ಚಾಲಕನ ಪುತ್ರಿಗೆ ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಸೀಟು; ಆಳ್ವಾಸ್ ಪಿಯು ಶಿಕ್ಷಣದ ದತ್ತು ಯೋಜನೆಯಿಂದ ವೈದ್ಯಕೀಯ ಕನಸು ನನಸು.

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ನೂತನ ಶೈಕ್ಷಣಿಕ ಅಧ್ಯಾಯಕ್ಕೆ ಸಾಕ್ಷಿಯಾಗಿರುವ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆ್ಯಂಡ್ ರಿಸರ್ಚ್ ಸೆಂಟರ್‌ನ (ಎಐಎಂಎಸ್‌ಆರ್‌ಸಿ) ಮೊದಲ ಎಂಬಿಬಿಎಸ್ ಪ್ರವೇಶದ ಹೆಗ್ಗಳಿಕೆಗೆ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸ್ನೇಹಾ ಪಾತ್ರರಾಗಿದ್ದಾರೆ. ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಪ್ರವೇಶ ಪಡೆದಿರುವ ಸ್ನೇಹಾ, ಸೀಮಿತ ಆರ್ಥಿಕ ಹಿನ್ನೆಲೆಯ ಕುಟುಂಬದಿಂದ ಬಂದು ಶೈಕ್ಷಣಿಕ ಪರಿಶ್ರಮ, ಅವಕಾಶ ಹಾಗೂ ಸೂಕ್ತ ಮಾರ್ಗದರ್ಶನದ ಮೂಲಕ ವೈದ್ಯಕೀಯ ಶಿಕ್ಷಣದ ಕನಸನ್ನು ನನಸಾಗಿಸಿಕೊಂಡಿದ್ದಾರೆ.ಕಾರ್ಕಳದ ಕುಂಟಲ್ಪಾಡಿಯ ನಿವಾಸಿಯಾಗಿರುವ ಸ್ನೇಹಾ, ತನ್ನ ಎಸ್‌ಎಸ್‌ಎಲ್‌ಸಿಯನ್ನು ಜೆಸೀಸ್ […]

ಕೌಶಲ್ಯ ತರಬೇತಿಗೆ MSDCಯಲ್ಲಿದೆ ಭರ್ಜರಿ ಅವಕಾಶ; ವಿವಿಧ ಉದ್ಯೋಗಾಧಾರಿತ ಕೋರ್ಸ್‌ಗಳಿಗೆ ಪ್ರವೇಶ ಶುರು!

ಮಣಿಪಾಲ: ಉದ್ಯೋಗಾವಕಾಶಗಳಿಗೆ ಪೂರಕವಾದ ಕೌಶಲ್ಯಗಳನ್ನು ಕಲಿಯಲು ಬಯಸುವ ಯುವಜನರಿಗೆ ಮಣಿಪಾಲ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್‌ (MSDC)ನಲ್ಲಿ ವಿವಿಧ ಉದ್ಯೋಗಾಧಾರಿತ ಕೌಶಲ್ಯ ತರಬೇತಿ ಕಾರ್ಯಕ್ರಮಗಳಿಗೆ ಪ್ರವೇಶ ಆರಂಭವಾಗಿದೆ. MSDCಯಲ್ಲಿ 3, 6 ಮತ್ತು 12 ತಿಂಗಳ ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳು ಮತ್ತು ಕೈಗಾರಿಕಾ ವಲಯದೊಂದಿಗೆ ಸಂಯೋಜಿತ ಅಪ್ರೆಂಟಿಸ್‌ಶಿಪ್‌ ಅವಕಾಶಗಳು ಲಭ್ಯವಿವೆ. ಪ್ರಾಯೋಗಿಕ ತರಬೇತಿಯೊಂದಿಗೆ ವಿದ್ಯಾರ್ಥಿಗಳನ್ನು ಉದ್ಯೋಗ ಕ್ಷೇತ್ರಕ್ಕೆ ಸಿದ್ಧಪಡಿಸುವ ಉದ್ದೇಶದಿಂದ ಕೋರ್ಸ್‌ಗಳನ್ನು ರೂಪಿಸಲಾಗಿದೆ. IT & AI, IoT, ರೋಬೋಟಿಕ್ಸ್, ಇಂಡಸ್ಟ್ರಿಯಲ್ ಆಟೊಮೇಷನ್, ಡ್ರೋನ್ ಟೆಕ್ನಾಲಜಿ, PCB […]

ತನಿಖೆಯಲ್ಲಿ ವೈಜ್ಞಾನಿಕ ಸಾಕ್ಷ್ಯ ಸಂಗ್ರಹ ಮುಖ್ಯ: ಚೇತನ್ ಆರ್

ಉಡುಪಿ: ಪ್ರಕರಣಗಳ ತನಿಖೆಯಲ್ಲಿ ವೈಜ್ಞಾನಿಕ ಸಾಕ್ಷ್ಯಗಳನ್ನು ಸಮರ್ಪಕವಾಗಿ ಸಂಗ್ರಹಿಸಿ, ಅವುಗಳನ್ನು ಪ್ರಕರಣದೊಂದಿಗೆ ಜೋಡಿಸಿ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವುದು ಅತ್ಯಂತ ಮುಖ್ಯ. ಇದರಿಂದ ಆರೋಪಿಗೆ ಶಿಕ್ಷೆ ಕೊಡಿಸುವುದರ ಜತೆಗೆ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಫೊರೆನ್ಸಿಕ್ ಸೈನ್ಸ್ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಮಂಗಳೂರು ಪಶ್ಚಿಮ ವಲಯದ ಪೊಲೀಸ್ ಉಪ ಮಹಾ ನಿರೀಕ್ಷಕ (ಡಿಐಜಿ) ಚೇತನ್ ಆರ್. ಹೇಳಿದರು. ಮಣಿಪಾಲ ಕೆಎಂಸಿಯ ಡಾ. ಟಿ.ಎಂ.ಎ. ಪೈ ಸಭಾಂಗಣದಲ್ಲಿ ನಡೆದ ಮಂಗಳೂರು ಪಶ್ಚಿಮ ವಲಯ ಮಟ್ಟದ ಎಂಟನೇ […]

ಸೆ. 4 ರಂದು ಶ್ರೀ ಕೃಷ್ಣ ಜಯಂತಿ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆಯು ಸೆಪ್ಟಂಬರ್ 4 ರಂದು ಬೆಳಗ್ಗೆ 10 ಗಂಟೆಗೆ ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ […]

ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಉತ್ತರಾಖಂಡದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಡೆದ ರ‍್ಯಾಲಿಯ ಬಳಿಕ ಬಿಜೆಪಿ ಕಾರ್ಯಕರ್ತರು ನಡೆಸಿದ ಶುದ್ಧೀಕರಣದಂತಹ ಜಾತಿವಾದಿ ಕೃತ್ಯವನ್ನು ಖಂಡಿಸಿ ಧ್ವನಿ ಎತ್ತಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳವಾರ ಬ್ರಹ್ಮಗಿರಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಭವನದಿಂದ ಬ್ರಹ್ಮಗಿರಿ ಸರ್ಕಲ್‌ವರೆಗೆ ಪಾದಯಾತ್ರೆ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಂವಿಧಾನದ ಸಮಾನತೆ, ಸಾಮಾಜಿಕ ನ್ಯಾಯ ಮತ್ತು […]