ಮುಖ್ಯ ಚುನಾವಣಾ ಕಚೇರಿಯಿಂದ ಅರ್ಹ ಮತದಾರರ ಅಂತಿಮ ಪಟ್ಟಿಯ ಪಿಡಿಎಫ್ ಮಾದರಿ ಬಿಡುಗಡೆ: ನಿಮ್ಮ ಹೆಸರು ಪರೀಕ್ಷಿಸಿಕೊಳ್ಳಿ

ಮುಖ್ಯ ಚುನಾವಣಾ ಅಧಿಕಾರಿ ಕಚೇರಿಯು ಅರ್ಹ ಮತದಾರರ ಅಂತಿಮ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಇದರಲ್ಲಿ ಮತದಾರರು ತಮ್ಮ ಹೆಸರು ನೋಂದಾವಣೆಯಾಗಿರುವ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು. https://ceo.karnataka.gov.in ವೆಬ್ ಸೈಟ್ ನಲ್ಲಿ ಪಿಡಿಎಫ್ ಮಾದರಿಯಲ್ಲಿ ಮತದಾರರು ತಮ್ಮ ಹೆಸರು ಮುಂತಾದ ವಿವರಗಳು ಪರಿಶೀಲಿಸಬಹುದು. ಮೃತಪಟ್ಟ, ವಿಳಾಸ ಬದಲಿಸಿರುವ ಹಾಗೂ ಕೈಬಿಟ್ಟಿರುವ ಮತದಾರರ ಮಾಹಿತಿಯನ್ನು ಕಾರಣ ಸಮೇತ ಪ್ರಕಟಿಸಲಾಗಿದೆ ಎಂದು ಮುಖ್ಯ ಚುನಾವಣಾ ಕಚೇರಿ ಟ್ವೀಟ್ ಮಾಡಿ ತಿಳಿಸಿದೆ. ನಿಮ್ಮ ವಿವರಗಳನ್ನು ಪರಿಶೀಲಿಸಿಕೊಳ್ಳಲು ಲಿಂಕ್ ಗೆ ಭೇಟಿ ನೀಡಿ https://ceo.karnataka.gov.in/FinalRoll_2023/ https://erms.karnataka.gov.in/2022_ADMS_AFTER_DRAFT/

ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶ್ರೀಶ ಕೊಡವೂರು ನೇಮಕ

ಉಡುಪಿ: ಪ್ರಸಕ್ತ ಸಾಲಿಗೆ ಉಡುಪಿ ನಗರಸಭೆಯ ಸ್ಥಾಯೀ ಸಮಿತಿಯ ಅಧ್ಯಕ್ಷರಾಗಿ ಮೂಡಬೆಟ್ಟು ವಾರ್ಡಿನ ಸದಸ್ಯ ಶ್ರೀಶ ಕೊಡವೂರು ಅವರನ್ನು ಆಯ್ಕೆ ಮಾಡಲಾಗಿದೆ. ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸ್ಥಾಯಿ ಸಮಿತಿ ಸಭೆಯಲ್ಲಿ ನಗರಸಭಾ ಸಹಾಯಕ ಕಾರ್ಯಪಾಲಕ ಅಭಿಯಂತರ ಯಶವಂತ ಪ್ರಭು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಸಭೆಯಲ್ಲಿ ಸ್ಥಾಯಿ ಸಮಿತಿಯ ಸದಸ್ಯರಾದ ಸಂಪಾವತಿ, ಸಂತೋಷ್ ಜತ್ತನ್, ಡಿ. ಬಾಲಕೃಷ್ಣ ಶೆಟ್ಟಿ, ಯೋಗೀಶ್ ವಿ ಸಾಲ್ಯಾನ್, ಮಾನಸ ಸಿ ಪೈ, ಭಾರತಿ ಪ್ರಶಾಂತ್, ಜಯಂತಿ […]

