ಮಂಗಳೂರು: ಕಾಂಚನಾ ಗ್ರೂಪ್ ನಲ್ಲಿ ಖಾಲಿ ಇರುವ ಹುದ್ದೆಗೆ ನೇರ ಸಂದರ್ಶನ

ಮಂಗಳೂರು: ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕಾಂಚನಾ ಗ್ರೂಪ್, ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಕಾಂಚನಾ ಗ್ರೂಪ್ ಇಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಆ.31 ಗುರುವಾರದಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ1.30ರವರೆಗೆ ಪಿ.ಯು.ಸಿ, ಪದವಿ, ಐ.ಟಿ.ಐ ಅಥವಾ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಮಹಾನಗರ ಪಾಲಿಕೆ ಕಟ್ಟಡ, ಲಾಲ್‌ಭಾಗ್, ಮಂಗಳೂರು ಇಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಹುದ್ದೆಗಳ ಮತ್ತು ಕೆಲಸದ ಸ್ಥಳದ ವಿವರ 1. ಸೇಲ್ಸ್ ಎಕ್ಸಿಕ್ಯೂಟಿವ್. […]

ಚೆಸ್ ಗ್ರ್ಯಾಂಡ್ ಮಾಸ್ಟರ್ ಪ್ರಗ್ನಾನಂದನ ಪೋಷಕರಿಗೆ ಎಲೆಕ್ಟ್ರಿಕ್ ಕಾರನ್ನು ಉಡುಗೊರೆಯಾಗಿ ನೀಡಲಿದ್ದಾರೆ ಆನಂದ್ ಮಹೀಂದ್ರಾ!!

ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರಾ , ಭಾರತದ ಕಿರಿಯ ಚೆಸ್ ಗ್ರ್ಯಾಂಡ್ ಮಾಸ್ಟರ್ ಪ್ರಗ್ನಾನಂದ ಅವರ ಪೋಷಕರಿಗೆ ಎಲೆಕ್ಟ್ರಿಕ್ ಕಾರನ್ನು ಉಡುಗೊರೆಯಾಗಿ ನೀಡುವ ಬಗ್ಗೆ ಟ್ವೀಟ್ ಮಾಡಿದ್ದಾರೆ. ವಿಶ್ವ ಚೆಸ್ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್‌ಸೆನ್ ವಿರುದ್ಧ ಇತ್ತೀಚಿನ ವಿಜಯವನ್ನು ಗುರುತಿಸಿ ಮಹೀಂದ್ರಾ ಥಾರ್ ಅನ್ನು ಉಡುಗೊರೆಯಾಗಿ ನೀಡುವಂತೆ ಟ್ವಿಟರ್ ಬಳಕೆದಾರರು ಅವರನ್ನು ಕೇಳಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಆನಂದ್ ಮಹೀಂದ್ರಾ, ಮಕ್ಕಳಲ್ಲಿ ಚೆಸ್ ಬಗ್ಗೆ ಆಸಕ್ತಿಯನ್ನುಬೆಳೆಸಲು ಪ್ರೇರಣಾದಯಕವಾಗಿರುವ ಪ್ರಗ್ನಾನಂದನ ತಾಯಿ ನಾಗಲಕ್ಷ್ಮಿ ಮತ್ತು  ರಮೇಶ್‌ಬಾಬು ಅವರಿಗೆ XUV4OO […]

ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆ ಯೋಜನೆಯಡಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗಾಗಿ ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ತಂತ್ರಜ್ಞಾನ ಅಥವಾ ಆಹಾರ ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ/ ಪದವಿಯನ್ನು ಅಧಿಕೃತ ರಾಷ್ಟ್ರ ಅಥವಾ ಅಂತರಾಷ್ಟ್ರೀಯ ವಿಶ್ವವಿದ್ಯಾಲಯ / ಸಂಸ್ಥೆಗಳಿಂದ ಪಡೆದಿರುವ, ಆಹಾರ ಸಂಸ್ಕರಣಾ ಕೈಗಾರಿಕೆಗಳಿಗೆ ತಂತ್ರಜ್ಞಾನ ಉನ್ನತೀಕರಣ, ಹೊಸ ಉತ್ಪನ್ನ ಅಭಿವೃದ್ಧಿ, ಗುಣಮಟ್ಟ ಖಾತ್ರಿ, ಆಹಾರ ಭದ್ರತಾ ನಿರ್ವಹಣೆಗಾಗಿ ಸಲಹಾ ಸೇವೆಗಳನ್ನು ಒದಗಿಸಿದ ಕುರಿತು 3-5 ವರ್ಷಗಳ ಅನುಭವ […]

ಉಡುಪಿ: ವ್ಯಕ್ತಿಗಳು ನಾಪತ್ತೆ

ಉಡುಪಿ: ಬ್ರಹ್ಮಾವರ ತಾಲೂಕು ಹನೇಹಳ್ಳಿ ಗ್ರಾಮದ ಮಾಸ್ತಿನಗರ ನಿವಾಸಿ ಶಂಕರ ಸುವರ್ಣ (65) ಎಂಬ ವ್ಯಕ್ತಿಯು 2020 ರ ನವೆಂಬರ್ 10 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820- 2526444, ಬ್ರಹ್ಮಾವರ ಪೊಲೀಸ್ ವೃತ್ತ […]

ಉಡುಪಿ: ನಾಳೆ(ಆ. 30) ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ನಗರಸಭೆ ಇವರ ಸಹಯೋಗದಲ್ಲಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತೀ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಸಮಾರಂಭವು ಆಗಸ್ಟ್ 30 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಕಿನ್ನಿಮುಲ್ಕಿ ಮಿಷನ್ ಕಂಪೌಂಡ್‌ನ ಬಾಸೆಲ್ ಮಿಷನರಿಸ್ ಮೆಮೋರಿಯಲ್ ಆಡಿಟೋರಿಯಂನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ […]