ಸೆ.3ರಂದು ಶಿಕ್ಷಕರ ಅರ್ಹತಾ ಪರೀಕ್ಷೆ: ನಿಷೇಧಾಜ್ಞೆ
ಉಡುಪಿ: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಸ್ಪರ್ಧಾತ್ಮಕ ಪರೀಕ್ಷೆಯು ಸೆಪ್ಟಂಬರ್ 3 ರಂದು ಜಿಲ್ಲೆಯ ಒಟ್ಟು 9 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ […]
ಗರ್ಭ ಪೂರ್ವ ಹಾಗೂ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಹಚ್ಚುವುದು ಕಾನೂನಿನ ಅಡಿಯಲ್ಲಿ ಅಪರಾಧ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಗರ್ಭ ಪೂರ್ವ ಹಾಗೂ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಮಾಡುವುದು ಕಾನೂನಿನ ಅಡಿಯಲ್ಲಿ ಅಪರಾಧ. ಇತ್ತೀಚಿನ ದಿನಗಳಲ್ಲಿ ಹೆಣ್ಣು ಹಾಗೂ ಗಂಡು ಮಕ್ಕಳ ಲಿಂಗಾನುಪಾತ ವ್ಯತ್ಯಾಸ ಉಂಟಾಗಿ ಸಮಾಜದಲ್ಲಿ ಗಂಭೀರ ಪರಿಣಾಮ ಉಂಟಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಕ್ಷಮ ಪ್ರಾಧಿಕಾರ ಪಿ.ಸಿ. […]
ಒಂದು ಹೆಣ್ಣಿಗೆ ನ್ಯಾಯ ಕೊಡಬೇಕು ಎನ್ನುವ ತಿಮರೋಡಿಗೆ ಇನ್ನೊಂದು ಮಹಿಳೆಗೆ ಗೌರವ ಕೊಡುವ ಕನಿಷ್ಠ ಪರಿಜ್ಞಾನ ಇಲ್ಲವೇ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಹೆಣ್ಣಿಗೆ ನ್ಯಾಯ ಕೊಡಬೇಕು ಎಂದು ಹೋರಾಟಕ್ಕೆ ಇಳಿದಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಮಹಿಳೆಗೆ ಗೌರವ ಕೊಡುವ ಕನಿಷ್ಠ ಪರಿಜ್ಞಾನ ಇಲ್ಲವೆ? ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಶ್ನಿಸಿದ್ದಾರೆ. ಸೌಜನ್ಯಾ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಆ.29 ರಂದು ಉಡುಪಿಯ ಅಜ್ಜರಕಾಡು ಹುತಾತ್ಮ ಸೈನಿಕರ ಯುದ್ಧ ಸ್ಮಾರಕದ ಬಳಿ ನಡೆದ ಪ್ರತಿಭಟನಾ ಸಭೆಯಲ್ಲಿ ಕೇಂದ್ರ ಸಚಿವೆ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಸಹಿತ ಬಿಜೆಪಿ ಹಿರಿಯ ಮುಖಂಡರ ಬಗ್ಗೆ ಮಹೇಶ್ ಶೆಟ್ಟಿ ತಿಮರೋಡಿ […]
ಉಡುಪಿ: ಸೌಜನ್ಯ ಪರ ಹೋರಾಟ ಸ್ಥಳದಲ್ಲಿ ದಿಢೀರ್ ಪ್ರತ್ಯಕ್ಷರಾದ ಮಹಿಳೆಯರಿಂದ ವೀರೇಂದ್ರ ಹೆಗ್ಗಡೆ ಪರ ಘೋಷಣೆ
ಉಡುಪಿ: ಮಂಗಳವಾರದಂದು ಅಜ್ಜರಕಾಡು ಹುತಾತ್ಮ ಸ್ಮಾರಕ ಸಮೀಪ ನಡೆಯುತ್ತಿದ್ದ ಸೌಜನ್ಯ ಪರ ಹೋರಾಟ ಸ್ಥಳದಲ್ಲಿ ಧರ್ಮಸ್ಥಳ ಕ್ಷೇತ್ರ ಹಾಗೂ ವೀರೇಂದ್ರ ಹೆಗ್ಗಡೆಯವರ ಪರವಾಗಿ ನೂರಾರು ಮಂದಿ ಮಹಿಳೆಯರು ಪ್ರತಿಭಟನೆಗೆ ಬಂದಿದ್ದರು. ಮಹಿಳೆಯರು ಧರ್ಮಸ್ಥಳ ಹಾಗೂ ಹೆಗ್ಗಡೆಯವರ ಪರವಾಗಿ ಘೋಷಣೆ ಕೂಗಿದರು. ಪ್ರತಿಭಟನಾ ಸ್ಥಳದಿಂದ ಪ್ರತಿಭಟನಾ ನಿರತ ಮಹಿಳೆಯರನ್ನು ಪೊಲೀಸರು ಹೊರಕ್ಕೆ ಕಳುಹಿಸಿದರು. ಈ ವೇಳೆ ಉಡುಪಿ ಪೊಲೀಸರು ಹಾಗೂ ಮಹಿಳೆಯರ ಮಧ್ಯೆ ಕೆಲಕಾಲ ವಾಗ್ವಾದ ನಡೆಯಿತು.
ಸಾಹಿತ್ಯಕ್ಕೆ ಭಿನ್ನ ಲೋಕಕ್ಕೆ ಪ್ರವೇಶ ಕೊಡುವ ಸಾಮರ್ಥ್ಯವಿದೆ: ಹೆಚ್.ಬಿ ಇಂದ್ರಕುಮಾರ್
ಕುಂದಾಪುರ: ಸಾಹಿತ್ಯಕ್ಕೆ ಹೊಸದಾದ ಭಿನ್ನ ಲೋಕಕ್ಕೆ ಪ್ರವೇಶ ಕೊಡುವ ಶಕ್ತಿ ಮತ್ತು ಸಾಮರ್ಥ್ಯ ಇದೆ ಎಂದು ಹೆಚ್.ಬಿ ಇಂದ್ರಕುಮಾರ್ ಹೇಳಿದರು. ಅವರು ಆಗಸ್ಟ್ 30ರಂದು ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ನಡೆದ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ತಳಿಕಂಡಿ ಕುಂದಾಪ್ರ ಕನ್ನಡ ಸಾಂಸ್ಕೃತಿಕ ಕೋಶ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಸಾಹಿತ್ಯ ನಮಗೆ ಭಿನ್ನ ನೆಲೆಗಳ ಹುಡುಕಾಟಕ್ಕೆ ಅನುವು ಮಾಡಿಕೊಡುತ್ತದೆ. ಕಥೆ, ಕಾದಂಬರಿ, ಕವನ ಸಂಕಲನಗಳನ್ನು ಬೇರೆ ಬೇರೆ ನೆಲೆಗಳಲ್ಲಿ […]