ಕಿನ್ನಿಗೋಳಿ: ಉಭಯ ಜಿಲ್ಲೆಗಳ ನೇಕಾರರಿಗೆ ಸರ್ಕಾರಿ ಯೋಜನೆಗಳ ಮಾಹಿತಿ ಕಾರ್ಯಕ್ರಮ

ಕಿನ್ನಿಗೋಳಿ: ದ.ಕ. ಮತ್ತು ಉಡುಪಿ ಜಿಲ್ಲೆಗಳ ನೇಕಾರರಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಿಶೇಷ ಕಾರ್ಯಕ್ರಮವು ಜ.5 ರಂದು ಕಿನ್ನಿಗೋಳಿಯ ತಾಳಿಪಾಡಿ ನೇಕಾರರ ಸಹಕಾರಿ ಸಂಘದಲ್ಲಿ ನಡೆಯಿತು. ಉಡುಪಿ ಸೀರೆ ಪುನಶ್ಚೇತನಕ್ಕಾಗಿ ಶ್ರಮಿಸುತ್ತಿರುವ ಕದಿಕೆ ಟ್ರಸ್ಟ್ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ವೀವರ್ಸ್ ಸರ್ವಿಸ್ ಸೆಂಟರ್ ನ ಉಪ ನಿರ್ದೇಶಕ ಮಾರಿಮುತ್ತು ಮತ್ತು ತಾಂತ್ರಿಕ ವಿಭಾಗದ ಅಧಿಕಾರಿ ಮೋಹನ್ ಕುಮಾರ್, ಕೈ ಮಗ್ಗ ಮತ್ತು ಜವಳಿ ಇಲಾಖೆಯ ಉಭಯ ಜಿಲ್ಲೆಗಳ ಉಪ […]

ಮುಂಡ್ಕೂರು: ಇನ್ನಾ ಗ್ರಾಮದಲ್ಲಿ ರಾಜ್ ಬಿ ಶೆಟ್ಟಿ; ಕನ್ನಡ ಚಿತ್ರದ ಚಿತ್ರೀಕರಣ

ಮುಂಡ್ಕೂರು: ತುಳುನಾಡಿನ ಸೊಗಡನ್ನು ವಿಶ್ವದಾದ್ಯಂತ ಪಸರಿಸುತ್ತಿರುವ ರಾಜ್ ಬಿ ಶೆಟ್ಟಿ ಇವರ ನಿರ್ದೇಶನದ ಮುಂದಿನ ಕನ್ನಡ ಚಿತ್ರದ ಚಿತ್ರೀಕರಣ ಮುಂಡ್ಕೂರು ಬಳಿ ಇನ್ನಾ ಗ್ರಾಮದಲ್ಲಿ ನಡೆದಿದ್ದು, ಈ ಸಂದರ್ಭದಲ್ಲಿ ಸಮಸ್ತ ಇನ್ನಾ ಗ್ರಾಮಸ್ಥರ ಪರವಾಗಿ ಸದ್ಗುರು ಶ್ರೀ ನಿತ್ಯಾನಂದ ಭಜನಾ ಮಂದಿರದಲ್ಲಿ ಅವರನ್ನು ಗೌರವಿಸಲಾಯಿತು.

ಕಟ್ಟಡ ಕಾರ್ಮಿಕರ ಯೋಜನೆಗೆ ಸುಳ್ಳು ದಾಖಲೆ ನೀಡಿದಲ್ಲಿ ಕಾನೂನು ಕ್ರಮ: ಜಿಲ್ಲಾ ಕಾರ್ಮಿಕ ಅಧಿಕಾರಿ

ಉಡುಪಿ: ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಆಗಿರುವ ಫಲಾನುಭವಿಗಳಿಗೆ ವಿವಿಧ ಆರ್ಥಿಕ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ವೃತ್ತಿಯಲ್ಲಿ ತೊಡಗದೆ ಇರುವ ಪುರುಷ ಮತ್ತು ಮಹಿಳೆಯರು ಸೌಲಭ್ಯ ಪಡೆಯುವ ನಿಟ್ಟಿನಲ್ಲಿ ನೋಂದಣಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುತ್ತಿರುವುದು ಕಂಡುಬಂದಿದ್ದು, ಇದನ್ನು ಪರಿಶೀಲಿಸಿ ಅನರ್ಹರೆಂದು ಪತ್ತೆಹಚ್ಚಿ ರದ್ದುಗೊಳಿಸಲಾಗುತ್ತಿದೆ. ಅನರ್ಹರು ನೋಂದಣಿ ಮಾಡಿಸಿಕೊಂಡಿದ್ದಲ್ಲಿ ಕೂಡಲೇ ಗುರುತಿನ ಚೀಟಿಯನ್ನು ಸಂಬಂಧಪಟ್ಟ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಹಿಂದಿರುಗಿಸಿ ಸದಸ್ಯತ್ವವನ್ನು […]