ಸೆ.2ರಂದು ಬೆಳಪು ವ್ಯವಸಾಯ ಸಹಕಾರಿ ಸಂಘದ ಅಮೃತ ಮಹೋತ್ಸವ ಸಂಭ್ರಮಾಚರಣೆ, ಬಡಾಗ್ರಾಮ ಉಚ್ಚಿಲದ ನವೀಕೃತ ಶಾಖೆ ಹಾಗೂ “ಸಹಕಾರಿ ಮಹಲ್” ಉದ್ಟಾಟನೆ
ಪಡುಬಿದ್ರಿ: ದೇವಿಪ್ರಸಾದ್ ಶೆಟ್ಟಿ ಸಾರಥ್ಯದಲ್ಲಿ ಮುನ್ನಡೆಯುತ್ತಿರುವ ಬೆಳಪು ವ್ಯವಸಾಯ ಸಹಕಾರಿ ಸಂಘವು ಅಮೃತ ಮಹೋತ್ಸವ ವರ್ಷಾಚರಣೆಯ ಸಂಭ್ರಮದಲ್ಲಿದ್ದು, ಸಂಘದ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಉಚ್ಚಿಲದಲ್ಲಿ ಸಹಕಾರಿ ಮಹಲ್ ಕಟ್ಟಡದ ಉದ್ಘಾಟನಾ ಸಮಾರಂಭವು ಸೆಪ್ಟಂಬರ್ 2ರಂದು ಬೆಳಗ್ಗೆ 9.30 ಗಂಟೆಗೆ ನಡೆಯಲಿದೆ. ಬೆಳಪು ಸಹಕಾರಿ ಸಂಘದ ಪ್ರಧಾನ ಕಚೇರಿಯ ಪಣಿಯೂರಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ ಮಾಹಿತಿ ನೀಡಿದರು. ಕಾರ್ಯಕ್ರಮಕ್ಕೆ ಮುನ್ನ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಿಂದ ಉಚ್ಚಿಲ ಸಹಕಾರಿ ಮಹಲ್‌ವರೆಗೆ ಸಹಕಾರಿ ಮೆರವಣಿಗೆ ನಡೆಯಲಿದೆ. […]
ಅಜೆಕಾರು ನಾಡಕಚೇರಿಗೆ ಲೋಕಾಯುಕ್ತ ದಾಳಿ: ಲಂಚ ಸ್ವೀಕರಿಸುವಾಗಲೇ ಲೋಕಾ ಪೊಲೀಸ್ ಬಲೆಗೆ!
ಕಾರ್ಕಳ: ಸರ್ಕಾರಿ ಕೆಲಸಕ್ಕಾಗಿ ನೌಕರನೊಬ್ಬ ವ್ಯಕ್ತಿಯೊಬ್ಬರ ಬಳಿ ಲಂಚ ಬೇಡಿಕೆಯಿಟ್ಟ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಜೆಕಾರು ನಾಡಕಚೇರಿಯ ಪ್ರಥಮ ದರ್ಜೆ ಸಹಾಯಕ ನಿಜಾಮುದ್ದೀನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಿರ್ಗಾನ ಗ್ರಾಮದ ವ್ಯಕ್ತಿಯೊಬ್ಬರು ಸಂತತಿ ನಕ್ಷೆಗಾಗಿ ಅರ್ಜಿ ಸಲ್ಲಿಸಿದ್ದರು, ಈ ಅರ್ಜಿ ವಿಲೇವಾರಿಗೆ ನಿಜಾಮುದ್ಧಿನ್ ಅವರು 5 ಸಾವಿರ ರೂಪಾಯಿ ಹಣಕ್ಕಾಗಿ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಅವರ ಬೇಡಿಕೆಯಂತೆ 4 ಸಾವಿರ ರೂಪಾಯಿ ಎರಡು ದಿನಗಳ ಹಿಂದಷ್ಟೇ ನೀಡಿದ್ದರು ಎನ್ನಲಾಗಿದ್ದು ಈ ವಿಚಾರವನ್ನು […]
ಉಡುಪಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಬೃಹತ್ ಪ್ರತಿಭಟನೆ
ಉಡುಪಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆ ನಡೆಸಿ ಈ ಮೇಲ್ಕಂಡ ಆಗ್ರಹ ಪಾತ್ರವನ್ನು ಜಿಲ್ಲಾಧಿಕಾರಿಯವರ ಮೂಲಕ ಮಾನ್ಯ ಮುಖ್ಯಮಂತ್ರಿ ಮತ್ತು ಮಾನ್ಯ ಉನ್ನತ ಶಿಕ್ಷಣ ಸಚಿವರಿಗೆ ತಲುಪಿಸುವಂತೆ ಆಗ್ರಹಿಸಲಾಯಿತು. ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕರಾದ ಗಣೇಶ್ ಪೂಜಾರಿ, ತಾಲೂಕು ಸಂಚಾಲಕ ಅಜಿತ್ ಜೋಗಿ, ನಗರ ಕಾರ್ಯದರ್ಶಿ ಶ್ರೀವತ್ಸ ಡಿ ಗಾಂವ್ಸ್ ಕರ್ ಸಹ ಕಾರ್ಯದರ್ಶಿ ಕಾರ್ತಿಕ್, ಭಾವನಾ, ನಗರ […]
ಉಡುಪಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ರಕ್ಷಾಬಂಧನ ಆಚರಣೆ: ವಿದ್ಯಾರ್ಥಿಗಳಿಂದ ಸಾವಿರಕ್ಕೂ ಅಧಿಕ ಅಧಿಕಾರಿಗಳಿಗೆ ರಕ್ಷಾಬಂಧನ
ಉಡುಪಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ರಕ್ಷಾ ಬಂಧನ ಪ್ರಯುಕ್ತ ಉಡುಪಿ ನಗರದಾದ್ಯಂತ ರಾಷ್ಟ್ರ ರಕ್ಷೆಯ ಸಂಕಲ್ಪದೊಂದಿಗೆ ಸಾಮೂಹಿಕ ರಕ್ಷಾ ಬಂಧನ ಕಾರ್ಯಕ್ರಮವನ್ನು ನಗರದ ವಿವಿಧ ಸರ್ಕಾರಿ ಕಚೇರಿಗಳಲ್ಲಿ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ, ಮಣಿಪಾಲ ಪೊಲೀಸ್ ಠಾಣೆ, ಅಂಚೆ ಕಚೇರಿ, ಉಡುಪಿ ನಗರ ಪೊಲೀಸ್ ಠಾಣೆ, ಜಿಲ್ಲಾ ನ್ಯಾಯಾಲಯ, ಉಪನೊಂದವನಾಧಿಕಾರಿ ಕಚೇರಿ, ಮಿನಿ ವಿಧಾನಸೌಧ ಉಡುಪಿ (ತಾಲೂಕು ಕಚೇರಿ), ಪೊಲೀಸ್ ವರಿಷ್ಠಾಧಿಕಾರಿ ಕಚೇರಿ, ಮಾನ್ಯ ಶಾಸಕರು ಸೇರಿದಂತೆ ವಿವಿಧ ಸರ್ಕಾರಿ ಅಧಿಕಾರಿಗಳಿಗೆ ರಾಷ್ಟ್ರ ಮೊದಲು […]
ತಾಯಿ ಮರಣ ಪ್ರಮಾಣ ಕಡಿಮೆಗೊಳಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ವೈದ್ಯರು ಹಾಗೂ ರೋಗಿಯ ನಡುವೆ ಮಾನವೀಯ ಅನುಬಂಧ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸರಿಯಾದ ಮಾರ್ಗದರ್ಶನ ನೀಡಿ, ಅರಿವು ಮೂಡಿಸಿದಲ್ಲಿ ತಾಯಿ ಮರಣ ಪ್ರಮಾಣವನ್ನು ಕಡಿಮೆಗೊಳಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ನಗರದ ಕೆ.ಎಂ.ಸಿ. ಮಣಿಪಾಲದ ಟಿ.ಎಂ.ಎ. ಪೈ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ ಹಾಗೂ ಪ್ರಸೂತಿ ಹಾಗೂ ಸ್ತ್ರೀರೋಗ ವಿಭಾಗ ಮತ್ತು ಸಮುದಾಯ ವೈದ್ಯಕೀಯ ವಿಭಾಗ, […]