ಸೌಜನ್ಯ ಪ್ರಕರಣ ಮರು ತನಿಖೆಗೆ ಒತ್ತಾಯಿಸಿ ದ.ಕ-ಉಡುಪಿ ಜಿಲ್ಲಾ ಬಿಜೆಪಿ ಶಾಸಕರಿಂದ ಮುಖ್ಯಮಂತ್ರಿಗಳಿಗೆ ಮನವಿ
ಮಂಗಳೂರು/ಉಡುಪಿ: ಸೌಜನ್ಯ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗವು ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ ಸೌಜನ್ಯಳ ಪೋಷಕರು ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆ. ನಿಯೋಗವು […]
ಸೆ.7 ರಂದು ಮುಂಡ್ಕಿನಜೆಡ್ಡು ಶ್ರೀಗೋಪಾಲಕೃಷ್ಣ ಮಂದಿರದಲ್ಲಿ ವಿವಿಧ ಸ್ಪರ್ಧೆಗಳು
ಮುಂಡ್ಕಿನಜೆಡ್ಡು: ಅಷ್ಟಮಿ ಹಾಗೂ ವಿಟ್ಲಪಿಂಡಿ ಪ್ರಯುಕ್ತ ಇಲ್ಲಿನ ಶ್ರೀಗೋಪಾಲಕೃಷ್ಣ ಮಂದಿರದಲ್ಲಿ ಸೆ.7 ರಂದು ಮಧ್ಯಾಹ್ನ 3 ಗಂಟೆಯಿಂದ ವಿವಿಧ ಸ್ಪರ್ಧೆಗಳು ನಡೆಯಲಿವೆ. ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ರಸಪ್ರಶ್ನೆ ಸ್ಪರ್ಧೆ, ಪುರುಷ ಮಹಿಳೆ, ಹಿರಿಯ ಕಿರಿಯ ವಿಭಾಗದಲ್ಲಿ ಸಂಗೀತ ಕುರ್ಚಿ, ಇಡ್ಲಿ ತಿನ್ನುವ ಸ್ಪರ್ಧೆ, ಪುಲ್ ಅಪ್, ಮೊಸರು ಕುಡಿಕೆ, ಮುದ್ದು ಕೃಷ್ಣ, ಹಗ್ಗ ಜಗ್ಗಾಟ, ಲಕ್ಕಿ ಪರ್ಸನ್ ಮುಂತಾದ ಹಲವು ಸ್ಪರ್ಧೆಗಳ ಜೊತೆಗೆ, ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣೆ, ಪ್ರಸಾದ ವಿತರಣೆ ಮುಂತಾದ ಕಾರ್ಯಕ್ರಮಗಳು ಜರುಗಲಿದ್ದು […]
ತೃತೀಯ ಲಿಂಗಿಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಅಗತ್ಯ: ಮಂಜಮ್ಮ ಜೋಗತಿ
ಉಡುಪಿ: ತೃತೀಯ ಲಿಂಗಿಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಅಗತ್ಯ. ಸೂಕ್ತ ಅವಕಾಶಗಳು ಸಿಗದಿದ್ದರೆ ಅವರ ಪ್ರತ್ಯೇಕತೆ ಹೀಗೆಯೆ ಮುಂದುವರಿಯುತ್ತದೆ. ಈ ಸೌಲಭ್ಯಗಳನ್ನು ಸರ್ಕಾರ ಕಲ್ಪಿಸುವವರೆಗೂ ಪೊಲೀಸರು ತೃತೀಯ ಲಿಂಗಿಗಳ ವಿರುದ್ಧ ಕ್ರಮಕೈಗೊಳ್ಳಬಾರದು ಎಂದು ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿ ಅಭಿಪ್ರಾಯಪಟ್ಟಿದ್ದಾರೆ. ಸೋಮವಾರ ಅಜ್ಜರಕಾಡಿನ ಜಿಲ್ಲಾ ಗ್ರಂಥಾಲಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ, ಜಿಲ್ಲಾ ಗ್ರಂಥಾಲಯ ಮತ್ತು ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಆಶ್ರಯದಲ್ಲಿ ನಡೆದ ಸಂವಾದದಲ್ಲಿ ಅವರು ಮಾತನಾಡಿದರು. ತೃತೀಯ ಲಿಂಗಿಗಳು ಅನಿವಾರ್ಯ ಪರಿಸ್ಥಿತಿಯಲ್ಲಿ […]
ಕಾಪು: ನೂತನ ಠಾಣಾಧಿಕಾರಿ ಅಬ್ದುಲ್ ಖಾದರ್ ಅವರಿಗೆ ಅಭಿನಂದನೆ
ಕಾಪು: ಕಾಪು ಪೊಲೀಸ್ ನೂತನ ಠಾಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಅಬ್ದುಲ್ ಖಾದರ್ ಇವರನ್ನು ಕಾಪು ಸಮಾಜ ಸೇವಾ ವೇದಿಕೆ ಪದಾಧಿಕಾರಿಗಳಾದ ಸಮಾಜ ಸೇವೆಯಲ್ಲಿ ರಾಷ್ಟ್ರಿಯ ಪ್ರಶಸ್ತಿ ಪಡೆದ ರೊ. ಫಾರೂಕ್ ಚಂದ್ರನಗರ, ರೊ. ದಿವಾಕರ ಬಿ ಶೆಟ್ಟಿ ಕಳತ್ತೂರು, ರೊ. ದಿವಾಕರ ಡಿ ಶೆಟ್ಟಿ ಅಭಿನಂದಿಸಿ ಸನ್ಮಾನಿಸಿದರು. ಕಾಪು ಕ್ರೈಂ ಠಾಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಪುರುಷೋತ್ತಮ್ ಇವರನ್ನು ಕೂಡ ಅಭಿನಂದಿಸಿ ಸನ್ಮಾನಿಸಲಾಯಿತು.
ಪದ್ಮಶ್ರೀ ಮಂಜಮ್ಮ ಜೋಗತಿ ಬದುಕೇ ಒಂದು ಜೀವನ ಪಾಠ: ಡಾ. ತಲ್ಲೂರು ಶಿವರಾಮ ಶೆಟ್ಟಿ
ಉಡುಪಿ: ತೃತೀಯ ಲಿಂಗಿಯಾಗಿ ನಿರಂತರ ಸಂಘರ್ಷ ಜೀವನ ನಡೆಸಿ, ತನ್ನಂತಹ ಶೋಷಿತರ ಧ್ವನಿಯಾದ ಪದ್ಮಶ್ರೀ ಪುರಸ್ಕೃತೆ ಡಾ.ಮಂಜಮ್ಮ ಜೋಗತಿ ಅವರ ಬದುಕೇ ಅವರಂತಹ ತೊಳಲಾಟದ ಮಂದಿಗೆ ಜೀವನ ಪಾಠವಾಗಿದೆ ಎಂದು ತಲ್ಲೂರು ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ ಹಾಗೂ ರಂಗಭೂಮಿ ಉಡುಪಿ ಇದರ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಉಡುಪಿಯ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್, ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಜಿಲ್ಲಾ ಘಟಕ, ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ […]