ಜೆ.ಎಸ್.ಬಿ ಸಮಾಜದಿಂದ ಲಕ್ಷ ತುಳಸೀ ಅರ್ಚನೆ: ಪುತ್ತಿಗೆ ಶ್ರೀಪಾದರಿಗೆ ಗೌರವ
ಉಡುಪಿ: ಸ್ವಾತಂತ್ರ್ಯ ಉತ್ಸವದ ಶುಭ ಸಂದರ್ಭದಲ್ಲಿ ಜೆ.ಎಸ್.ಬಿ. ಸಮಾಜದವರು ಗೋಕರ್ಣ ಮಠಾಧೀಶರ ಶುಭಾರ್ಶೀವಾದದೊಂದಿಗೆ ತಮ್ಮ ದ್ವಾರಕಾನಾಥ ಭವನದಲ್ಲಿ ಆಯೋಜಿಸಿದ್ದ ಲಕ್ಷ ತುಳಸಿ ಅರ್ಚನೆ ಕಾರ್ಯಕ್ರಮದಲ್ಲಿ ಭಕ್ತ ಜನರ ಅಪೇಕ್ಷೆ ಮೇರೆಗೆ ಪೂಜ್ಯ ಪುತ್ತಿಗೆ ಶ್ರೀಪಾದರು ಭಾಗವಹಿಸಿ ಶುಭಾಶೀರ್ವಚನ ನೀಡಿದರು. ಪೂಜ್ಯ ಶ್ರೀಪಾದರನ್ನು ಭಕ್ತಿ ಗೌರವಾದರಗಳೊಂದಿಗೆ ಸ್ವಾಗತಿಸಿ ಪಾದ ಪೂಜೆಯನ್ನು ನೆರವೇರಿಸಿದರು. ಪೂಜ್ಯ ಶ್ರೀಪಾದರು ಉಪಸ್ಥಿತರಿರುವ ಎಲ್ಲ ಸಮಾಜ ಬಾಂಧವರಿಗೆ ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆಯನ್ನು ನೀಡಿ ಮುಂಬರುವ ತಮ್ಮ ಪರ್ಯಾಯಕ್ಕೆ ಎಲ್ಲರನ್ನು ಪ್ರೀತಿಯಂದ ಆಮಂತ್ರಿಸಿದರು.
ಹ್ಯೂಮನ್ ರೈಟ್ಸ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ
ಉಡುಪಿ: ಹ್ಯೂಮನ್ ರೈಟ್ಸ್ ಫೆಡರೇಷನ್ ಆಫ್ ಇಂಡಿಯಾ ಉಡುಪಿ ಜಿಲ್ಲೆ ಹಾಗೂ ಅಂಗನವಾಡಿ ಕೇಂದ್ರ ಮನ್ನೋಳಿಗುಜ್ಜಿ ದೊಡ್ಡಣಗುಡ್ಡೆ ಉಡುಪಿ ಸಹಯೋಗದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಸಂಸ್ಥೆಯ ಅಧ್ಯಕ್ಷೆ ಅಡ್ವಕೇಟ್ ಪ್ರೀತಿ. ವೈ ಕುಂದಾಪುರ, ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಹಿರಿಯರು ತಮ್ಮ ಜೀವನವನ್ನು ಪಣಕ್ಕಿಟ್ಟು ಸ್ವಾತಂತ್ರ್ಯ ಪಡೆದು ನಮಗೆಲ್ಲ ನೆಮ್ಮದಿಯ ಬದುಕನ್ನು ಕಲ್ಪಿಸಿಕೊಟ್ಟಿದ್ದಾರೆ ಅವರನ್ನು ಗೌರವಿಸುವುದರ ಜೊತೆಗೆ ನಾವೆಲ್ಲ ಪ್ರೀತಿಯಿಂದ ಬದುಕಬೇಕು. ದೇಶದ ಗಡಿಯನ್ನು ಸೈನಿಕರು ಎಚ್ಚರಿಕೆಯಿಂದ ಕಾಯುತ್ತಿರುವುದರಿಂದ ನಾವೆಲ್ಲ ನೆಮ್ಮದಿಯಿಂದ ಇದ್ದೇವೆ ಎಂದರು. ಸಂಸ್ಥೆಯ ನಿರ್ದೇಶಕ ಉದಯ […]
ಸೌಜನ್ಯ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಎಬಿವಿಪಿಯಿಂದ ಪೋಸ್ಟ್ ಕಾರ್ಡ್ ಚಳುವಳಿ
ಉಡುಪಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ಕು. ಸೌಜನ್ಯ ಪ್ರಕರಣವನ್ನು ರಾಜ್ಯ ಸರ್ಕಾರ ಈ ಕೂಡಲೇ ಮರು ತನಿಖೆಗೆ ಆದೇಶಿಸಬೇಕು, ತನ್ಮೂಲಕ ನೈಜ ಅಪರಾಧಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ನಗರದ ವಿವಿಧ ಕಾಲೇಜು ಮತ್ತು ಹಾಸ್ಟೆಲ್ ಗಳಲ್ಲಿ ಪೋಸ್ಟ್ ಕಾರ್ಡ್ ಚಳುವಳಿಯನ್ನು ಆರಂಭಿಸಲಾಯಿತು. ಪೋಸ್ಟ್ ಕಾರ್ಡ್ ನ ಮೂಲಕ ರಾಜ್ಯದ ಮುಖ್ಯಸ್ಥರಾದ ರಾಜ್ಯಪಾಲರಿಗೆ, ಪ್ರಕರಣವನ್ನು ಮರು ತನಿಖೆಗೆ ಆದೇಶಿಸುವಂತೆ ಆಗ್ರಹಿಸಿ ಸುಮಾರು 400ಕ್ಕೂ ಅಧಿಕ ವಿದ್ಯಾರ್ಥಿಗಳ ಮೂಲಕ ಮನವಿಯನ್ನು ಮಾಡಲಾಯಿತು. ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ […]
ಉಡುಪಿ ತಾಲ್ಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಕುಸ್ತಿ ಪಂದ್ಯಾಟ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ
ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ಹಾಗೂ ಸರಕಾರಿ ಸಂಯುಕ್ತ ಪ್ರೌಢಶಾಲೆ ರಾಜೀವನಗರ ಇದರ ಆಶ್ರಯದಲ್ಲಿ ಆ16 ರಂದು ಸರಕಾರಿ ಸಂಯುಕ್ತ ಪ್ರೌಢಶಾಲೆ ರಾಜೀವನಗರದಲ್ಲಿ ಆಯೋಜಿಸಲಾದ ಉಡುಪಿ ತಾಲ್ಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಕುಸ್ತಿ ಪಂದ್ಯಾಟವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಧವಿ ಆಚಾರ್, ಉಪಾಧ್ಯಕ್ಷರು ನಿರುಪಮಾ ಹೆಗ್ಡೆ, […]
ಪ್ರವಾಸಿ ತಾಣಗಳ ಭೇಟಿ ನಿರ್ಬಂಧ ಆಗಸ್ಟ್ ಅಂತ್ಯದವೆರೆಗೂ ವಿಸ್ತರಣೆ: ಡಾ. ವಿದ್ಯಾಕುಮಾರಿ ಕೆ
ಉಡುಪಿ: ಮಳೆಗಾಲದಲ್ಲಿ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ವೇಳೆ ಸಾವು ಸಂಭವಿಸಿದ ಹಿನ್ನಲೆ ಇದೀಗ ಉಡುಪಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ತೆಗೆದುಕೊಂಡಿದ್ದು, ಜಲಪಾತ ವೀಕ್ಷಣೆ, ಬೀಚ್ ಗೆ ಪ್ರವಾಸಿಗರು ಹಾಗೂ ಸಾರ್ವಜನಿಕರ ಭೇಟಿ ನೀಡುವುದನ್ನು ನಿರ್ಬಂಧ ಹೇರಿರುವುದನ್ನು ಆಗಸ್ಟ್ ಅಂತ್ಯದವರೆಗೂ ವಿಸ್ತರಿಸಿದೆ. ಕೊಲ್ಲೂರು ಸಮೀಪದ ಅರಶಿನ ಗುಂಡಿ ಜಲಪಾತದಲ್ಲಿ ಯುವಕನೋರ್ವ ನೀರುಪಾಲಾದ ದುರ್ಘಟನೆಯ ಬಳಿಕ ಬೀಚ್ ಸಹಿತ ಜಲಪಾತ ಹಾಗೂ ಮಳೆಗಾಲದಲ್ಲಿ ಅಪಾಯಕಾರಿಯಾಗಿ ಪರಿಣಮಿಸುವ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಮತ್ತು ಸಾರ್ವಜನಿಕರ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ಮಳೆಗಾಲವಾದ್ದರಿಂದ […]