ಪೇಜಾವರ ಶ್ರೀ ಚಾತುರ್ಮಾಸ್ಯ ನವದೆಹಲಿ 2026: ಹಿರಿಯ ಐಎಎಸ್ ಅಧಿಕಾರಿ ರಾಜೇಂದ್ರ ಪ್ರಸಾದ್ ಗೆ ಜನ್ಮಾಷ್ಟಮಿ ಪುರಸ್ಕಾರ

ನವದೆಹಲಿ: ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ನವದೆಹಲಿಯಲ್ಲಿ ನಡೆಸುತ್ತಿರುವ 39 ನೇ ಚಾತುರ್ಮಾಸ್ಯ ವ್ರತದ ಸಂದರ್ಭ ಶ್ರೀ ಕೃಷಾಷ್ಟಮಿ ಉತ್ಸವವನ್ನು ವಿಶೇಷವಾಗಿ ನಡೆಸಲು ಸಂಕಲ್ಪಿಸಲಾಗಿದ್ದು, ಸೆ .3 ರಂದು (ಗುರುವಾರ) ಸಂಜೆ 6 ಕ್ಕೆ ಸ್ವಾಮೀಜಿಯವರ ಸಾನಿಧ್ಯದಲ್ಲಿ ಜನ್ಮಾಷ್ಟಮಿ ಕಾರ್ಯಕ್ರಮಗಳ ಉದ್ಘಾಟನೋತ್ಸವ ನಡೆಯಲಿದೆ. ಕೇಂದ್ರ ಸಚಿವರಾದ ಹರ್ಷ ಮಲ್ಹೋತ್ರ , ಶೋಭಾ ಕರಂದ್ಲಾಜೆ , ಸಂಸದರಾದ ಮನೋಜ್ ತಿವಾರಿ , ಮೀನಾಕ್ಷಿ ಲೇಖಿ , ಶಾಸಕ ಅನಿಲ್ ಶರ್ಮ, ಚಾತುರ್ಮಾಸ್ಯ ಸೇವಾ ಸಮಿತಿ ಅಧ್ಯಕ್ಷ ಅಲೋಕ್ […]
ಮಣಿಪಾಲದ MSDC ಯಿಂದ ಡ್ರೋನ್ ಪೈಲಟ್ ಆಗುವ ಅದ್ಬುತ ಅವಕಾಶ: DGCA ಅನುಮೋದಿತ ತರಬೇತಿ ಪಡೆಯಿರಿ ವೃತ್ತಿಪರ ಡ್ರೋನ್ ಪೈಲೆಟ್ ಆಗಿರಿ

ಮಣಿಪಾಲ: ಡ್ರೋನ್ ತಂತ್ರಜ್ಞಾನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಮಣಿಪಾಲ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ (MSDC) ವಿಶೇಷ ಅವಕಾಶ ಕಲ್ಪಿಸಿದೆ. ಕೇಂದ್ರದ ವತಿಯಿಂದ ಡಿಜಿಸಿಎ (DGCA) ಅನುಮೋದಿತ ರಿಮೋಟ್ ಪೈಲಟ್ ತರಬೇತಿ ಕೋರ್ಸ್ನ್ನು ಆಯೋಜಿಸಲಾಗಿದ್ದು, ತರಬೇತಿ ಪಡೆಯುವವರಿಗೆ ಪ್ರಮಾಣೀಕೃತ ಡ್ರೋನ್ ಪೈಲಟ್ ಆಗುವ ಅವಕಾಶ ದೊರೆಯಲಿದೆ. 5ರಿಂದ 6 ದಿನಗಳ ಈ ತೀವ್ರ ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ನೈಜ ಡ್ರೋನ್ ಹಾರಾಟದ ಅನುಭವದ ಜೊತೆಗೆ ಫ್ಲೈಟ್ ಸಿಮ್ಯುಲೇಶನ್ ತರಬೇತಿ ನೀಡಲಾಗುತ್ತದೆ. ಅಲ್ಲದೆ, ಡಿಜಿಸಿಎ ನಿಯಮಗಳು ಮತ್ತು ಮಾರ್ಗಸೂಚಿಗಳು, ಡ್ರೋನ್ […]
ಉಡುಪಿ: ಕೃಷ್ಣಾಸುರ ವೇಷದಲ್ಲಿ ತಾಯಿ-ಮಗಳು; ಬಡ ಮಕ್ಕಳ ಶಿಕ್ಷಣಕ್ಕೆ ನೆರವು

