ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆಗೆ ನಗರಸಭೆ ಮನವಿ

ಉಡುಪಿ: ರಾಸಾಯನಿಕಯುಕ್ತ ಗಣೇಶನ ಮೂರ್ತಿಯನ್ನು ನದಿಗಳಲ್ಲಿ ಮತ್ತು ಇತರೆ ನೀರಿನ ಮೂಲದಲ್ಲಿ ವಿಸರ್ಜನೆ ಮಾಡುವುದರಿಂದ ನೀರಿನಲ್ಲಿರುವ ಜಲಚರಗಳಿಗೆ ಹಾನಿಯಾಗುವುದರ ಜೊತೆಗೆ ಜಲ ಮಾಲಿನ್ಯಕ್ಕೂ ಕಾರಣವಾಗುತ್ತದೆ. ಆದ್ದರಿಂದ ಜಲ ಸಂಪನ್ಮೂಲವನ್ನು ರಕ್ಷಿಸಲು ರಾಸಾಯನಿಕಯುಕ್ತ ಗಣೇಶನ ಮೂರ್ತಿಯನ್ನು ಬಳಸದೇ ಮಣ್ಣಿನ ಮೂರ್ತಿಯನ್ನು ಬಳಸಿ ಹಾಗೂ ನಿರ್ಧಿಷ್ಟ ಸ್ಥಳಗಳಲ್ಲಿಯೇ ಮೂರ್ತಿಯನ್ನು ವಿಸರ್ಜನೆ ಮಾಡುವುದರೊಂದಿಗೆ ಪರಿಸರ ಸ್ನೇಹಿ ಗೌರಿ – ಗಣೇಶ ಹಬ್ಬವನ್ನು ಆಚರಿಸುವಂತೆ ನಗರಸಭೆ ಮನವಿ ಮಾಡಿದೆ. ರಾಸಾಯನಿಕಯುಕ್ತ ಗಣೇಶನ ಮೂರ್ತಿಯನ್ನು ಬಳಸದೇ ಮಣ್ಣಿನಿಂದ ತಯಾರಿಸಿದ ಗಣೇಶನ ಮೂರ್ತಿಯನ್ನೇ ಬಳಕೆ ಮಾಡಬೇಕು. […]
ವ್ಯಕ್ತಿ ನಾಪತ್ತೆ

ಉಡುಪಿ: ಕಾಪು ತಾಲೂಕು ಪಡುಬಿದ್ರಿ ಬೇಂಗ್ರೆ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸಮಾಡಿಕೊಂಡಿದ್ದ ಕೂಲಿ ಕಾರ್ಮಿಕ ಯಮನಪ್ಪ ಮಾದರ (40) ಎಂಬ ವ್ಯಕ್ತಿಯು ಆಗಸ್ಟ್ 9 ರಂದು ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋದವರು ವಾಪಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಎಣ್ಣೆ ಕಪ್ಪು ಮೈ ಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು […]
ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿಯವರ ಸ್ಮರಣಾರ್ಥ; ಹೇಮಾ ಪ್ರದೀಪ್ ಶೆಟ್ಟಿಯವರಿಗೆ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಹೆಬ್ರಿ: ನಿವೃತ್ತ ಶಿಕ್ಷಕ ಹಿರಿಯ ಸಾಹಿತಿ, ಯಕ್ಷಗಾನ ಕಲಾವಿದ, ಹರಿದಾಸ, ಜಿನದಾಸ, ತಾಳಮದ್ದಳೆ ಅರ್ಥದಾರಿ, ನಾಟಕಕಾರ, ಪ್ರಸಂಗಕರ್ತ ಕೀರ್ತಿಶೇಷ ಅಂಬಾತನಯ ಮುದ್ರಾಡಿಯವರ ಸ್ಮರಣಾರ್ಥ ಚಾಣಕ್ಯ ಎಜ್ಯುಕೇಶನ್ ಮತ್ತು ಕಲ್ಚರಲ್ ಅಕಾಡೆಮಿ ಹೆಬ್ರಿ ಇದರ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡಲಾಗುವ ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಈ ಬಾರಿ ಹೆಬ್ರಿ ಎಸ್. ಆರ್. ಪಬ್ಲಿಕ್ ಸ್ಕೂಲ್ ನ ಶಿಕ್ಷಕಿ ಹೇಮಾ ಪ್ರದೀಪ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಮಾಂಬೆಟ್ಟು ಗುಲಾಬಿ ಶೆಟ್ಟಿ ಮತ್ತು ಸಂಜೀವ ಶೆಟ್ಟಿ […]
ಕೂಲಿ ಕಾರ್ಮಿಕ ನಾಪತ್ತೆ

ಉಡುಪಿ: ಮೂಲತಃ ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕು ಮುದ್ಗಲ್ ಗ್ರಾಮಾಂತರ ಮೆಗಳ ಪೇಟೆ ನಿವಾಸಿ ನಿಂಗಪ್ಪ (44) ಎಂಬ ವ್ಯಕ್ತಿಯು ಪ್ರಸ್ತುತ ಕೂಲಿ ಕೆಲಸ ಮಾಡಿಕೊಂಡು ವಾರಂಬಳ್ಳಿ ಗ್ರಾಮದ ಎಸ್.ಎಂ.ಎಸ್ ಶಾಲೆ ಬಳಿ ವಾಸಮಾಡಿಕೊಂಡಿದ್ದು, ಮೇ 24 ರಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ತನ್ನ ಹೆಂಡತಿಗೆ ಕರೆ ಮಾಡಿ ಮಾತನಾಡಿದವರು ನಂತರದಿoದ ಕರೆ ಮಾಡಿದರೂ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿರುತ್ತಾರೆ. 5 ಅಡಿ 8 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ಸಣಕಲು ಶರೀರ ಹೊಂದಿದ್ದು, ಕನ್ನಡ ಭಾಷೆ […]
ವಿಟ್ಲಪಿಂಡಿ, ಕೃಷ್ಣಾಷ್ಟಮಿಗೆ ಬಿಗಿ ಪೊಲೀಸ್ ಬಂದೋಬಸ್ತ್

ಉಡುಪಿ: ಉಡುಪಿ ನಗರದ ಪ್ರಸಿದ್ಧ ವಿಟ್ಲಪಿಂಡಿ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಾಪಾಡಲು ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಮಹೋತ್ಸವದ ಬಂದೋಬಸ್ತ್ಗಾಗಿ ಒಬ್ಬರು ಪೊಲೀಸ್ ಅಧೀಕ್ಷಕರು, ಒಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಇಬ್ಬರು ಡಿವೈಎಸ್ಪಿಗಳು, ಆರು ಪೊಲೀಸ್ ಇನ್ಸ್ಪೆಕ್ಟರ್ಗಳು, 25 ಪೊಲೀಸ್ ಸಬ್ಇನ್ಸ್ಪೆಕ್ಟರ್ಗಳು ಹಾಗೂ 35 ಸಹಾಯಕ ಸಬ್ಇನ್ಸ್ಪೆಕ್ಟರ್ಗಳನ್ನು ನಿಯೋಜಿಸಲಾಗಿದೆ. ಅಲ್ಲದೆ, 186 ಹೆಡ್ ಕಾನ್ಸ್ಟೆಬಲ್, ಪೊಲೀಸ್ ಕಾನ್ಸ್ಟೆಬಲ್ […]