ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಉಡುಪಿ: ಕೌಂಡಿಣ್ಯ ಗೋತ್ರ ನಾಯಕ ಕುಲಪುರಷ ಕಮಿಟಿ(ರಿ) ರಮಾನಾಥ್ ಗೋವಾ, ಉಡುಪಿ ಸಮಿತಿ ವತಿಯಿಂದ ದಿವಂಗತ ಬಿ ಜಯರಾಮ್ ನಾಯಕ್ ಮೆಮೋರಿಯಲ್ ಸ್ಮರಣಾರ್ಥ ಈ ಬಾರಿಯ ಹತ್ತನೇ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ 12 ವಿದ್ಯಾರ್ಥಿಗಳನ್ನು ಭಾನುವಾರದಂದು ಒಳಕಾಡಿನ ಅನಂತ ವೈದಿಕ ಕೇಂದ್ರದಲ್ಲಿ 5000 ರೂ ನಗದು ಸಹಿತ ಶಾಲು ಹೊದಿಸಿ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಟ್ರಸ್ಟ್ ಅಧ್ಯಕ್ಷ ಮೋಹನ್ ನಾಯಕ್ ಬೆಳಗಾಂ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು. ಉಪಾಧ್ಯಕ್ಷ ಅಜೆಕಾರ್ ಪ್ರೇಮಾನಂದ್ ನಾಯಕ್ , […]

ಉಡುಪಿ: ಆ. 10 ರಂದು ನೇರ ಸಂದರ್ಶನ

ಉಡುಪಿ: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಆಗಸ್ಟ್ 10 ರಂದು ಬೆಳಗ್ಗೆ 10.30 ಕ್ಕೆ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ.ಲಿ, ಆಭರಣ ಜುವೆಲ್ಲರ್ಸ್ ಬಳಿ, ಕಾರ್ಪೊರೇಶನ್ ಬ್ಯಾಂಕ್ ರೋಡ್, ಅನುರಾಗ ಕಾಂಪ್ಲೆಕ್ಸ್, ಉಡುಪಿ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಡಿಪ್ಲೋಮಾ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, […]

ಸಿ.ಎ ಫೌಂಡೇಶನ್ ಪರೀಕ್ಷೆಯಲ್ಲಿ ಜ್ಞಾನಸುಧಾ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ

ಕಾರ್ಕಳ : ಇನ್ಸ್ಟಿಟ್ಯೂಟ್ ಆಫ್ ಚಾರ್ಟಡ್ ಎಕೌಂಟೆಂಟ್ಸ್ ಆಫ್ ಇಂಡಿಯಾ ರಾಷ್ಟ್ರಮಟ್ಟದಲ್ಲಿ ನಡೆಸುವ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾದ ವಾಣಿಜ್ಯ ವಿಭಾಗದ 5 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದುವ ಮೂಲಕ ಮುಂದಿನ ಸಿಎ ಇಂಟರ್ ಮಿಡಿಯೆಟ್ ಹಂತಕ್ಕೆ ತೇರ್ಗಡೆ ಹೊಂದಿದ್ದಾರೆ. ವಿದ್ಯಾರ್ಥಿಗಳಾದ ಸಂಕೇತ್.ವಿ.ಕಾಮತ್ (271), ಶರಣ್ಯ ಎಸ್ ಹೆಗ್ಡೆ (258), ಬ್ರಾಯನ್ ವಿಕ್ಕಿ ಡಿ’ಸೋಜ (245), ಬಿ.ಅನೂಪ್ ಕಾಮತ್(232), ರಾಯನ್ ಮೆಂಡೋನ್ಸಾ (200) ಇವರು ಅಂಕ ಗಳಿಸಿರುತ್ತಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ […]

ನರೇಂದ್ರ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ರಾಹುಲ್ ಗಾಂಧಿ ಚಾಲನೆ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅನುಪಸ್ಥಿತಿಯಲ್ಲಿ ಇಂದು ಸಂಸತ್ತಿನಲ್ಲಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಮಂಡನೆಯಾಗಲಿದೆ. ಸಂಸತ್ತಿನಲ್ಲಿ ಮರುಸೇರ್ಪಡೆಯಾದ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಚರ್ಚೆಯನ್ನು ಪ್ರಾರಂಭಿಸುತ್ತಾರೆ ಎಂದು ಮೂಲಗಳು ತಿಳಿಸಿವೆ. ಅವಿಶ್ವಾಸ ನಿರ್ಣಯಕ್ಕೆ ಮುನ್ನ ಮಂಗಳವಾರ ಬಿಜೆಪಿ ತನ್ನ ಸಂಸದೀಯ ಪಕ್ಷದ ಸಭೆಯನ್ನು ಕರೆದಿದ್ದು, ಬುಧವಾರ ಮತ್ತು ಗುರುವಾರ ಚರ್ಚೆ, ಉತ್ತರ ಮತ್ತು ಮತದಾನ ನಡೆಯಲಿದೆ. ಅವಿಶ್ವಾಸ ನಿರ್ಣಯವು ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತು ಮಾತನಾಡಲು […]

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಮರುಸ್ಥಾಪನೆ: ‘ಇಂಡಿಯಾ’ ಮೈತ್ರಿಕೂಟ ನಾಯಕರಿಂದ ಶ್ಲಾಘನೆ

ನವದೆಹಲಿ: ‘ಇಂಡಿಯಾ’ ಮೈತ್ರಿಕೂಟ ನಾಯಕರು ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ಸಂಸದರಾಗಿ ಮರುಸ್ಥಾಪನೆ ಮಾಡಿರುವುದನ್ನು ಶ್ಲಾಘಿಸಿದ್ದಾರೆ. ಇದು “ಸತ್ಯದ ವಿಜಯ” ಎಂದು ಅವರು ಬಣ್ಣಿಸಿದ್ದಾರೆ. ಅವರ ಅನರ್ಹತೆಯನ್ನು ಹಿಂತೆಗೆದುಕೊಳ್ಳಲಾಗಿದೆ ಮತ್ತು ಅವರ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ ಎಂದು ಲೋಕಸಭೆ ಸೆಕ್ರೆಟರಿಯೇಟ್ ಅಧಿಸೂಚನೆಯನ್ನು ಪ್ರಕಟಿಸಿದೆ. ಘೋಷಣೆ ಬಂದ ಕೂಡಲೇ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಕಾರ್ಯಕರ್ತರು ಗಾಂಧಿ ಪರವಾಗಿ ನೃತ್ಯ ಮಾಡಿ ಘೋಷಣೆಗಳನ್ನು ಕೂಗುತ್ತಾ ಸಂಭ್ರಮಾಚರಣೆ ನಡೆಸಿದ್ದಾರೆ. ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಮಾನನಷ್ಟ […]