ತರಾತುರಿ ಸಮೀಕ್ಷೆಯಿಂದ ರಾಜಕೀಯ ಲಾಭದ ಉದ್ದೇಶ: ವಿ.ಸುನಿಲ್ ಕುಮಾರ್

ಶಿರಸಿ: ‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆ ತ್ಯಜಿಸುವ ಕಾಲ ಸನ್ನಿಹಿತವಾಗಿದೆ. ಅದಕ್ಕೆ ರಾಜಕೀಯ ಲಾಭಕ್ಕಾಗಿ ತರಾತುರಿಯಲ್ಲಿ ಜಾತಿವಾರು ಸಮೀಕ್ಷೆ ಜಾರಿಗೊಳಿಸಿದ್ದಾರೆ. ಆದರೆ, ಅದು ವಿಫಲವಾಗಿದೆ’ ಎಂದು ಶಾಸಕ ವಿ.ಸುನಿಲಕುಮಾರ ಆರೋಪಿಸಿದರು. ‘ಸಮೀಕ್ಷೆ ಸರಿಯಾಗಿ ನಡೆಸುವ ಉದ್ದೇಶ ಇದ್ದಿದ್ದರೆ, ಪೂರ್ವ ತಯಾರಿ ಮಾಡಿಕೊಳ್ಳಬೇಕಿತ್ತು. ಕಾಂತರಾಜ ಆಯೋಗದ ವರದಿಯನ್ನು ಸ್ವೀಕರಿಸದ ಅವರು, ₹ 420 ಕೋಟಿ ಬಳಸಿಕೊಂಡು ಪೂರ್ವ ಸಿದ್ಧತೆ ಮಾಡಿಕೊಳ್ಳದೇ ಸಮೀಕ್ಷೆ ಆರಂಭಿಸಿದ್ದು ಸರಿಯಲ್ಲ’ ಎಂದರು. ಪ್ರಕ್ರಿಯೆ ಕೈಗೊಂಡಿರುವುದು ಸರಿಯಲ್ಲ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು. ‘ಗ್ಯಾರಂಟಿ […]
ಗಂಗಾರತಿಗೈದ ಪೇಜಾವರ ಶ್ರೀಗಳು

ಉಡುಪಿ: ಉಡುಪಿಯ ಶ್ರೀ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಉತ್ತರ ಭಾರತ ಪ್ರವಾಸದಲ್ಲಿದ್ದಾರೆ. ವರ್ಷಾವಧಿ ತೀರ್ಥಕ್ಷೇತ್ರ ಪ್ರವಾಸದಲ್ಲಿರುವ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಬುಧವಾರ ರಾತ್ರಿ ಕಾಶಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಗಂಗಾ ತೀರದಲ್ಲಿ ನಡೆದ ಗಂಗಾರತಿಯಲ್ಲಿ ಪಾಲ್ಗೊಂಡಿದ್ದಾರೆ. ತಾವು ಸ್ವತಃ ಗಂಗಾರತಿಗೈದಿದ್ದಾರೆ. ಸ್ಥಳೀಯಾಡಳಿತವು ಪೇಜಾವರ ಶ್ರೀಗಳ ಗಂಗಾರತಿಗೆ ವ್ಯವಸ್ಥೆ ಕಲ್ಪಿಸಿತ್ತು. ಪೇಜಾವರ ಶ್ರೀಗಳು ಉತ್ತರ ಭಾರತದ ವಿವಿಧ ಕ್ಷೇತ್ರಗಳಿಗೆ ಈ ವೇಳೆ ಭೇಟಿ ನೀಡಲಿದ್ದಾರೆ.
ಉಡುಪಿ: ಜಿಲ್ಲೆಯಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ಪತ್ತೆಹಚ್ಚುವ ಕಾರ್ಯಕ್ಕೆ ವೇಗ ನೀಡಿ: ಸಚಿವ ಕೆ.ಎಚ್. ಮುನಿಯಪ್ಪ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ಗುರುತಿಸಲು ಕಟ್ಟುನಿಟ್ಟಿನ ಕ್ರಮವಹಿಸುವುದರೊಂದಿಗೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಆಹಾರ, ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಮತ್ತು ಕಾನೂನು ಮಾಪನ ಶಾಸ್ತç ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ರಾಜ್ಯದ ಆರ್ಥಿಕ ಸ್ಥಿತಿಯು ರಾಷ್ಟ್ರದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಕೇಂದ್ರ […]
ರಸ್ತೆ ಗುಂಡಿ ಮುಚ್ಚಲು ₹750ಕೋಟಿ ಅನುದಾನ ಬಿಡುಗಡೆ: ಡಿ.ಕೆ.ಶಿವಕುಮಾರ್

