ಆಗಸ್ಟ್ 22, 23: ಉಡುಪಿ ನಗರಸಭಾ ವ್ಯಾಪ್ತಿಯ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ 35 ವಾರ್ಡುಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಬಜೆ ರೇಚಕ ಸ್ಥಾವರದ ಹೆಚ್.ಟಿ ಪಾನೆಲ್ ಮತ್ತು ಎಲ್.ಟಿ ಪಾನೆಲ್‌ನ ಪರಿವರ್ತಕಗಳಿಗೆ ಯು.ಜಿ ಕೇಬಲ್, ಅರ್ಥ್ಲಿಂಗ್ ಮಾಡುವ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಆಗಸ್ಟ್ 22 ಮತ್ತು 23 ರಂದು ಉಡುಪಿ ನಗರಸಭಾ ವ್ಯಾಪ್ತಿಯ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ.ದೇವರಾಜು ಅರಸು ಅವರಿಂದ ಹಿಂದುಳಿದ ವರ್ಗಗಳಿಗೆ ಶಕ್ತಿ: ಶೋಭಾ ಕರಂದ್ಲಾಜೆ

ಉಡುಪಿ: ರಾಜ್ಯದ ಹಿಂದುಳಿದ ವರ್ಗಗಳ ಸಮಸ್ಯೆಗಳನ್ನು ಅರಿತಿದ್ದ ದಿ.ಶ್ರೀ. ಡಿ ದೇವರಾಜ ಅರಸು ಅವರು, ಅವರ ಸಮಸ್ಯೆಗಳಿಗೆ ದನಿಯಾಗಿ, ವಿವಿಧ ಕಾರ್ಯಕ್ರಮಗಳ ಮೂಲಕ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಶಕ್ತಿ ತುಂಬಿದ ಮಹಾನ್ ವ್ಯಕ್ತಿ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ, ರಜತಾದ್ರಿಯ ಅಟಲ್ ಬಿಹಾರಿ […]

ನಗರ ಕೇಂದ್ರ ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳಿಗಾಗಿ ಡಿಜಿಟಲ್ ಗ್ರಂಥಾಲಯ ಮಾಹಿತಿ ಕಾರ್ಯಾಗಾರ

ಉಡುಪಿ: ಅಜ್ಜರಕಾಡಿನ ವಿದ್ಯಾ ವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ಆ 19 ರಂದು ಡಿಜಿಟಲ್ ಗ್ರಂಥಾಲಯ ಮಾಹಿತಿ ಕಾರ್ಯಾಗಾರವನ್ನು ಉಡುಪಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿತ್ತು. ಉಡುಪಿ ನಗರಸಭೆ ಮತ್ತು ನಗರ ಗ್ರಂಥಾಲಯ ಪ್ರಾಧಿಕಾರದ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್, ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಗ್ರಂಥಾಲಯದ ಆವರಣದಲ್ಲಿ ಮಲಬಾರ್ ಗೋಲ್ಡ್ ವತಿಯಿಂದ ಉಚಿತವಾಗಿ ನೀಡಿದ ಸಸಿಗಳನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿ […]

ಮಲ್ಪೆಯಲ್ಲಿ ಬೋಟ್ ನಿಂದ ಬಿದ್ದು ಮೀನುಗಾರ ನಾಪತ್ತೆ 

ಉಡುಪಿ: ಮಲ್ಪೆ ಬೋಟ್ ನಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೀನುಗಾರನೋರ್ವರು ನಾಪತ್ತೆಯಾದ ಘಟನೆ ಮಲ್ಪೆಯಲ್ಲಿ ನಡೆದಿದೆ. 35ವರ್ಷದ ಗೋಪಾಲ ಶನಿಯಾರ್‌ ನಾಯ್ಕ (35) ನಾಪತ್ತೆಯಾದ ಮೀನುಗಾರ. ಇವರು ಇತರ ಮೀನುಗಾರರೊಂದಿಗೆ ಮಲ್ಪೆ ಬಂದರಿನಿಂದ ಬೋಟಿನಲ್ಲಿ ಮೀನುಗಾರಿಕೆಗೆ ತೆರಳಿದ್ದು, ಮೀನುಗಾರಿಕೆ ನಡೆಸುತ್ತಿರುವಾಗ ಆಕಸ್ಮಿಕವಾಗಿ ಬೋಟಿನಿಂದ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾರೆ. ಬೋಟಿನಲ್ಲಿದ್ದವರು ಹುಡುಕಾಟ ನಡೆಸಿದರೂ ಅವರು ಪತ್ತೆಯಾಗಲಿಲ್ಲ. ಈ ಕುರಿತು ಮಲ್ಪೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾರುಗಳ ಮಧ್ಯೆ ಅಪಘಾತ: ನಾಲ್ವರಿಗೆ ಗಂಭೀರ ಗಾಯ

ಉಡುಪಿ: ಓವರ್ ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೆಬ್ರಿ ತಾಲೂಕಿನ ನಾಡ್ಪಾಲು ಜಕ್ಕನಮಕ್ಕಿ ಎಂಬಲ್ಲಿ ನಡೆದಿದೆ. ಬೈಕನ್ನು ಕಾರೊಂದು ಓವರ್ ಟೇಕ್ ಮಾಡುವಾಗ ಮುಂದಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಕಾರುಗಳು ಹಾಗೂ ಬೈಕ್ ನುಜ್ಜುಗುಜ್ಜಾಗಿವೆ. ಸ್ಥಳಕ್ಕೆ ಹೆಬ್ರಿ ಪಿಎಸ್ಐ ಮಹೇಶ್‌ ಟಿಎಂ ಭೇಟಿ ನೀಡಿದ್ದು ಪ್ರಕರಣ ದಾಖಲಾಗಿದೆ. ಅಪಘಾತದಿಂದ ಉಡುಪಿ ಹೆಬ್ರಿ ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು […]