದ ಜನರಿಗೆ ಜೀವನ ನಡೆಸುವುದು […]

ಬೈಲೂರು: ಮೂಲ‌ ಮಹಿಷಂತಾಯ ಪರಿವಾರ ದೈವಗಳ ಬ್ರಹ್ಮಕಲಶೋತ್ಸವ, ಪುನಃಪ್ರತಿಷ್ಠೆ

ಉಡುಪಿ: ಬೈಲೂರು ಶ್ರೀ ಮಹಿಷಮರ್ದಿನಿ ದೇಗುಲಕ್ಕೆ ಸಂಬಂಧಪಟ್ಟ ಶ್ರೀ ಧೂಮಾವತಿ ದೇವಸ್ಥಾನವನ್ನು ಸುಮಾರು 1.60 ಕೋ.ರೂ. ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡಲಾಗಿದೆ. ಇನ್ನೂ 1 ಕೋ.ರೂ. ಕಾಮಗಾರಿಯನ್ನು ಮುಂದಿನ ದಿನಗಳಲ್ಲಿ ಕೈಗೆತ್ತಿಕೊಳ್ಳಲಾಗುವುದು. ದೈವದ ಎಲ್ಲ ಮೂರ್ತಿಗಳು, ಆಯುಧಗಳನ್ನು ಬೆಳ್ಳಿಯಿಂದಲೇ ಮಾಡಲಾಗಿದೆ. ಮಾ.15 ರಿಂದ 18ರ ವರೆಗೆ ಮೂಲ ಮಹಿಷಂತಾಯ, ಧೂಮಾವತಿ, ಬಂಟ, ಪಂಜುರ್ಲಿ ದೈವಗಳ ನೂತನ ಶಿಲಾಮಯ ಆಲಯದಲ್ಲಿ ಪುನಃಪ್ರತಿಷ್ಠೆ ಬ್ರಹ್ಮಕಲಶೋತ್ಸವ, ಅನ್ನ ಸಂತರ್ಪಣೆ, ನೇಮೋತ್ಸವ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಪತ್ರಿಕಾಗೋಷ್ಠಿಯಲ್ಲಿ […]

ಬೈಂದೂರಿನಲ್ಲಿ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

ಉಡುಪಿ: ಜಿಲ್ಲಾ ಲೋಕಾಯುಕ್ತ ಪೊಲೀಸ್ ವಿಭಾಗದ ವತಿಯಿಂದ ಮಂಗಳವಾರ ಬೈಂದೂರು ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕ ಅಹವಾಲು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪೊಲೀಸ್ ಉಪಾಧೀಕ್ಷಕ ಕೆ. ಸಿ. ಪ್ರಕಾಶ್, ಪೊಲೀಸ್ ನಿರೀಕ್ಷಕ ರಫೀಕ್ ಎಂ., ಬೈಂದೂರು ತಾಲೂಕು ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ, ಭೂ ಮಾಪಕಿ ಶೈಲಜಾ, ಶಿರೂರು ಗ್ರಾಮ ಪಂಚಾಯತ್ ಪಿ.ಡಿ.ಓ ರಾಜೇಂದ್ರ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಾರ್ವಜನಿಕರಿಂದ ಒಟ್ಟು 3 ಅರ್ಜಿಗಳು ಸ್ವೀಕೃತವಾಗಿದ್ದು, ಅವುಗಳಲ್ಲಿ 1 ಅರ್ಜಿಯನ್ನು ಸ್ಥಳದಲ್ಲಿ ಇತ್ಯರ್ಥಪಡಿಸಿ, 2 ಅರ್ಜಿಗಳಲ್ಲಿ ಪ್ರಪತ್ರ […]

ಪ್ರತಿಯೊಬ್ಬರು ಗ್ರಾಹಕರ ಹಕ್ಕುಗಳನ್ನು ತಿಳಿದುಕೊಳ್ಳುವುದು ಮುಖ್ಯ: ನ್ಯಾ. ಶರ್ಮಿಳಾ ಎಸ್

ಉಡುಪಿ: ಸಮಾಜದ ಪ್ರತಿಯೊಬ್ಬ ಪ್ರಜೆಯೂ ಗ್ರಾಹಕರ ಹಕ್ಕುಗಳನ್ನು ತಿಳಿದುಕೊಳ್ಳುವುದು ಮುಖ್ಯ. ಪ್ರಪಂಚದಾದ್ಯಂತ ಇರುವ ವಸ್ತುಗಳು, ಸರಕುಗಳು ಮತ್ತು ಸೇವೆಗಳ ಮೌಲ್ಯ, ಸಮಗ್ರತೆ, ವೆಚ್ಚ ಹಾಗೂ ಅವುಗಳ ಗುಣಮಟ್ಟದ ಬಗ್ಗೆ ತಿಳಿದುಕೊಳ್ಳುವ ಉದ್ದೇಶದಿಂದ ಈ ದಿನಾಚರಣೆಯನ್ನು ಆಚರಿಸಲಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್ ಹೇಳಿದರು. ಅವರು ನಗರದ ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ […]

5, 8ನೇ ತರಗತಿ ಬೋರ್ಡ್‌ ಪರೀಕ್ಷೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌

ಬೆಂಗಳೂರು: 5 ಮತ್ತು 8ನೇ ತರಗತಿ ಬೋರ್ಡ್‌ ಪರೀಕ್ಷೆ ನಡೆಸಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. 10 ದಿನಗಳ ಬಳಿಕ ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದೆ.ಬೋರ್ಡ್‌ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಏಕಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದ್ದು, ಬೋರ್ಡ್‌ ಪರೀಕ್ಷೆ ನಡೆಸಲು ಆದೇಶ ಹೊರಡಿಸಿದೆ.ಮಾ.27 ನೇ ತಾರೀಖಿನಿಂದ ಪರೀಕ್ಷೆ ಪ್ರಾರಂಭಿಸಬೇಕು. ಆದರೆ ಯಾವುದೇ ವಿದ್ಯಾರ್ಥಿಗಳನ್ನು ಫೇಲ್ ಮಾಡುವಂತಿಲ್ಲ ಎಂದು ಸೂಚಿಸಿದೆ.