ಉಡುಪಿ: ಕೃಷ್ಣಾಸುರ ವೇಷದಲ್ಲಿ ತಾಯಿ-ಮಗಳು; ಬಡ ಮಕ್ಕಳ ಶಿಕ್ಷಣಕ್ಕೆ ನೆರವು

ಉಡುಪಿ: ಶ್ರೀಕೃಷ್ಣಾಷ್ಟಮಿ ಅಂಗವಾಗಿ ಮಲ್ಪೆ ಲಕ್ಷ್ಮೀನಗರದ ಶ್ರೀ ಸಿದ್ದಿ ಇವೆಂಟ್ಸ್ ವತಿಯಿಂದ ವಿಶೇಷ ಸಾಮಾಜಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದಿವ್ಯ ಸತೀಶ್ ಹಾಗೂ ಅವರ ಎಂಟು ವರ್ಷದ ಪುತ್ರಿ ಸಿದ್ದಿ ಎಸ್. ಕಾಮತ್ ಅವರು ಕೃಷ್ಣಾಸುರ ವೇಷ ಧರಿಸಿ ಸಾರ್ವಜನಿಕರಿಂದ ನೆರವು ಸಂಗ್ರಹಿಸಲಿದ್ದು, ಸಂಗ್ರಹವಾಗುವ ಹಣವನ್ನು ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ವಿನಿಯೋಗಿಸಲು ನಿರ್ಧರಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ದಿವ್ಯ ಸತೀಶ್ ಅವರು, ತಮ್ಮ ಪುತ್ರಿ ಸಿದ್ದಿ ಎಸ್. ಕಾಮತ್ ಪ್ರತಿವರ್ಷ ಶ್ರೀಕೃಷ್ಣಾಷ್ಟಮಿ ಸಂದರ್ಭದಲ್ಲಿ ಶ್ರೀಕೃಷ್ಣನ ವೇಷ […]

ಸ್ಟಿಕರ್ ಅಂಟಿಸುವ ಸವಾಲಿಗೆ ಬಿಜೆಪಿ ತಿರುಗೇಟು; ಸುನಿಲ್ ಕುಮಾರ್ ಕಚೇರಿ ಎದುರು ನೂರಾರು ಕಾರ್ಯಕರ್ತರ ಜಮಾವಣೆ

ಉಡುಪಿ: ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ಕಚೇರಿಗೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ಟಿಕರ್ ಅಂಟಿಸುವುದಾಗಿ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಬುಧವಾರ ಶಾಸಕ ಕಚೇರಿ ಎದುರು ನೂರಾರು ಬಿಜೆಪಿ ಕಾರ್ಯಕರ್ತರು ಜಮಾಯಿಸಿ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಕಚೇರಿಗೆ ನುಗ್ಗದಂತೆ ತಡೆಯುವ ಉದ್ದೇಶದಿಂದ ಬಿಜೆಪಿ ಕಾರ್ಯಕರ್ತರು ಕಚೇರಿ ಆವರಣದಲ್ಲಿ ಜಮಾಯಿಸಿದ್ದರು. ಈ ಸಂದರ್ಭ ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಿಜೆಪಿ ಮುಖಂಡ ಸತೀಶ್ ಶೆಟ್ಟಿ ಮುಟ್ಲಪಾಡಿ […]

ಕಾರ್ಕಳದಲ್ಲಿ ಕಾಂಗ್ರೆಸ್ ಪ್ರತಿಭಟನೆ; ಸುನಿಲ್ ಕುಮಾರ್ ಕಚೇರಿಗೆ ಮುತ್ತಿಗೆ ಯತ್ನ

ಉಡುಪಿ: ಸಚಿವ ನಾಗೇಂದ್ರ ರಾಜೀನಾಮೆ ನೀಡಿರುವ ಬೆಳವಣಿಗೆಗೆ ಪ್ರತಿಕ್ರಿಯೆಯಾಗಿ ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿ, ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿದರು. ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪವನ್ನು ಮುಂದಿಟ್ಟ ಕಾಂಗ್ರೆಸ್ ಕಾರ್ಯಕರ್ತರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸುನಿಲ್ ಕುಮಾರ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಈ ವೇಳೆ ಸುನಿಲ್ ಕುಮಾರ್ ಅವರ ಕಚೇರಿಗೆ […]

ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ.:ವಾರ್ಷಿಕ ಮಹಾಸಭೆ

ಉಡುಪಿ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿಯ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ದಿನಾಂಕ : 29-೦8-2026 ರಂದು ಸoಘದ ಅಧ್ಯಕ್ಷರಾದ ಶ್ರೀ ಅರುಣ ಕುಮಾರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಉಡುಪಿ ಅಜ್ಜರಕಾಡಿನ ಪುರಭವನದಲ್ಲಿ ಜರಗಿತು. ಪ್ರಧಾನ ವ್ಯವಸ್ಥಾಪಕರಾದ ಶ್ರೀ ರಾಜೇಶ್ ಹೆಗ್ಡೆ ಸಂಘದ ೬೮ನೇ ವರ್ಷದ ವಾರ್ಷಿಕ ವರದಿ, ವರದಿಗೆ ತಯಾರಿಸಿದ ಅನುಪಾಲನಾ ವರದಿ, ಆಯ-ವ್ಯಯ ಪಟ್ಟಿ ಹಾಗೂ 2026-27 ನೇ ಸಾಲಿನ ಯೋಜಿತಕಾರ್ಯಕ್ರಮಗಳನ್ನು ಮಂಡಿಸಿದರು. ಹಾಗೂ 2026-27 ನೇ ಸಾಲಿನ ಲೆಕ್ಕ ಪರಿಶೋಧನೆಗೆ ಲೆಕ್ಕ ಪರಿಶೋಧಕರ […]

ಸೆಪ್ಟಂಬರ್ 6 ರಂದು ಕೇರಳ ಸಮಾಜಂ (ರಿ) ವತಿಯಿಂದ ದ್ವೀತಿಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ.

ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ ಅದ್ದೂರಿ  ಓಣಂ ಸಂಭ್ರಮಾಚರಣೆ ಸೆಪ್ಬಂಬರ್  6 ಭಾನುವಾರದಂದು ಅಂಬಾಗಿಲು ಬಳಿಯ ಅಮೃತ್ ಗಾರ್ಡನ್ ಸಭಾಭವನದಲ್ಲಿ ನಡೆಯಲಿದೆ ಎಂದು ಕೇರಳ ಸಮಾಜಂ ಉಡುಪಿ ಇದರ ಅಧ್ಯಕ್ಷರಾದ ಶ್ರೀ ಅರುಣ್ ಕುಮಾರ್ ತಿಳಿಸಿದ್ದಾರೆ. ಕಳೆದ ಬಾರಿ ಮೊದಲ ವರ್ಷದ ಓಣಂ ಸಂಭ್ರಮಾಚರಣೆ ಕಾರ್ಯಕ್ರಮಕ್ಕೆ ಅತ್ಯದ್ಭುತ ಬೆಂಬಲ‌ ಸಿಗುವುದರ ಮೂಲಕ ಯಶಸ್ವಿಯಾಗಿ ನೆರವೇರಿತ್ತು.ಅದೇ ಯಶಸ್ವಿನ ಮುಂದುವರೆದ ಭಾಗವಾಗಿ ಈ ಬಾರಿ‌ ಅದ್ದೂರಿಯಾಗಿ ಓಣಂ ಸಂಭ್ರಮಾಚರಣೆಯನ್ನು ಅಚರಿಸಲು ನಿರ್ಧರಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ‌ […]