ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗೆ ಶಿಕ್ಷೆ
ಉಡುಪಿ: ಸರ್ಕಾರಿ ನೌಕರರಿಗೆ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ ಆರೋಪಿಗೆ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಉಡುಪಿ ತಾಲೂಕು ಬೆಳ್ಳಂಪಳ್ಳಿ ಗ್ರಾಮದ ಕಂಬ್ಲ ಮಜಲು ಪುಣ್ವೂರು ಎಂಬಲ್ಲಿ ಮಹಿಳೆಗೆ ಕೊರೋನಾ ಪಾಸಿಟಿವ್ ಬಂದ ಕಾರಣ ಆಕೆಯ ಪ್ರಾಥಮಿಕ ಸಂಪರ್ಕದಲ್ಲಿದ್ದ ಗಂಡ ಸುರೇಂದ್ರ ಎಂಬಾತನ ಗಂಟಲು ದ್ರವ ಪರೀಕ್ಷೆ ನಡೆಸಲು ಮನೆಗೆ ಬಂದ ಸರ್ಕಾರಿ ನೌಕರರಿಗೆ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನ ಮಾಡಿ, ಜೀವ ಬೆದರಿಕೆ […]
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಕ್ಷೇತ್ರ ಮಟ್ಟದ ಆರ್ಥಿಕ ಸಾಕ್ಷರತೆ ಕಾರ್ಯಕ್ರಮ
ಉಡುಪಿ: ಸಮಾಜದ ಪ್ರತಿಯೊಬ್ಬರು ಹಣಕಾಸಿನ ವ್ಯವಹಾರದ ಬಗ್ಗೆ ಅಥವಾ ಹಣ ಬಳಕೆಯ ವಿಧಗಳ ಬಗ್ಗೆ ಸ್ವತ: ತಿಳುವಳಿಕೆ ಹೊಂದುವುದು ಅತಿ ಅಗತ್ಯ ಎಂದು ಭಾರತೀಯ ರಿಸರ್ವ್ ಬ್ಯಾಂಕಿನ ಬೆಂಗಳೂರು ಪ್ರಾದೇಶಿಕ ಮುಖ್ಯ ಮಹಾ ಪ್ರಬಂಧಕ ಪಿ.ಎನ್. ರಘನಾಥ ಅಭಿಪ್ರಾಯ ಪಟ್ಟರು. ಅವರು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI), ಹಣಕಾಸು ಸೇರ್ಪಡೆ ಮತ್ತು ಅಭಿವೃದ್ಧಿ ಇಲಾಖೆ, ಬೆಂಗಳೂರು, ಲೀಡ್ ಡಿಸ್ಟ್ರಿಕ್ಟ್ ಆಫೀಸ್, ಕೆನರಾ ಬ್ಯಾಂಕ್, ಉಡುಪಿ ಇದರ ಜಂಟಿಯಾಗಿ ಆಯೋಜಿಸಿದ ಕ್ಷೇತ್ರ ಮಟ್ಟದ ಆರ್ಥಿಕ ಸಾಕ್ಷರತೆ ಕಾರ್ಯಕ್ರಮದಲ್ಲಿ ಮಾತನಾಡಿದರು. […]
ದೊಡ್ಡಣ್ಣಗುಡ್ಡೆ: ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ನಾಗಾಲಯದಲ್ಲಿ ನಾಗರಪಂಚಮಿ ಆಚರಣೆ
ದೊಡ್ಡಣ್ಣಗುಡ್ಡೆ: ಶ್ರೀಚಕ್ರ ಪೀಠ ಸರಪೋಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ನಾಗಾಲಯದಲ್ಲಿ ಆ. 21ರ ಸೋಮವಾರ ನಾಗರಪಂಚಮಿ ಆಚರಣೆ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಅರ್ಚಕ ಅನಿಶ್ ಆಚಾರ್ಯರ ನೇತೃತ್ವದಲ್ಲಿ ನೆರವೇರಲಿರುವುದು. ಆ ಪ್ರಯುಕ್ತ ನಾಗರಾಜ ನಾಗರಾಣಿಯ ಸನ್ನಿಧಾನದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಾಮೂಹಿಕ ವಿಶೇಷ ತನು ತಂಬಿಲ ಸೇವೆ, ಪಂಚಾಮೃತ ಅಭಿಷೇಕ, ಪ್ರಸನ್ನ ಪೂಜೆ, ಮಹಾಪ್ರಸಾದ ವಿತರಣೆ ನೆರವೇರಲಿರುವುದು ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿದ್ದಾರೆ.
ಶ್ರೀಕೃಷ್ಣಮಠದಲ್ಲಿ ಲಕ್ಷ್ಮೀ ಶೋಭಾನೆ ಪಠಣೆ
ಉಡುಪಿ: ಶ್ರಾವಣ ಶುಕ್ರವಾರದ ಪ್ರಯುಕ್ತ, ಶ್ರೀಕೃಷ್ಣಮಠದಲ್ಲಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ವಿಪ್ರ ಮಹಿಳೆಯರಿಂದ ಲಕ್ಷ್ಮೀ ಶೋಭಾನೆ ಪಠಣೆ ನಡೆಯಿತು.
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಗನ್ ಮ್ಯಾನ್ ಒದಗಿಸಲು ಗೃಹ ಸಚಿವರಿಗೆ ಮನವಿ
ಬೆಳ್ತಂಗಡಿ: ಹನ್ನೊಂದು ವರ್ಷಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಪಟ್ತು ಕೊಲೆಯಾದ ಕಾಲೇಜು ವಿದ್ಯಾರ್ಥಿನಿ ಕುಮಾರಿ ಸೌಜನ್ಯ ಗೌಡ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗನ್ ಮ್ಯಾನ್ ನೀಡುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಾಜಿ ಶಾಸಕ ವಸಂತ ಬಂಗೇರ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ಭೇಟಿಯಾದ ಬಂಗೇರ, ರಾಜ್ಯದಲ್ಲಿ ಸೌಜನ್ಯ ಪರ ಹೋರಾಟ ತೀವ್ರ ಸ್ವರೂಪ ಪಡೆದಿದ್ದು, ಹೋರಾಟದ ಮುಂಚೂಣಿಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ […]