ಉಡುಪಿ ವಕೀಲರ ಸಂಘದ ಚುನಾವಣೆಗೆ ಶಿರಿಯಾರ ಪ್ರಭಾಕರ್ ನಾಯಕ್ ನಾಮಪತ್ರ ಸಲ್ಲಿಕೆ

ಉಡುಪಿ: ಬ್ರಹ್ಮಾವರ ತಾಲೂಕಿನ ಕೋಟ ಹೋಬಳಿ ವ್ಯಾಪ್ತಿಯ ಶಿರಿಯಾರ ಗ್ರಾ.ಪಂ ನಿವಾಸಿ ಉಡುಪಿ ವಕೀಲರ ಸಂಘದ ಸದಸ್ಯ ಶಿರಿಯಾರ ಪ್ರಭಾಕರ್ ನಾಯಕ್ ಈ ಬಾರಿಯ ಉಡುಪಿ ವಕೀಲರ ಸಂಘದ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಉಡುಪಿ, ಕುಂದಾಪುರ, ಕಾರ್ಕಳ ಮುಂತಾದ ಕೋರ್ಟ್ ಗಳಲ್ಲಿ ಕಳೆದ ೨೩ ವರ್ಷಗಳಿಂದ ವಕೀಲರಾಗಿ ಸೇವೆ ಸಲ್ಲಿಸಿರುವ ಇವರು, ಅರೆ ಕಾಲಿಕ ಉಪನ್ಯಾಸಕರಾಗಿ, ಶಿರಿಯಾರ ಗ್ರಾ.ಪಂ ಉಪಾಧ್ಯಕ್ಷರಾಗಿ ಹಾಗೂ ಸಾಮಾಜಿಕ ನ್ಯಾಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ೩೦ ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಾಮಾಣಿಕತೆ, […]

ಕರ್ತವ್ಯ ಲೋಪ: ಮುಖ್ಯ ಶಿಕ್ಷಕಿ ಸೇವೆಯಿಂದ ವಜಾ

ಉಡುಪಿ: ಕಾರ್ಕಳ ತಾಲೂಕು ಎಣ್ಣೆಹೊಳೆ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಜ್ಯೋತಿ ಬಿ ಅವರು, ಈ ಹಿಂದೆ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಹಾಗೂ ಬೈಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ದಾಖಲಾದ ದೂರಿಗೆ ಸಂಬಂಧಿಸಿದಂತೆ, ಇಲಾಖಾ ವಿಚಾರಣಾ ವರದಿಯನ್ವಯ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶದಂತೆ, ಕರ್ನಾಟಕ ನಾಗರೀಕ ಸೇವಾ ನಿಯಮಗಳ ಅನ್ವಯ ಸರ್ಕಾರಿ ಸೇವೆಯಿಂದ ವಜಾಗೊಳಿಸಲಾಗಿರುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಾರ್ಕಳ ಕ್ಷೇತ್ರ […]

ಅಸಂಘಟಿತ ಕಾರ್ಮಿಕರೆಲ್ಲರೂ ಇ-ಶ್ರಮ್ ನಲ್ಲಿ ನೋಂದಾಯಿಸಿಕೊಳ್ಳುವುದು ಅವಶ್ಯ: ಡಾ. ಕೆ ವಿದ್ಯಾಕುಮಾರಿ

ಉಡುಪಿ: ಅಸಂಘಟಿತ ಕಾರ್ಮಿಕರು ಸರಕಾರದ ಸಾಮಾಜಿಕ ಭದ್ರತಾ ಯೋಜನೆಗಳೂ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಪಡೆಯಲು ಇ-ಶ್ರಮ್‌ನಲ್ಲಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಮಿಕ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರ ವಲಸೆ ಕಾರ್ಮಿಕರು, ಕಟ್ಟಡ ಕಾರ್ಮಿಕರು ಸೇರಿದಂತೆ ಅಸಂಘಟಿತ ವರ್ಗಗಳ ಕಾರ್ಮಿಕರುಗಳಿಗೆ ಸಂಬಂಧಿಸಿದ ಸಮಸ್ಯೆಗಳ ನಿವಾರಣೆ, ಕಾರ್ಮಿಕರಿಗೆ ವಿಶೇಷ ನೀತಿಗಳು, ಯೋಜನೆಗಳು ಹಾಗೂ ಕಲ್ಯಾಣ […]

ಕೊರಗ ಸಮುದಾಯದವರೊಂದಿಗೆ ರಕ್ಷಾ ಬಂಧನ ಆಚರಿಸಿದ ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಉಡುಪಿ ಗ್ರಾಮಾಂತರ ಯುವಮೋರ್ಚಾ ಸಾರಥ್ಯದಲ್ಲಿ 38ನೆ ಕಳ್ತೂರು ಸಂತೆಕಟ್ಟೆ ಕೊರಗ ಸಮುದಾಯ ಹಾಗೂ ಬಾಳೆಗುಂಡಿಯಲ್ಲಿ ನಡೆದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭಾಗವಹಿಸಿದರು.

ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಬಾಳು-ಸಮಪಾಲು ಪರಿಕಲ್ಪನೆಯ ಹರಿಕಾರ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ, ಸಮಬಾಳು-ಸಮಪಾಲು ಲಭಿಸಬೇಕೆಂಬ ಪರಿಕಲ್ಪನೆಯೊಂದಿಗೆ ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಬ್ರಹ್ಮಶ್ರೀ ನಾರಾಯಣ ಗುರು ದೊಡ್ಡ ಕ್ರಾಂತಿಯನ್ನೇ ಶಾಂತಿಮಾರ್ಗದಲ್ಲಿ ರಕ್ತಕ್ರಾಂತಿ ಇಲ್ಲದೇ ಮಾಡುವುದರೊಂದಿಗೆ ಸಮಾಜದಲ್ಲಿ ಸುಧಾರಣೆಯನ್ನು ತಂದಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಗುರುವಾರ ನಗರದ ಬನ್ನಂಜೆ ಶ್ರೀ ನಾರಾಯಣ ಗುರು ಆಡಿಟೋರಿಯಂನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಿಲ್ಲವರ ಸೇವಾ ಸಂಘ ಉಡುಪಿ (ರಿ) ಬನ್ನಂಜೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬ್ರಹ್ಮಶ್ರೀ […]