ಬೆಂಗಳೂರು: ‘ರಸ್ತೆ ಗುಂಡಿಗಳನ್ನು ಮುಚ್ಚಲು ಮುಖ್ಯಮಂತ್ರಿ ₹ 750 ಕೋಟಿ ಅನುದಾನ ನೀಡಿದ್ದಾರೆ’ ಎಂದು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಬಿಜೆಪಿ ಆಡಳಿತಾವಧಿಯಲ್ಲಿ ಆಗಿದ್ದ ರಸ್ತೆಗುಂಡಿಗಳನ್ನು ನಾವು ಮುಚ್ಚುತ್ತಿದ್ದೇವೆ. ಅವರು (ಬಿಜೆಪಿಯವರು) ಅಧಿಕಾರದಲ್ಲಿದ್ದಾಗ ಬೆಂಗಳೂರಿನಲ್ಲಿ ಸಣ್ಣ ಪಿಲ್ಲರ್ ಕೂಡ ಹಾಕಿಲ್ಲ. ಒಂದೇ ಒಂದು ಮೇಲ್ಸೇತುವೆ ಮಾಡಿಲ್ಲ. ಹೀಗಾಗಿಯೇ ಜನರು ನಮ್ಮ ಕೈಗೆ ಅಧಿಕಾರ ಕೊಟ್ಟಿದ್ದಾರೆ’ ಎಂದರು. ‘ಬಿಜೆಪಿಯವರು ಕೇಂದ್ರದಿಂದ ಬೆಂಗಳೂರಿಗೆ ಒಂದು ರೂಪಾಯಿ ಅನುದಾನ […]
ಜಾತಿಗಣತಿಗೆ ನೋ ಬ್ರೇಕ್; ಜಾತಿಗಣತಿಗೆ ಹೈಕೋರ್ಟ್ ನಿಂದ ತಡೆಯಿಲ್ಲ.

ರಾಜ್ಯದಲ್ಲಿ ಸಾಮಾಜಿಕ-ಶೈಕ್ಷಣಿಕ ಸ್ಥಿತಿ ಸಮೀಕ್ಷೆ (ಜಾತಿ ಗಣತಿ) ಸೆ.22ರಿಂದ ಆರಂಭವಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ‘ಜಾತಿ ಗಣತಿ’ ಸಮೀಕ್ಷೆಗೆ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದ್ದು, ತಡೆ ನೀಡಲು ನಿರಾಕರಿಸಿದೆ. ಜಾತಿ ಗಣತಿಗೆ ತಡೆ ನೀಡುವಂತೆ ಬ್ರಾಹ್ಮಣ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳ ಮುಖಂಡರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್ನಿಂದ ಸೆ.25 ರಂದು ಮಧ್ಯಂತರ ಆದೇಶ ಹೊರಬಿದ್ದಿದೆ. ಅರ್ಜಿ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಪ್ರತಿವಾದಿಗಳಿಗೆ ಹೈಕೋರ್ಟ್ ನಾಲ್ಕು ವಾರಗಳ […]