ದೇಶವನ್ನು ವೈಜ್ಞಾನಿಕವಾಗಿ, ವೈಚಾರಿಕವಾಗಿ ಆರ್ಥಿಕವಾಗಿ ಮುನ್ನಡೆಸುವ ಪದವೀಧರರ ಅಗತ್ಯ : ಸಿಎಂ ಸಿದ್ದರಾಮಯ್ಯ
ಬೆಂಗಳೂರು: ವೈಚಾರಿಕತೆ ಇಲ್ಲದೆ ತಲೆ ತುಂಬ ಕೇವಲ ಮೌಡ್ಯವನ್ನೇ ತುಂಬಿಕೊಂಡ ಪದವೀಧರರು ವಿಶ್ವ ವಿದ್ಯಾಲಯಗಳಿಂದ ಹೊರಗೆ ಬಂದರೆ ದೇಶಕ್ಕೆ, ನಾಡಿಗೆ ಮತ್ತು ಈ ಸಮಾಜಕ್ಕೆ ಏನು ಪ್ರಯೋಜನ ? ಆದ್ದರಿಂದ ವೈಜ್ಞಾನಿಕ ಮನೋಭಾವದ ಪದವೀಧರರನ್ನು ಸಜ್ಜುಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಲಪತಿಗಳಿಗೆ ಸೂಚನೆ ನೀಡಿದರು. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಆ. 21 ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ಕಾರದ ವ್ಯಾಪ್ತಿಯ ವಿಶ್ವವಿದ್ಯಾಲಯಗಳ ಉಪಕುಲಪತಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ರೀತಿ ಪ್ರಶ್ನಿಸಿದರು. […]
ಸೌಜನ್ಯ ಪ್ರಕರಣ ಆರೋಪ – ಪ್ರತ್ಯಾರೋಪ: ದೇವರ ಮುಂದೆ ಆಣೆ -ಪ್ರಮಾಣ
ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪರಿಸರದಲ್ಲಿ ದಶಕದ ಹಿಂದೆ ನಡೆದಿದ್ದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ನ್ಯಾಯ ಸಿಗಲಿಲ್ಲ ಎಂದು ಹನ್ನೊಂದು ವರ್ಷಗಳ ಬಳಿಕ ಇತ್ತೀಚೆಗೆ ಕೆಲವು ದಿನಗಳಿಂದ ಮತ್ತೆ ಈ ಪ್ರಕರಣ ಮುನ್ನೆಲೆಗೆ ಬಂದಿದೆ. ನಾವು ಸೌಜನ್ಯಾ ಕುಟುಂಬಸ್ಥರಿಗೆ ನ್ಯಾಯ ಕೊಡಿಸುವ ಸಲುವಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಹಲವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯಶೋಧನೆ ನಡೆಸುತ್ತಿರುವುದಾಗಿ ಉಡುಪಿ ಜಿಲ್ಲೆಯ ಪತ್ರಕರ್ತ ವಸಂತ್ […]
ಪ್ರೀತಿಸುತ್ತಿದ್ದ ಯುವತಿ ಮೃತಪಟ್ಟ ಚಿಂತೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ
ಬ್ರಹ್ಮಾವರ: ಪ್ರೀತಿಸುತ್ತಿದ್ದ ಯುವತಿ ಮೃತಪಟ್ಟ ಚಿಂತೆಯಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದಲ್ಲಿ ಸಂಭವಿಸಿದೆ. ಮೃತರನ್ನು ನೀಲಾವರ ಗ್ರಾಮದ ಬಾವಲಿಕುದ್ರು ನಿವಾಸಿ ಸುನೀತ ಜೆನಿಫರ್ ಡಿಸೋಜ ಎಂಬವರ ಮಗ ಸುಜಿತ್ ಡೇವಿಡ್ ಡಿಸೋಜ(21) ಎಂದು ಗುರುತಿಸಲಾಗಿದೆ. ಸಂತೆಕಟ್ಟೆ ಮಿಲಾಗ್ರಿಸ್ ಕಾಲೇಜಿನಲ್ಲಿ 2ನೇ ವರ್ಷದ ಬಿ.ಕಾಂ ವ್ಯಾಸಾಂಗ ಮಾಡುತ್ತಿದ್ದ, ಪ್ರೀತಿಸುತ್ತಿದ್ದ ಹುಡುಗಿ ಕೆಲ ದಿನಗಳ ಹಿಂದೆ ಮೃತಪಟ್ಟಿದ್ದರೆನ್ನಲಾಗಿದೆ. ಇದೇ ವಿಚಾರವಾಗಿ ಸುಜಿತ್ ಡೇವಿಡ್ ಡಿಸೋಜ ಮಾನಸಿಕವಾಗಿ ನೊಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ […]
ವಿಶ್ವ ಛಾಯಾಗ್ರಹಣ ದಿನಾಚರಣೆಯಲ್ಲಿ ಛಾಯಾ ಸಂಸ್ಕ್ರತಿ ವಿಶೇಷ ಕಾರ್ಯಕ್ರಮ
ಉಡುಪಿ: ಸೀಮಿತ ವರ್ತಮಾನಕ್ಕೆ ಮಾತ್ರವಲ್ಲ, ಎಂದೆಂದಿಗೂ ಛಾಯಾಗ್ರಹಣದ ಪ್ರಾಮುಖ್ಯತೆ ನಿರಂತರವಾಗಿರುತ್ತದೆ. ಎಲ್ಲರ ಬದುಕಿನಲ್ಲಿ ಛಾಯಾಚಿತ್ರದ ಪಾತ್ರ ಬಹು ಮುಖ್ಯ. ಛಾಯಚಿತ್ರ ಕಲಾವಿದ ದಾಖಲೆಗಾರನು ಹೌದು ಎಂದು ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿತಿನ್ ಬೆಳುವಾಯಿ ಆಶಯ ವ್ಯಕ್ತಪಡಿಸಿದ್ದರು. ಅವರು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಹಾಗು ಮಲಬಾರ್ ಗೋಲ್ಡ್ & ಡೈಮಂಡ್ಸ್ ಆಯೋಜಿಸಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಕೆಮೆರಾ ಕ್ಲಿಕ್ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಛಾಯಾ ಹಾಗು ಮಾಧ್ಯಮ ಗೋಷ್ಠಿಯಲ್ಲಿ […]
ಆ.22-23: ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಆಗಸ್ಟ್ 22 ಮತ್ತು 23 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 220/110/11 ಕೆ.ವಿ ಕೇಮಾರ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಫೀಡರ್‌ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್ ಸಪ್ಲೈ 110/11 ಕೆ.ವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11ಕೆ.ವಿ ಪದವು ಫೀಡರ್ ಹಾಗೂ 110/11 ಕೆ.ವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಫೀಡರ್‌ಗಳಾದ […]