ಉಡುಪಿ:ಜಲ್ ಜೀವನ್ ಮಿಷನ್ ಯೋಜನೆಯ ಕಾಮಗಾರಿಯ ಬಗ್ಗೆ ವರದಿ ನೀಡಿ : ಸಂಸದ ಬಿ.ವೈ ರಾಘವೇಂದ್ರ

ಉಡುಪಿ: ಜನಸಾಮಾನ್ಯರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಜಲ್ ಜೀವನ್ ಮಿಷನ್ ಯೋಜನೆಯಡಿಜಿಲ್ಲೆಯ 19 ಕ್ಕೂ ಹೆಚ್ಚು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿಗಳು ಸಮಾಧಾನಕರವಾಗಿಲ್ಲ ಎಂಬ ನಿರ್ಣಯವನ್ನು ಗ್ರಾಮ ಪಂಚಾಯತಿ ಮಟ್ಟದಲ್ಲಿ ತೆಗೆದುಕೊಳ್ಳಲಾಗಿದೆ ಈ ಬಗ್ಗೆ ವರದಿ ನೀಡಬೇಕೆಂದು ಅಭಿಯಂತರರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) […]
ಉಡುಪಿ:ಮಕ್ಕಳ ಸಹಾಯವಾಣಿ ಸಂಖ್ಯೆ 1098 ಪ್ರದರ್ಶಿಸಲು ಸೂಚನೆ

ಉಡುಪಿ: ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ / ಸೇವಾ ಸಂಸ್ಥೆಗಳ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿಸಂಖ್ಯೆ 1098 ನ್ನು ಕಡ್ಡಾಯವಾಗಿ ಬರೆಸಲು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ. ಮಕ್ಕಳ ಹಕ್ಕುಗಳ ರಕ್ಷಣೆ ಇಂದಿನ ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅನುಷ್ಠಾನಗೊಂಡಿರುವ ಮಿಷನ್ ವಾತ್ಸಲ್ಯ ಯೋಜನೆಯು ಮಕ್ಕಳ ಅಭಿವೃದ್ಧಿ ಮತ್ತು ರಕ್ಷಣೆಯ ಆದ್ಯತೆಯನ್ನು ಸಾಧಿಸುವ ಒಂದು ಮಾರ್ಗವಾಗಿದೆ. ಸಂಕಷ್ಟದಲ್ಲಿನ ಹಾಗೂ ಸವಾಲಿನಲ್ಲಿರುವ ಮಕ್ಕಳಹಿತರಕ್ಷಣೆಗೆ ಹೆಚ್ಚು ಒತ್ತು ನೀಡುತ್ತಿದೆ. ಇಂತಹ ಮಕ್ಕಳ ಗುರುತಿಸುವಿಕೆ, ಸಂಕಷ್ಟ ಸ್ಥಿತಿಯಲ್ಲಿ ಮಾಹಿತಿ ಹಂಚಿಕೊಳ್ಳಲು […]
ಪರ್ಕಳ ಸಿಎಸ್ ಸಿ ಸೇವಾ ಕೇಂದ್ರದಲ್ಲಿ ‘ಡಿಜಿ ಪೇ ಲೈಟ್’ ವ್ಯವಸ್ಥೆಗೆ ಚಾಲನೆ.

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಂಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಇದರ ಮಣಿಪಾಲ ವಲಯ ವ್ಯಾಪ್ತಿಯ ಪರ್ಕಳ CSC ಸೇವಾ ಕೇಂದ್ರದಲ್ಲಿ ಉಡುಪಿ ತಾಲೂಕಿನ ಪ್ರಥಮ ‘ಡಿಜಿ ಪೇ ಲೈಟ್’ ವ್ಯವಸ್ಥೆಯನ್ನು ತಾಲೂಕು ಜನಜಾಗ್ರತಿ ವೇದಿಕೆಯ ಅಧ್ಯಕ್ಷರು ಸತ್ಯಾನಂದ ನಾಯಕ್ ಆತ್ರಾಡಿ ಇವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟನೆ ಮಾಡಿ, ಮಹಾ ಗಣಪತಿ ಸಂಘದ ಶ್ರೀಮತಿ ಆರತಿ ಪಾಟೀಲ್ ಅವರಿಗೆ 4700-00 ರೂಪಾಯಿ ಯನ್ನು ATM ನಲ್ಲಿ ಕೊಡಿಸುವ ಮೂಲಕ ವಿದ್ಯುಕ್ತವಾಗಿ […]
ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮೈಸೂರು : ಮಹಿಳೆ ಎಂದರೇ ಸ್ವಾವಲಂಬನೆಯ ಪ್ರತೀಕ. ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ ಕಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಹೇಳಿದರು. ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಜೆ.ಕೆ.ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಸರಾ- 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಹಿಳೆಯರಿಗೆ ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ಕಟ್ಟಿಕೊಡಬೇಕು, ದುಡಿಯುವ ಕೈಗಳಿಗೆ ಕೆಲಸ ಕೊಡಬೇಕು, ಮಹಿಳೆಯರು ಸ್ವಾವಲಂಬಿಯಾಗಿ ಜೀವಿಸಲು ಸಹಾಯ ಮಾಡಬೇಕು […]
ಉಡುಪಿ-ಉಚ್ಚಿಲ ದಸರಾಕ್ಕೆ ಅದ್ಧೂರಿ ಚಾಲನೆ: ದೇವಿಯ ದರ್ಶನಕ್ಕೆ ಹರಿದು ಬಂದ ಜನಸಾಗರ.!

ಉಡುಪಿ: ದೇವಾಲಯಗಳ ನಗರಿ ಉಡುಪಿಯಲ್ಲಿ ದಸರಾ ಮಹೋತ್ಸವದ ಸಂಭ್ರಮ ಕಳೆಗಟ್ಟಿದೆ. ಕಾಪು ತಾಲೂಕಿನ ಉಚ್ಚಿಲ ಮಹಾಲಕ್ಷ್ಮೀ ದೇವಾಲಯದಲ್ಲಿ ದಸರಾ ಪ್ರಯುಕ್ತ ನವದುರ್ಗೆಯರ ಪ್ರತಿಷ್ಠಾಪನೆ ನಡೆದಿದೆ. ದೇವರ ಸೇವೆಯ ಜೊತೆಗೆ ಕರಾವಳಿಯ ಸಂಸ್ಕೃತಿ ಆಚಾರ ವಿಚಾರ ಪ್ರತಿಬಿಂಬಿಸುವ ಆಕರ್ಷಕ ವಸ್ತು ಪ್ರದರ್ಶನ ಲಕ್ಷಾಂತರ ಜನರ ಗಮನ ಸೆಳೆಯುತ್ತಿವೆ. ಉಡುಪಿ ಜಿಲ್ಲೆಯ ಉಚ್ಚಿಲದಲ್ಲಿ ಭವ್ಯವಾಗಿ ನಿರ್ಮಾಣಗೊಂಡಿರುವ, ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವೈಭವದಿಂದ ದಸರಾ ಹಬ್ಬವನ್ನು ಆಚರಿಸಲಾಗುತ್ತಿದೆ. ಶಾರದಾ ಮಾತೆಗೆ ಆರತಿ ಬೆಳಗಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಬಳಿಕ ವೇದಿಕೆಯಲ್ಲಿ ಹಲವು […]