ಉಡುಪಿ: ಪಡಿತರ ಅಕ್ಕಿ ಚೀಲ ದಾಸ್ತಾನು ವಿಚಾರದಲ್ಲಿ ಬೆದರಿಕೆ: ಕಾಂಗ್ರೆಸ್ ಮುಖಂಡ ನಾಗೇಂದ್ರ ಪುತ್ರನ್ ಸಹಿತ ಮೂವರ ಬಂಧನ

ಉಡುಪಿ: ಪಡಿತರ ಅಕ್ಕಿ ಚೀಲಗಳನ್ನು ಮನೆಯ ಅಂಗಳದಲ್ಲಿ ದಾಸ್ತಾನು ಮಾಡಿರುವುದಾಗಿ ಆರೋಪಿಸಿ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಗೂ ಸುಲಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕೋಟ ಪೊಲೀಸರು ಮೈಸೂರು ನಗರದಲ್ಲಿ ಬಂಧಿಸಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ಆರೋಪಿಗಳಾದ ನಾಗೇಂದ್ರ ಪುತ್ರನ್ ಅಲಿಯಾಸ್ ನಾಗೇಂದ್ರ ಕೆ.ಕೆ. (37) ಹಾಗೂ ಪಿ. ಸುಮಂತ್ ಕುಂದರ್ (40) ಅವರನ್ನು ಸೆ.2ರಂದು ಮೈಸೂರು ಅರಮನೆ ಎದುರಿನ ವಸ್ತು ಪ್ರದರ್ಶನ ಮೈದಾನದ ಬಳಿ ಬಂಧಿಸಲಾಗಿದೆ. […]
ಕುಂದಾಪುರ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಕಾಲೇಜಿನ ಬಾಲಕ-ಬಾಲಕಿಯರ ತಂಡಕ್ಕೆ ಪ್ರಥಮ ಸ್ಥಾನ.

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಸುಜ್ಞಾನ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಬಾಲಕ – ಬಾಲಕಿಯರ ಥ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪಿಯು ಕಾಲೇಜಿನ ಬಾಲಕ – ಬಾಲಕಿಯರ ಉಭಯ ತಂಡಗಳು ದಿಗ್ವಿಜಯ ಸಾಧಿಸಿ ಚಾಂಪಿಯನ್ ಪಟ್ಟವನ್ನು ಮೂಡಿಗೇರಿಕೊಂಡು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಅರ್ಹತೆ ಪಡೆದಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್, ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ ಕಾಲೇಜಿನ ದೈಹಿಕ […]
ಸರ್ಕಾರೇತರ ವಸತಿ ನಿಲಯಗಳ ಶಾಲೆ/ಕಾಲೇಜುಗಳ ನೋಂದಣಿ: ಅರ್ಜಿ ಆಹ್ವಾನ

ಉಡುಪಿ: ಬಾಲ ನ್ಯಾಯ ಕಾಯ್ದೆಯನ್ವಯ ನೋಂದಣಿಯಾಗಿರುವ ಸಂಸ್ಥೆ/ವಸತಿ ನಿಲಯಗಳನ್ನು ಹೊರತುಪಡಿಸಿ 6 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರೇತರ ಸಂಸ್ಥೆಗಳು, ನಾಗರಿಕ ಸಮಾಜ ಸಂಸ್ಥೆಗಳು, ಟ್ರಸ್ಟ್, ಧಾರ್ಮಿಕ, ಖಾಸಗಿ, ವೈಯಕ್ತಿಕವಾಗಿ ನಡೆಸಲ್ಪಡುವ ಯಾವುದೇ ಔಪಚಾರಿಕ, ಅನೌಪಚಾರಿಕ ಶೈಕ್ಷಣಿಕ ವಸತಿ ನಿಲಯ, ವಸತಿ ಶಾಲೆ, ಕಾಲೇಜುಗಳನ್ನು ಕಡ್ಡಾಯವಾಗಿ ನೋಂದಾಯಿಸಬೇಕಾಗಿದ್ದು, ಅರ್ಜಿ ನಮೂನೆಗಳನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಇವರಿಂದ ಪಡೆದು ಸೆಪ್ಟೆಂಬರ್ 4 ರ ಒಳಗಾಗಿ ಭರ್ತಿ ಮಾಡಿ ಸಲ್ಲಿಸಬಹುದಾಗಿದೆ. ಅರ್ಜಿ […]
ಶ್ರೀಕೃಷ್ಣ ಜನ್ಮಾಷ್ಟಮಿ, ವಿಟ್ಲಪಿಂಡಿ ಸಂಭ್ರಮಕ್ಕೆ ಸಜ್ಜಾದ ಉಡುಪಿ: ಹುಲಿವೇಷ, ಮಲ್ಲಯುದ್ಧ ಪ್ರಮುಖ ಆಕರ್ಷಣೆ

ಉಡುಪಿ: ಕೃಷ್ಣನ ಹುಟ್ಟುಹಬ್ಬದ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಕೃಷ್ಣನ ನಾಡು ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ವೈಭವಕ್ಕೆ ಸಜ್ಜಾಗುತ್ತಿದೆ. ಶ್ರೀಕೃಷ್ಣ ಮಠದ ರಥಬೀದಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಗುರ್ಜಿ ಕಂಬಗಳ ಅಳವಡಿಕೆ, ಗೋಪುರ ನಿರ್ಮಾಣ ಸೇರಿದಂತೆ ವಿವಿಧ ಅಲಂಕಾರ ಕಾರ್ಯಗಳು ಭರದಿಂದ ಸಾಗುತ್ತಿವೆ. ಶೀರೂರು ಮಠದ ಪರ್ಯಾಯದಲ್ಲಿ ನಡೆಯಲಿರುವ ಈ ಬಾರಿಯ ಕೃಷ್ಣೋತ್ಸವದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜತೆಗೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಆದ್ಯತೆ ನೀಡಲಾಗಿದೆ. ಹುಲಿವೇಷ ಸ್ಪರ್ಧೆ, ಮಲ್ಲಯುದ್ಧ ಪ್ರದರ್ಶನ, ಸಂಗೀತ ಕಾರ್ಯಕ್ರಮ ಸೇರಿದಂತೆ ಹಲವು […]
ಕ್ರೈಸ್ಟ್ ಕಿಂಗ್: ಕ್ರಿಕೆಟ್ನಲ್ಲಿ ಪ್ರೌಢಶಾಲಾ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಹಾಗೂ ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆ, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ವಿಭಾಗದ 17ರ ವಯೋಮಿತಿಯ ಕ್ರಿಕೆಟ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯು ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ಒಂಬತ್ತನೇ ತರಗತಿಯ ವಿನೀತ್ ಪೂಜಾರಿ, ದಕ್ಷ್ ಶೆಟ್ಟಿ, ಕೌಶಿಕ್ ಶೆಟ್ಟಿ, ಏಕಾಂಶ್ ಕೋಟ್ಯಾನ್, ತನ್ಮಯ್ ಶೆಟ್ಟಿ, ರಿಶಾನ್ ಫೆರ್ನಾಂಡಿಸ್, […]