ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದ ನವೀಕೃತ ಗರ್ಭಗೃಹ ಸಮರ್ಪಣೆ

ಉಡುಪಿ: ಶ್ರೀಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದ ನವೀಕೃತ ಗರ್ಭಗೃಹ ಸಮರ್ಪಣೆ ಕಾರ್ಯಕ್ರಮ ಭಾನುವಾರ ಅತ್ಯಂತ‌ ವೈಭವದಿಂದ ದೇಗುಲದ ಆವರಣದಲ್ಲಿ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ‌ ಆಶೀರ್ವಚನ ನೀಡಿದ ಮೂಡುಬಿದರೆ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಮನುಷ್ಯನ ಎಲ್ಲ ಕಾರ್ಯಗಳು ಚೆನ್ನಾಗಿ ನಡೆಯಬೇಕಾದರೆ ದೇವರ ಅನುಗ್ರಹ ಅಗತ್ಯವಾಗಿ ಬೇಕು. ದೇವರ ಪ್ರಾರ್ಥನೆ ಇಲ್ಲದೆ ಯಾವುದೇ ಕೆಲಸವೂ ಪೂರ್ಣ ವಾಗಲ್ಲ. ಭಗವಾನ್ ನಿತ್ಯಾನಂದರು ಸಾಮಾನ್ಯರ ಮನೆಯಲ್ಲಿ ಹುಟ್ಟಿ ಅಸಾಮಾನ್ಯ ವ್ಯಕ್ತಿತ್ವ ಹೊಂದಿದ್ದ ಓರ್ವ ಶ್ರೇಷ್ಠ ಸಂತ. […]

ಮಣಿಪಾಲ: ಡ್ರಗ್ಸ್ ಸೇವಿಸಿ ದರೋಡೆಗೆ ಸಂಚು ರೂಪಿಸುತ್ತಿದ್ದ ಆರೋಪಿಗಳ ಬಂಧನ

ಮಣಿಪಾಲ: ಜಿಲ್ಲೆಯಲ್ಲಿ ಡ್ರಗ್ಸ್ ವಿರುದ್ಧ ಸಮರವನ್ನು ಮುಂದುವರೆಸಿರುವ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯು ಮಾದಕ ದ್ರವ್ಯ ಸೇವನೆ ಮಾಡುತ್ತಿದ್ದು, ದರೋಡೆಗೆ ಸಂಚು ರೂಪಿಸುತ್ತಿದ್ದ ಆರೋಪಿಗಳನ್ನು ಬಂಧಿಸಿ ಸಂಭಾವ್ಯ ಅನಾಹುತ ಒಂದನ್ನು ತಪ್ಪಿಸಿದ್ದಾರೆ. ಮಣಿಪಾಲ ಪಿ.ವಿ ನಗರದ ಅನಂತ ರೆಸಿಡೆನ್ಸಿಯಲ್ಲಿ 5 ಜನರು ಗುಂಪುಗೂಡಿ ಅಕ್ರಮವಾಗಿ ಮಾದಕ ದ್ರವ್ಯ ಹಾಗೂ ಗಾಂಜಾವನ್ನು ಮನೆಯಲ್ಲಿ ಇಟ್ಟುಕೊಂಡು ಅದನ್ನು ಸೇವಿಸಿ ದರೋಡೆಗೆ ಸಂಚು ರೂಪಿಸುತ್ತಿದ್ದರು ಎನ್ನಲಾಗಿದ್ದು ಈ ಆರೋಪಿಗಳನ್ನು ಮಣಿಪಾಲ ಪಿ.ಐ ಮತ್ತು ತಂಡದವರು ಬಂಧಿಸಿದ್ದಾರೆ.   ಆರೋಪಿಗಳಿಂದ 6 ಗ್ರಾಂ […]

ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಮಂದಿ ಶ್ರೇಷ್ಠ ಸಾಧಕರಿಗೆ ಹೊಸವರ್ಷ ಪ್ರಶಸ್ತಿ-2023 ಪ್ರದಾನ

ಮಣಿಪಾಲ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆರೋಗ್ಯ ವಿಜ್ಞಾನ, ಬ್ಯಾಂಕಿಂಗ್‌ ಮತ್ತು ಕೃಷಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ನಾಲ್ಕು ಮಂದಿ ಸಾಧಕರಿಗೆ ಅಕಾಡೆಮಿ ಆಫ್‌ ಜನರಲ್‌ ಎಜುಕೇಶನ್‌, ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌, ಮಣಿಪಾಲ್‌ ಎಜುಕೇಶನ್‌ ಆ್ಯಂಡ್‌ ಮಣಿಪಾಲ್‌ ಗ್ರೂಪ್‌ ಇಂಡಿಯ, ಪ್ರೈ. ಲಿ., ಮಣಿಪಾಲ್‌ ಮೀಡಿಯಾ ನೆಟ್‌ವರ್ಕ್‌ ಲಿ. ಮತ್ತು ಡಾ. ಟಿಎಂಎ ಪೈ ಫೌಂಡೇಶನ್‌ ಸಂಸ್ಥೆಗಳ ವತಿಯಿಂದ ಮಣಿಪಾಲದ ಫಾರ್ಚೂನ್‌ ಇನ್‌ ವ್ಯಾಲಿವ್ಯೂನಲ್ಲಿ ಜ. 14 ರಂದು ‘ಹೊಸವರ್ಷದ ಪ್ರಶಸ್ತಿ-2023’ ಪ್ರದಾನ ಮಾಡಿ […]

ಬೈಂದೂರು: ಅಡಕೆ ಕಳ್ಳರ ಬಂಧನ; 2 ಲಕ್ಷ ಮೌಲ್ಯದ ಅಡಕೆ ವಶ

ಬೈಂದೂರು: ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಬೈಂದೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬೈಂದೂರು ಠಾಣಾ ವ್ಯಾಪ್ತಿಯ ನಾವುಂದ ಗ್ರಾಮದ ಕೋಡಿಯಾಡಿ ಫಾರ್ಮ್ ಹೌಸ್ ಅಂಗಳದಲ್ಲಿ ಒಣಗಿಸಿದ ಅಡಿಕೆಯನ್ನು ಕಳವು ಮಾಡಿಕೊಂಡು ಹೋಗಿದ್ದ ಆರೋಪಿಗಳನ್ನು ಬೈಂದೂರು ಪಿಎಸ್ಐ ಮತ್ತು ತಂಡ ಬಂಧಿಸಿದ್ದು, ಆರೋಪಿಗಳಿಂದ 2,00,000/-ಮೌಲ್ಯದ ಅಡಿಕೆ ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.