ಉಡುಪಿ:ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಹಾಯವಾಣಿ ಆರಂಭ

ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆ.22 ರಂದು ಪ್ರಾರಂಭಿಸಿದ್ದು ಸಮೀಕ್ಷೆ ಕಾರ್ಯವು ಪೂರ್ಣಗೊಳ್ಳದ ಕಾರಣ ಸರ್ಕಾರದ ಆದೇಶದಂತೆ ಅ.18 ರವರೆಗೆ ಸಮೀಕ್ಷೆಕಾರ್ಯವನ್ನು ಮುಂದೂಡಲಾಗಿರುತ್ತದೆ. ಈ ಸಮೀಕ್ಷೆ ಸಮಯದಲ್ಲಿ ಸಮೀಕ್ಷೆದಾರರು ತಮ್ಮ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡದೆ ಬಿಟ್ಟುಹೋದಲ್ಲಿ ರಾಜ್ಯ ಮಟ್ಟದ ಸಹಾಯವಾಣಿ 8050770004, ಜಿಲ್ಲಾ ಮಟ್ಟದ ಸಹಾಯವಾಣಿ 0820-2574881, ಉಡುಪಿ/ಬ್ರಹ್ಮಾವರ/ಕಾಪು ಮಟ್ಟದ ಸಹಾಯವಾಣಿ 0820-2520739, ಬೈಂದೂರು/ಕುಂದಾಪುರ 9972294198, ಕಾರ್ಕಳ-ಹೆಬ್ರಿ 08258-298610ಸಹಾಯವಾಣಿಗೆ ಕಚೇರಿ ಅವಧಿಯಲ್ಲಿ ಕರೆ ಮಾಡಿದಲ್ಲಿ […]
ಉಡುಪಿ: ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ

ಉಡುಪಿ: ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.ಸೋಮವಾರ ರಾತ್ರಿ ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹೆಬ್ರಿಯಲ್ಲಿ ವೈನ್ಸ್ ಶಾಪ್ ನಡೆಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಸುದೀಪ್ ಭಂಡಾರಿಯವರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ಉಡುಪಿ: ವಿದ್ಯುತ್ ಅವಘಡದಲ್ಲಿ ಹೊಲೋ ಬ್ಲಾಕ್ ಫ್ಯಾಕ್ಟರಿ ಮಾಲೀಕ ಮೃತ್ಯು.

ಉಡುಪಿ: ಬೈಲೂರಿನ ಸುನೀತಾ ಹೊಲೋ ಬ್ಲಾಕ್ ಮಾಲೀಕ ಸುನಿಲ್ ಸೋನ್ಸ್ (45) ಅವರು ವಿದ್ಯುತ್ ಅವಘಡದಲ್ಲಿ ಮೃತಪಟ್ಟಿದ್ದಾರೆ. ಸೋಮವಾರ ಸಂಜೆ ಅವಘಡ ಸಂಭವಿಸಿದೆ.ಬೈಲೂರಿನಲ್ಲಿರುವ ಸುನೀತಾ ಹೊಲೋ ಬ್ಲಾಕ್ ನಲ್ಲಿ ಎಂದಿನಂತೆ ಕೆಲಸ ನಿರ್ವಹಿಸುತ್ತಿದ್ದಾಗ ಅವರು ವಿದ್ಯುತ್ ಶಾಕ್ಗೆ ಒಳಗಾಗಿದ್ದರು. ತಕ್ಷಣವೇ ಸ್ಥಳೀಯರು ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಪರೀಕ್ಷಿಸಿದ ವೈದ್ಯರು ಸುನಿಲ್ ಅವರು ಅದಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಮೃತರು ಪತ್ನಿ ಮತ್ತು ಓರ್ವ ಪುತ್ರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಖ್ಯಾತ ಹಾಸ್ಯನಟ ‘ರಾಜು ತಾಳಿಕೋಟೆ’ ಹೃದಯಾಘಾತದಿಂದ ನಿಧನ

ಉಡುಪಿ: ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ (59) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ರಾಜು ತಾಳಿಕೋಟೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ಅವರು, ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತರ ತಾಳಿಕೋಟೆ ನಗರದಲ್ಲಿ ವಾಸವಾಗಿದ್ದರು. ರಾಜು ತಾಳಿಕೋಟೆಯವರು ಮೊದಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟೆ. ಅವರು ಕೇವಲ ನಟನಾಗಿರದೇ ತಾಳಿಕೋಟೆಯ ಪ್ರಸಿದ್ಧ ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲೀಕರಾಗಿದ್ದರು. ಕಳೆದ […]
ಉಡುಪಿ: ಕನಿಷ್ಠ ಕೂಲಿ, ತುಟ್ಟಿಭತ್ಯೆ ಪಾವತಿಸದೆ ಬೀಡಿ ಕಾರ್ಮಿಕರಿಗೆ ವಂಚನೆ

ಉಡುಪಿ: 2018ರಿಂದ 2024 ವರೆಗಿನ 6 ವರ್ಷಗಳ ಬಾಕಿ ಇರುವ ಕನಿಷ್ಠ ಕೂಲಿ, 2024ರಂದು ಅಧಿಸೂಚಿಸಿದ ಕನಿಷ್ಠ ಕೂಲಿ ಮತ್ತು ತುಟ್ಟಿಭತ್ಯೆಯನ್ನು ಬೀಡಿ ಕಾರ್ಮಿಕರಿಗೆ ಪಾವತಿಸುವಂತೆ ಒತ್ತಾಯಿಸಿ ದ.ಕ ಮತ್ತು ಉಡುಪಿ ಜಿಲ್ಲಾ ಬೀಡಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿ ನೇತೃತ್ವದಲ್ಲಿ ಬೀಡಿ ಕಾರ್ಮಿಕರು ಅಂಬಲಪಾಡಿಯ ಭಾರತ್ ಬೀಡಿ ಕಂಪೆನಿ ಎದುರು ಇಂದು ಧರಣಿ ನಡೆಸಿದರು. ಬೀಡಿ ಮಾಲೀಕರು ಕಾರ್ಮಿಕರನ್ನು ವಂಚನೆ ಮಾಡುತ್ತಿದ್ದಾರೆ. ಕಾನೂನುಬದ್ಧ ಸವಲತ್ತುಗಳನ್ನು ನಾಶ ಮಾಡಲು ಹೊರಟಿದ್ದಾರೆ. 2018ರಿಂದ 2024 ರವರೆಗೆ ಆರು ವರ್ಷಗಳ […]