ಉಡುಪಿ: ಶ್ರೀಕೃಷ್ಣಾಷ್ಟಮಿ ಅಂಗವಾಗಿ ಮಲ್ಪೆ ಲಕ್ಷ್ಮೀನಗರದ ಶ್ರೀ ಸಿದ್ದಿ ಇವೆಂಟ್ಸ್ ವತಿಯಿಂದ ವಿಶೇಷ ಸಾಮಾಜಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದಿವ್ಯ ಸತೀಶ್ ಹಾಗೂ ಅವರ ಎಂಟು ವರ್ಷದ ಪುತ್ರಿ ಸಿದ್ದಿ ಎಸ್. ಕಾಮತ್ ಅವರು ಕೃಷ್ಣಾಸುರ ವೇಷ ಧರಿಸಿ ಸಾರ್ವಜನಿಕರಿಂದ ನೆರವು ಸಂಗ್ರಹಿಸಲಿದ್ದು, ಸಂಗ್ರಹವಾಗುವ ಹಣವನ್ನು ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ವಿನಿಯೋಗಿಸಲು ನಿರ್ಧರಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ದಿವ್ಯ ಸತೀಶ್ ಅವರು, ತಮ್ಮ ಪುತ್ರಿ ಸಿದ್ದಿ ಎಸ್. ಕಾಮತ್ ಪ್ರತಿವರ್ಷ ಶ್ರೀಕೃಷ್ಣಾಷ್ಟಮಿ ಸಂದರ್ಭದಲ್ಲಿ ಶ್ರೀಕೃಷ್ಣನ ವೇಷ […]
ಸ್ಟಿಕರ್ ಅಂಟಿಸುವ ಸವಾಲಿಗೆ ಬಿಜೆಪಿ ತಿರುಗೇಟು; ಸುನಿಲ್ ಕುಮಾರ್ ಕಚೇರಿ ಎದುರು ನೂರಾರು ಕಾರ್ಯಕರ್ತರ ಜಮಾವಣೆ

ಉಡುಪಿ: ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ಕಚೇರಿಗೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ಟಿಕರ್ ಅಂಟಿಸುವುದಾಗಿ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಬುಧವಾರ ಶಾಸಕ ಕಚೇರಿ ಎದುರು ನೂರಾರು ಬಿಜೆಪಿ ಕಾರ್ಯಕರ್ತರು ಜಮಾಯಿಸಿ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಕಚೇರಿಗೆ ನುಗ್ಗದಂತೆ ತಡೆಯುವ ಉದ್ದೇಶದಿಂದ ಬಿಜೆಪಿ ಕಾರ್ಯಕರ್ತರು ಕಚೇರಿ ಆವರಣದಲ್ಲಿ ಜಮಾಯಿಸಿದ್ದರು. ಈ ಸಂದರ್ಭ ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಿಜೆಪಿ ಮುಖಂಡ ಸತೀಶ್ ಶೆಟ್ಟಿ ಮುಟ್ಲಪಾಡಿ […]
ಕಾರ್ಕಳದಲ್ಲಿ ಕಾಂಗ್ರೆಸ್ ಪ್ರತಿಭಟನೆ; ಸುನಿಲ್ ಕುಮಾರ್ ಕಚೇರಿಗೆ ಮುತ್ತಿಗೆ ಯತ್ನ

ಉಡುಪಿ: ಸಚಿವ ನಾಗೇಂದ್ರ ರಾಜೀನಾಮೆ ನೀಡಿರುವ ಬೆಳವಣಿಗೆಗೆ ಪ್ರತಿಕ್ರಿಯೆಯಾಗಿ ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿ, ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿದರು. ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪವನ್ನು ಮುಂದಿಟ್ಟ ಕಾಂಗ್ರೆಸ್ ಕಾರ್ಯಕರ್ತರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸುನಿಲ್ ಕುಮಾರ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಈ ವೇಳೆ ಸುನಿಲ್ ಕುಮಾರ್ ಅವರ ಕಚೇರಿಗೆ […]