ಜಲಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ಬಣ್ಣದ ವಿಗ್ರಹಗಳ ವಿಸರ್ಜನೆ ನಿಷೇಧ

ಉಡುಪಿ: ಜಿಲ್ಲೆಯಲ್ಲಿ ಸ್ವರ್ಣಗೌರಿ ಹಾಗೂ ವಿನಾಯಕ ಚತುರ್ಥಿ ಹಬ್ಬಗಳ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ.) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ, ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲ ಮೂಲಗಳಲ್ಲಿ ವಿಸರ್ಜಿಸುತ್ತಿದ್ದು, ಇದರಿಂದಾಗಿ ನೈಸರ್ಗಿಕ ಜಲ ಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯನಿಕ ಗುಣಗಳು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೇ ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುವುದರ ಜೊತೆಗೆ ಸಾರ್ವಜನಿಕರ ಆರೊಗ್ಯಕ್ಕೂ ಧಕ್ಕೆ ಉಂಟಾಗುತ್ತದೆ. ಆದ್ದರಿಂದ ಕರ್ನಾಟಕ […]

ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ: ಸಹಸ್ರಾರು ಜನ ಭಾಗಿ

ಉಡುಪಿ: ಬೆಳ್ತಂಗಡಿಯ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ತೀವ್ರ ಸ್ವರೂಪದ ಪ್ರತಿಭಟನೆಯಲ್ಲಿ ಬದಲಾಗಿದ್ದು, ಉಡುಪಿಯಲ್ಲಿ ಮಂಗಳವಾರದಂದು ಬೃಹತ್ ಪ್ರತಿಭಟನೆ ನಡೆಯಿತು. ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಸೌಜನ್ಯ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಗೂ ಮೊದಲು ಕೃಷ್ಣಮಠದಲ್ಲಿ ಪ್ರಾರ್ಥನೆ ಸಲ್ಲಿಸಿ ನಂತರ ಮೆರವಣಿಗೆಯಲ್ಲಿ ಘೋಷಣೆಗಳನ್ನು ಕೂಗುತ್ತಾ ಸಾಗಲಾಯಿತು. ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ತಾಯಿ ಕುಸುಮಾವತಿ ಹಾಗೂ ತಮ್ಮಣ್ಣ ಶೆಟ್ಟಿ ಭಾಗವಹಿಸಿ ಸೌಜನ್ಯ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆದು ಅಪರಾಧಿಗಳಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು. […]

ಮಂಗಳೂರು: ವಿಟಿಯು ರಾಜ್ಯ ಮಟ್ಟದ ಅಂತರಕಾಲೇಜು ಫುಟ್‌ಬಾಲ್ ಪಂದ್ಯಾವಳಿ ಸಮಾರೋಪ ಸಮಾರಂಭ

ಮಂಗಳೂರು: ವಿಟಿಯು ರಾಜ್ಯ ಮಟ್ಟದ ಅಂತರಕಾಲೇಜು ಫುಟ್‌ಬಾಲ್ ಪಂದ್ಯಾವಳಿಯ ಸಮಾರೋಪ ಸಮಾರಂಭವು ಆಗಸ್ಟ್ 27 ರಂದು ಮಂಗಳೂರಿನ PACE ಕ್ಯಾಂಪಸ್‌ನಲ್ಲಿ ನಡೆಯಿತು. PACE ವಿದ್ಯಾರ್ಥಿ ಅನ್ಸಾರ್ ವಿಟಿಯು ರಾಜ್ಯ ಮಟ್ಟದ ಅಂತರಕಾಲೇಜು ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ಗೋಲು ಗಳಿಸಿದ ಆಟಗಾರನಾಗಿ ಹೊರಹೊಮ್ಮಿದರು. PACE ನ ಪ್ರಾಂಶುಪಾಲ ಡಾ. ರಮೀಸ್ ಎಂ.ಕೆ. ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಬಹುಮಾನ ವಿತರಣಾ ಸಮಾರಂಭದಲ್ಲಿ ಯಾಸೀನ್, (ಮಾಜಿ ರಾಜ್ಯ ಮಟ್ಟದ ಆಟಗಾರ ಅಲ್ ಅಮೀನ್ ಕಾಲೇಜು ಬೆಂಗಳೂರು), ಪ್ರೊ. ಜಹೀರ್, (ಸಿವಿಲ್ […]

ಉಡುಪಿ: ಹೊಟೇಲ್ ಸಪ್ಲೈಯರ್ ಆತ್ಮಹತ್ಯೆ

ಉಡುಪಿ: ಇಲ್ಲಿನ ಹೋಟೆಲ್ ಒಂದರಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದ 53 ವರ್ಷದ ವ್ಯಕ್ತಿಯೊಬ್ಬರು ಮಿಷನ್ ಕಾಂಪೌಂಡ್ ಬಳಿಯ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಇಗ್ನೇಷಿಯಸ್ ಮಾರ್ಕ್ ಸಲ್ಡಾನ್ಹಾ ಎಂದು ಗುರುತಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಹೊಟೇಲ್ ಒಂದರಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದ ಇವರು ವೈಯಕ್ತಿಕ ಸಮಸ್ಯೆಗಳಿಂದಾಗಿ ಜೀವನದಲ್ಲಿ ನೊಂದಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ದೊಡ್ಡಣ್ಣಗುಡ್ಡೆ: ಸೆ. 1 ರಂದು ದುರ್ಗಾ ಆದಿಶಕ್ತಿ ದೇವಿಗೆ ಗಾಜಿನ ಬಳೆಗಳ ಅಲಂಕಾರ

ದೊಡ್ಡಣ್ಣಗುಡ್ಡೆ: ಶ್ರೀ ದುರ್ಗಾದಿಶಕ್ತಿ ದೇವಿ ಕ್ಷೇತ್ರದಲ್ಲಿ ಸೆ. 1 ಶುಕ್ರವಾರದಂದು ಶ್ರೀ ಚಕ್ರ ಪೀಠ ಸುರಪೂಜಿತೆ ದೇವಿಯನ್ನು ಗಾಜಿನ ಬಳೆಗಳಿಂದ ವಿಶೇಷವಾಗಿ ಅಲಂಕೃತಗೊಳಿಸಿ ಪೂಜಿಸಲಾಗುವುದು. ಕಳೆದ ವರ್ಷ ಒಂದು ಲಕ್ಷಕ್ಕಿಂತಲೂ ಅಧಿಕ ಗಾಜಿನ ಬಳೆಗಳು ಭಕ್ತರಿಂದ ಸೇವಾ ರೂಪದಲ್ಲಿ ಹರಿದು ಬಂದಿತ್ತು. ಈ ಬಾರಿಯೂ ಸೋನೆ ತಿಂಗಳ ಈ ವಿಶೇಷ ಅಲಂಕಾರಕ್ಕೆ ಬಳೆಗಳನ್ನು ಅಥವಾ ಹಣವನ್ನು ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ ಇವರನ್ನು ಮೊಬೈಲ್ ಸಂಖ್ಯೆ 9342749650 ಸಂಪರ್ಕಿಸಬಹುದು ಎಂದು ಕ್ಷೇತ್ರದ […]