ಮಾಚೀದೇವರ ಆದರ್ಶಗಳನ್ನು ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಮಡಿವಾಳ ಮಾಚೀದೇವ ಅವರ ಆದರ್ಶ, ಆಲೋಚನೆ ಮತ್ತು ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರೊಂದಿಗೆ ಅವರು ಯಾವ ಧ್ಯೇಯಕ್ಕಾಗಿ ಸಮಾಜದಲ್ಲಿ ಶ್ರಮಿಸಿದರು ಎಂದು ನಾವು ಅರಿತುಕೊಳ್ಳಬೇಕಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬುಧವಾರ ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಮಡಿವಾಳ ಮಾಚೀದೇವ ಜಯಂತಿ ಕಾರ್ಯಕ್ರಮದಲ್ಲಿ […]

ನಕಲಿ ಕಟ್ಟಡ ಕಾರ್ಮಿಕ ಕಾರ್ಡ್ ನೋಂದಣಿ ರದ್ಧತಿ ಅಭಿಯಾನ: ತಪ್ಪಿತಸ್ಥರ ಮೇಲೆ ಕಾನೂನು ಕ್ರಮ

ಉಡುಪಿ: ಕಾರ್ಮಿಕ ಇಲಾಖೆಯ ವತಿಯಿಂದ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾಗಿರುವ ಫಲಾನುಭವಿಗಳಿಗೆ ವಿವಿಧ ಆರ್ಥಿಕ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಲ್ಲದವರು ನಕಲಿ ದಾಖಲಾತಿ ಸೃಷ್ಠಿಸಿ, ಮಂಡಳಿಯಿಂದ ನೀಡುವ ಕಾರ್ಮಿಕರ ಗುರುತಿನ ಚೀಟಿ ಪಡೆದು, ಸೌಲಭ್ಯಗಳನ್ನು ಪಡೆಯುತ್ತಿರುವುದು ಮಂಡಳಿಯ ಗಮನಕ್ಕೆ ಬಂದಿರುವುದರಿಂದ ಜಿಲ್ಲೆಯಾದ್ಯಂತ ಫೆಬ್ರವರಿ 25 ರ ವರೆಗೆ ಬೋಗಸ್ ಕಾರ್ಡ್ ನೋಂದಣಿ ರದ್ಧತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತದೆ. ಈಗಾಗಲೇ ಕಟ್ಟಡ ಮತ್ತು ಇತರೆ ನಿರ್ಮಾಣ […]

ಪ್ರಥಮ ಯಕ್ಷಗಾನ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಉಡುಪಿಯಲ್ಲಿ ಇದೇ ಫೆಬ್ರವರಿ 11 ಮತ್ತು 12ರಂದು ನಡೆಸುತ್ತಿರುವ ರಾಜ್ಯಮಟ್ಟದ ಪ್ರಥಮ ಯಕ್ಷಗಾನ ಸಮ್ಮೇಳನದ ಅಧಿಕೃತ ಆಹ್ವಾನ ಪತ್ರಿಕೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಅವರು ಉಚ್ಚಿಲದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಬುಧವಾರ ಬಿಡುಗಡೆಗೊಳಿಸಿದರು. ಈ ಸಮಾರಂಭದಲ್ಲಿ ಕಾಳಹಸ್ತೇಂದ್ರ ಮಹಾಸ್ವಾಮೀಜಿ, ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಜಿ. ಶಂಕರ್ , ಸಮ್ಮೇಳನದ ಕಾರ್ಯಾಧ್ಯಕ್ಷ , ಡಾ. ಜಿ.ಎಲ್.ಹೆಗಡೆ, ಕಾಪು ಶಾಸಕ ಲಾಲಾಜಿ […]

ಉತ್ಸವಗಳಿಗೆ ದುಂದುವೆಚ್ಚ ನಡೆಸುವ ಸರ್ಕಾರದ ಬಳಿ ಹೊರಗುತ್ತಿಗೆ ನೌಕರರ ನೇರಪಾವತಿಗೆ ಹಣವಿಲ್ಲ ಎನ್ನುವುದು ಹಾಸ್ಯಾಸ್ಪದ: ರಮೇಶ್ ಕಾಂಚನ್

ಉಡುಪಿ: ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘ, ಬೆಂಗಳೂರು ಇದರ ನೇತೃತ್ವದಲ್ಲಿ ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ವಾಹನ ಚಾಲಕರು, ನೀರು ಸರಬರಾಜು ಸಹಾಯಕರು, ಸ್ಯಾನಿಟರಿ ಸೂಪರ್‌ವೈಸರ್, ಲೋಡರ್ಸ್, ಕ್ಲೀನರ್ಸ್, ಒಳಚರಂಡಿ ಕಾರ್ಮಿಕರು, ಡಿ.ಇ.ಓ, ಎಸ್.ಟಿ.ಪಿ ಆಪರೇಟರ್ಸ್, ಕಚೇರಿ ಸಹಾಯಕರು ಸೇರಿದಂತೆ ಎಲ್ಲಾ ಹೊರಗುತ್ತಿಗೆ ನೌಕರರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೆ ಆಗ್ರಹಿಸಿ ಫೆ.1 ರಿಂದ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಧರಣಿಯನ್ನು ಜಿಲ್ಲಾ ಹೊರಗುತ್ತಿಗೆ ನೌಕರರ ಸಂಘವು ಉಡುಪಿ ಜಿಲ್ಲಾಧಿಕಾರಿ […]

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಯುವ ಸಹಕಾರಿ ಧುರೀಣ ಯಶ್ ಪಾಲ್ ಎ ಸುವರ್ಣ ಅವರಿಗೆ ಸಾರ್ವಜನಿಕ ಅಭಿನಂದನೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಮಂಗಳೂರು ವತಿಯಿಂದ ಅವಿಭಜಿತ ದಕ ಜಿಲ್ಲೆಯ ವಿವಿಧ ಸಹಕಾರಿ ಸಂಘಗಳ ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಯುವ ಸಹಕಾರಿ ಧುರೀಣ ಸಾಮಾಜಿಕ, ಧಾರ್ಮಿಕ, ರಾಜಕೀಯ ಮುಂದಾಳು ಯಶಪಾಲ್ ಎ ಸುವರ್ಣ ಅವರಿಗೆ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಶಾಲಿನಿ ಡಾ|ಜಿ.ಶಂಕರ್ ತೆರೆದ ಸಭಾಂಗಣದಲ್ಲಿ ಇಂದು ಸಾರ್ವಜನಿಕ ಅಭಿನಂದನೆಯನ್ನು ಮಾಡಲಾಯಿತು. ಅಭಿನಂದನೆ ನೆರವೇರಿಸಿ ಮಾತನಾಡಿದ ನಾಡೋಜ ಡಾ. ಜಿ ಶಂಕರ್ ಅವರು, […]