ಉಡುಪಿ:ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ವಿಜ್ಞಾನ ವಿಷಯಗಳ ಬರವಣಿಗೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳ ಮೇಲೆ ಕನ್ನಡದಲ್ಲಿ 2023ರ ಜನವರಿಯಿಂದ 2025ರ ಡಿಸೆಂಬರ್ ತಿಂಗಳಿನೊಳಗೆ ಒಳಗೆ ಪ್ರಕಟವಾಗುವ ಪುಸ್ತಕಗಳ ಲೇಖಕರಿಂದ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2026ರ ಜನವರಿ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಳಿಗಾಗಿ ಅಕಾಡೆಮಿ ವೆಬ್ಸೈಟ್ – https://kstcademy.in-ಅನ್ನು ಸಂಪರ್ಕಿಸಬಹುದು ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.
ಉಡುಪಿ:ವೃದ್ಧ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಅಂಬಾಗಿಲು ಕಕ್ಕುಂಜೆ ನಿವಾಸಿ ಶಂಭು ಪೂಜಾರಿ (80) ಎಂಬ ವ್ಯಕ್ತಿಯು ಅಕ್ಟೋಬರ್ 9 ರಂದು ಮಧ್ಯಾಹ್ನ 1.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಪೂರ ಶರೀರ, ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪೊಲೀಸ್ ನಿರೀಕ್ಷಕರು […]
ಕಾರ್ಕಳ : ಮಂಜುನಾಥ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲಲಿತಾ ಕಲಾ ಸಂಘ, ಯಕ್ಷಗಾನ ಸಂಘ, ಶ್ರೇಷ್ಠ ಕಲಾ, ಚೆಂಡೆ ತರಗತಿಗಳ ಉದ್ಘಾಟನೆ

ಕಾರ್ಕಳ : ಮಂಜುನಾಥ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲಲಿತಾ ಕಲಾ ಸಂಘ, ಯಕ್ಷಗಾನ ಸಂಘ, ಶ್ರೇಷ್ಠ ಕಲಾ ಹಾಗೂ ಚೆಂಡೆ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ಅ.16 ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮುಖ್ಯ ಶ್ರೀ ಮಹಾಗಣಪತಿ ಚಂಡೆ ವರ್ಕ್ಸ್ ಕಾರ್ಕಳ ಇದರ ಮಾಲಕರಾದ ಮಂಜುನಾಥ ಭಾವಿ ಅವರು, ಯಕ್ಷಗಾನ ಹಾಗೂ ಚಂಡೆ ನಮ್ಮ ಸಂಸ್ಕೃತಿಯ ಭಾಗ ಎಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾರ್ಕಳ ಭುವನೇಂದ್ರ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಪದ್ಮನಾಭ ಗೌಡ ಮಾತನಾಡಿ, […]
ಉಡುಪಿ: ಅಂಬಲಪಾಡಿಯಲ್ಲಿ ಯುವ ಪ್ರೇಮಿಗಳು ನೇಣು ಬಿಗಿದು ಆತ್ಮಹತ್ಯೆ.

ಉಡುಪಿ: ಪ್ರೇಮಿಗಳಿಬ್ಬರು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಬಲಪಾಡಿಯ ಕಾಳಿಕಾಂಬ ನಗರದ ಲೇಬರ್ ಕಾಲನಿಯಲ್ಲಿ ಇಂದು ರಾತ್ರಿ ವೇಳೆ ನಡೆದಿದೆ.ಮೃತರನ್ನು ಪವಿತ್ರ (17) ಹಾಗೂ ಮಲ್ಲೇಶ (23) ಎಂದು ಗುರುತಿಸಲಾಗಿದೆ.ಪವಿತ್ರ ಸರಕಾರಿ ಮಹಿಳಾ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಈಕೆಯ ತಾಯಿ ರಾಯಚೂರಿಗೆ ತೆರಳಿದ್ದ ಮೇಲೆ ಮಲ್ಲೇಶ ಮನೆಗೆ ಬಂದಿದ್ದ ಎನ್ನಲಾಗಿದೆ. ಬಳಿಕ ಇವರಿಬ್ಬರೂ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಉಡುಪಿ ನಗರ ಪೊಲೀಸರು ಆಗಮಿಸಿ ಪರಿಶೀಲನೆ […]
ಕಾರವಾರ: ಮೀನುಗಾರಿಕೆ ವೇಳೆ ಯುವಕನ ಹೊಟ್ಟೆಗೆ ಚೂಪು ಮೂತಿಯ ಕಾಂಡೆ ಮೀನು ಚುಚ್ಚಿ ಮೃತ್ಯು

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಯುವಕನಿಗೆ ಚೂಪು ಮೂತಿಯ ಮೀನು ನೀರಿನಿಂದ ಜಿಗಿದು ಬಂದು ಹೊಟ್ಟೆಗೆ ಚುಚ್ಚಿದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾರವಾರದಲ್ಲಿ ಸಂಭವಿಸಿದೆ. ಕಾರವಾರದ ಮಾಜಾಳಿಯ ದಾಂಡೇಭಾಗದ ಅಕ್ಷಯ್ ಅನಿಲ್ ಮಾಜಾಳಿಕರ್ ಮೀನಿನಿಂದಲೇ ಬಲಿ ಆಗಿರುವ ನತದೃಷ್ಟ ಯುವಕ. ಅರಬ್ಬಿ ಸಮುದ್ರದಲ್ಲಿ ಮತ್ಸ್ಯ ಬೇಟೆಗೆ ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ.ಅಕ್ಟೋಬರ್ 14ರಂದು ಅಕ್ಷಯ್, ಆಳ ಸಮುದ್ರದಲ್ಲಿ ಮತ್ಸ್ಯ ಶಿಕಾರಿಗೆ ತೆರಳಿದ್ದ. ದೋಣಿಯಲ್ಲಿದ್ದಾಗಲೇ 8ರಿಂದ 10 ಇಂಚು ಉದ್ದದ ಚೂಪು ಮೂತಿಯ ಕಾಂಡೆ ಮೀನು, […]