ವಿರೋಧ ಪಕ್ಷದ ಸದಸ್ಯರ ಕ್ಷೇತ್ರ ಅಭಿವೃದ್ದಿಗೆ ರೂ.25 ಕೋಟಿ ಬಿಡುಗಡೆಗೊಳಿಸಿದ ರಾಜ್ಯ ಸರಕಾರ

ಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ಸದಸ್ಯರ ಕ್ಷೇತ್ರದ ಅಭಿವೃದ್ಧಿಗೆ ತಲಾ 25 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಲು ರಾಜ್ಯ ಸರಕಾರ ಮುಂದಾಗಿದೆ. ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಹಣ ಬಿಡುಗಡೆ ಮಾಡಲಾಗುತ್ತಿದ್ದು, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಅಡಿ ಬರುವ ರಸ್ತೆ, ಸೇತುವೆ ಹಾಗೂ ನಗರಾಭಿವೃದ್ಧಿ ಇಲಾಖೆ ವ್ಯಾಪ್ತಿಯ ನಗರ ಪ್ರದೇಶ ಕಾಮಗಾರಿಗಳಿಗೆ 18.75 ಕೋಟಿ ರೂ. ಬಿಡುಗಡೆ. ಅದೇ ರೀತಿ, ವಿವೇಚನಾಧಿಕಾರದಡಿ ವಿಧಾನಸಭೆ ಸದಸ್ಯರು ಆಯ್ಕೆ ಮಾಡಬಹುದಾದ ಇತರ ಇಲಾಖೆ ಕಾಮಗಾರಿಗಳಿಗೆ 6.25 ಕೋಟಿ ರೂ. […]

Mister India Heritage 2025 ಸ್ಪರ್ಧೆ: ಪ್ರಥಮ ರನ್ನರ್-ಅಪ್ ಪ್ರಶಸ್ತಿ ಮುಡಿಗೇರಿಸಿಕೊಂಡ ರಂಜಿತ್ ಗಾಣಿಗ

ಉಡುಪಿ: ಉಡುಪಿ ಜಿಲ್ಲೆಯ ಉಪ್ಪೂರು, ತೆಂಕಬೆಟ್ಟು ಮೂಲದ ರಂಜಿತ್ ಗಾಣಿಗ ಅವರು ಕರ್ನಾಟಕವನ್ನು ಪ್ರತಿನಿಧಿಸಿ Mister India Heritage 2025 ಸ್ಪರ್ಧೆಯಲ್ಲಿ ಪ್ರಥಮ ರನ್ನರ್-ಅಪ್ ಸ್ಥಾನವನ್ನು ಪಡೆದು ರಾಜ್ಯದ ಗೌರವವನ್ನು ಹೆಚ್ಚಿಸಿದ್ದಾರೆ. ಗೋವಾದಲ್ಲಿ ಆರು ದಿನಗಳ ಕಾಲ ನಡೆದ ಈ ಪ್ರತಿಷ್ಠಿತ ರಾಷ್ಟ್ರೀಯ ವೇದಿಕೆಯಲ್ಲಿ ಅವರು ತಮ್ಮ ಅದ್ಭುತ ಪ್ರದರ್ಶನದ ಮೂಲಕ ಗಮನ ಸೆಳೆಯುವುದರ ಜೊತೆಗೆ, Best Physique ಹಾಗೂ Best Personality ಎಂಬ ಎರಡು ವಿಶೇಷ ಪ್ರಶಸ್ತಿಗಳನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.ಈ ಸಾಧನೆಯೊಂದಿಗೆ, ರಂಜಿತ್ ಗಾಣಿಗ ಅವರು […]

ಆಸ್ತಿಗಾಗಿ ಮೂರನೇ ಮಹಡಿಯಿಂದ ಮಗುವನ್ನು ತಳ್ಳಿ ಕೊಲೆಗೈದ ಮಲತಾಯಿ: ಸಿಸಿಟಿವಿಯಲ್ಲಿ ಸೆರೆಯಾಯ್ತು ಭಯಾನಕ ಕೃತ್ಯ!

ಬೀದರ್: ಮಲ ಮಗಳಿಗೂ ಆಸ್ತಿ ಹಂಚಿಕೆ ಆಗುತ್ತದೆ ಎಂಬ ಕಾರಣಕ್ಕೆ ಮಹಿಳೆಯೊಬ್ಬಳು ಮೂರು ಮಹಡಿ ಕಟ್ಟಡದ ಮೇಲಿಂದ ಬಾಲಕಿಯನ್ನು ತಳ್ಳಿ ಕೊಲೆ ಮಾಡಿದ ಘಟನೆ ನಗರದ ನ್ಯೂ ಆದರ್ಶ ಕಾಲನಿಯಲ್ಲಿ ಇತ್ತೀಚೆಗೆ ನಡೆದಿದೆ. ಸಾನ್ವಿ (6) ಮೃತ ಬಾಲಕಿ. ಪ್ರಕರಣದಲ್ಲಿ ಆರೋಪಿಯನ್ನು ರಾಧಾ ಎಂದು ಗುರುತಿಸಲಾಗಿದೆ. ಆಗಸ್ಟ್​​ 27ರಂದು ಮಲತಾಯಿ ರಾಧಾ ಬಾಲಕಿಗೆ ಆಟವಾಡಿಸುವ ನೆಪದಲ್ಲಿ ಮೂರನೇ ಮಹಡಿಗೆ ಕರೆದೊಯ್ದಿದ್ದು, ಯಾರಿಗೂ ಕಾಣದಂತೆ ತಳ್ಳಿ ಕೊಲೆ ಮಾಡಿದ್ದಳು. ಬಾಲಕಿಯು ಆಯತಪ್ಪಿ ಬಿದ್ದಿದ್ದಾಳೆ ಎಂದು ನಂಬಿದ್ದರು. ಈ ಬಗ್ಗೆ […]

ಹೆಮ್ಮಾಡಿಯ ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ: ಮಹಾಸಭೆ

ಕುಂದಾಪುರ: ಹೆಮ್ಮಾಡಿಯ ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹೆಮ್ಮಾಡಿ ಇದರ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಸಾಧು ಎಸ್. ಬಿಲ್ಲವ ಮಾತನಾಡಿ, ಸಂಘವು ಸಾಲ ವಸೂಲಾತಿಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸಿ, ಸುಸ್ತಿ ಸಾಲಗಳ ಪ್ರಮಾಣವನ್ನು ಕಡಿಮೆ ಮಾಡಲು, ಸಂಘದ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳುವುದರ ಮೂಲಕ ವ್ಯವಹಾರಗಳಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು ಆಡಳಿತ ಮಂಡಳಿ ನಿರ್ಧರಿಸಿದೆ. ಇದರೊಂದಿಗೆ ಸ್ವಂತ ಜಾಗದಲ್ಲಿ […]

ಉಡುಪಿ:ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ಕಾರ್ಕಳದ ಕಾಬೆಟ್ಟುವಿನಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ(ಕೆ.ಜಿ.ಟಿ.ಟಿ.ಐ) ಯಲ್ಲಿ ಡಿಪ್ಲೋಮಾ/ಪದವಿ ಪೂರೈಸಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಹಾಗೂ ಯುವನಿಧಿ ಫಲಾನುಭವಿಗಳಿಗೆ ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಕೆ.ಜಿ.ಟಿ.ಟಿ.ಐ, ಕಾರ್ಕಳ ದೂ.ಸಂ: 08258 -200451 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೆಜಿಟಿಟಿಐ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.