ಸರ್ಕಾರೇತರ ವಸತಿ ನಿಲಯಗಳ ಶಾಲೆ/ಕಾಲೇಜುಗಳ ನೋಂದಣಿ: ಅರ್ಜಿ ಆಹ್ವಾನ

ಉಡುಪಿ: ಬಾಲ ನ್ಯಾಯ ಕಾಯ್ದೆಯನ್ವಯ ನೋಂದಣಿಯಾಗಿರುವ ಸಂಸ್ಥೆ/ವಸತಿ ನಿಲಯಗಳನ್ನು ಹೊರತುಪಡಿಸಿ 6 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರೇತರ ಸಂಸ್ಥೆಗಳು, ನಾಗರಿಕ ಸಮಾಜ ಸಂಸ್ಥೆಗಳು, ಟ್ರಸ್ಟ್, ಧಾರ್ಮಿಕ, ಖಾಸಗಿ, ವೈಯಕ್ತಿಕವಾಗಿ ನಡೆಸಲ್ಪಡುವ ಯಾವುದೇ ಔಪಚಾರಿಕ, ಅನೌಪಚಾರಿಕ ಶೈಕ್ಷಣಿಕ ವಸತಿ ನಿಲಯ, ವಸತಿ ಶಾಲೆ, ಕಾಲೇಜುಗಳನ್ನು ಕಡ್ಡಾಯವಾಗಿ ನೋಂದಾಯಿಸಬೇಕಾಗಿದ್ದು, ಅರ್ಜಿ ನಮೂನೆಗಳನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಇವರಿಂದ ಪಡೆದು ಸೆಪ್ಟೆಂಬರ್ 4 ರ ಒಳಗಾಗಿ ಭರ್ತಿ ಮಾಡಿ ಸಲ್ಲಿಸಬಹುದಾಗಿದೆ. ಅರ್ಜಿ […]

ಶ್ರೀಕೃಷ್ಣ ಜನ್ಮಾಷ್ಟಮಿ, ವಿಟ್ಲಪಿಂಡಿ ಸಂಭ್ರಮಕ್ಕೆ ಸಜ್ಜಾದ ಉಡುಪಿ: ಹುಲಿವೇಷ, ಮಲ್ಲಯುದ್ಧ ಪ್ರಮುಖ ಆಕರ್ಷಣೆ

ಉಡುಪಿ: ಕೃಷ್ಣನ ಹುಟ್ಟುಹಬ್ಬದ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಕೃಷ್ಣನ ನಾಡು ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ವೈಭವಕ್ಕೆ ಸಜ್ಜಾಗುತ್ತಿದೆ. ಶ್ರೀಕೃಷ್ಣ ಮಠದ ರಥಬೀದಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಗುರ್ಜಿ ಕಂಬಗಳ ಅಳವಡಿಕೆ, ಗೋಪುರ ನಿರ್ಮಾಣ ಸೇರಿದಂತೆ ವಿವಿಧ ಅಲಂಕಾರ ಕಾರ್ಯಗಳು ಭರದಿಂದ ಸಾಗುತ್ತಿವೆ. ಶೀರೂರು ಮಠದ ಪರ್ಯಾಯದಲ್ಲಿ ನಡೆಯಲಿರುವ ಈ ಬಾರಿಯ ಕೃಷ್ಣೋತ್ಸವದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜತೆಗೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಆದ್ಯತೆ ನೀಡಲಾಗಿದೆ. ಹುಲಿವೇಷ ಸ್ಪರ್ಧೆ, ಮಲ್ಲಯುದ್ಧ ಪ್ರದರ್ಶನ, ಸಂಗೀತ ಕಾರ್ಯಕ್ರಮ ಸೇರಿದಂತೆ ಹಲವು […]

ಕ್ರೈಸ್ಟ್ ಕಿಂಗ್: ಕ್ರಿಕೆಟ್‍ನಲ್ಲಿ ಪ್ರೌಢಶಾಲಾ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಹಾಗೂ ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆ, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ವಿಭಾಗದ 17ರ ವಯೋಮಿತಿಯ ಕ್ರಿಕೆಟ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯು ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ಒಂಬತ್ತನೇ ತರಗತಿಯ ವಿನೀತ್ ಪೂಜಾರಿ, ದಕ್ಷ್ ಶೆಟ್ಟಿ, ಕೌಶಿಕ್ ಶೆಟ್ಟಿ, ಏಕಾಂಶ್ ಕೋಟ್ಯಾನ್, ತನ್ಮಯ್ ಶೆಟ್ಟಿ, ರಿಶಾನ್ ಫೆರ್ನಾಂಡಿಸ್, […]

ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆಗೆ ನಗರಸಭೆ ಮನವಿ

ಉಡುಪಿ: ರಾಸಾಯನಿಕಯುಕ್ತ ಗಣೇಶನ ಮೂರ್ತಿಯನ್ನು ನದಿಗಳಲ್ಲಿ ಮತ್ತು ಇತರೆ ನೀರಿನ ಮೂಲದಲ್ಲಿ ವಿಸರ್ಜನೆ ಮಾಡುವುದರಿಂದ ನೀರಿನಲ್ಲಿರುವ ಜಲಚರಗಳಿಗೆ ಹಾನಿಯಾಗುವುದರ ಜೊತೆಗೆ ಜಲ ಮಾಲಿನ್ಯಕ್ಕೂ ಕಾರಣವಾಗುತ್ತದೆ. ಆದ್ದರಿಂದ ಜಲ ಸಂಪನ್ಮೂಲವನ್ನು ರಕ್ಷಿಸಲು ರಾಸಾಯನಿಕಯುಕ್ತ ಗಣೇಶನ ಮೂರ್ತಿಯನ್ನು ಬಳಸದೇ ಮಣ್ಣಿನ ಮೂರ್ತಿಯನ್ನು ಬಳಸಿ ಹಾಗೂ ನಿರ್ಧಿಷ್ಟ ಸ್ಥಳಗಳಲ್ಲಿಯೇ ಮೂರ್ತಿಯನ್ನು ವಿಸರ್ಜನೆ ಮಾಡುವುದರೊಂದಿಗೆ ಪರಿಸರ ಸ್ನೇಹಿ ಗೌರಿ – ಗಣೇಶ ಹಬ್ಬವನ್ನು ಆಚರಿಸುವಂತೆ ನಗರಸಭೆ ಮನವಿ ಮಾಡಿದೆ. ರಾಸಾಯನಿಕಯುಕ್ತ ಗಣೇಶನ ಮೂರ್ತಿಯನ್ನು ಬಳಸದೇ ಮಣ್ಣಿನಿಂದ ತಯಾರಿಸಿದ ಗಣೇಶನ ಮೂರ್ತಿಯನ್ನೇ ಬಳಕೆ ಮಾಡಬೇಕು. […]

ವ್ಯಕ್ತಿ ನಾಪತ್ತೆ

ಉಡುಪಿ: ಕಾಪು ತಾಲೂಕು ಪಡುಬಿದ್ರಿ ಬೇಂಗ್ರೆ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸಮಾಡಿಕೊಂಡಿದ್ದ ಕೂಲಿ ಕಾರ್ಮಿಕ ಯಮನಪ್ಪ ಮಾದರ (40) ಎಂಬ ವ್ಯಕ್ತಿಯು ಆಗಸ್ಟ್ 9 ರಂದು ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋದವರು ವಾಪಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಎಣ್ಣೆ ಕಪ್ಪು ಮೈ ಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು […]