ಸೌಜನ್ಯ ಪ್ರಕರಣ ಹಳಿ ತಪ್ಪಿಸಿದವರು ಯಾರೆಂದು ಬಲ್ಲೆ; ರಹಸ್ಯ ಬಿಚ್ಚಿಟ್ಟರೆ ಸಾಯಿಸಬಹುದು: ವಸಂತ ಬಂಗೇರ
ಬೆಳ್ತಂಗಡಿ: ಸೌಜನ್ಯ ಪ್ರಕರಣದ ರಹಸ್ಯ ಬಿಚ್ಚಿಟ್ಟರೆ ನನ್ನನ್ನು ಸಾಯಿಸಬಹುದು. ಆದರೆ ಆ ರಹಸ್ಯವನ್ನು ಸಾಯುವ ಮುನ್ನ ನಾನು ಹೇಳದೇ ಬಿಡುವುದಿಲ್ಲ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಬೆಳ್ತಂಗಡಿಯ ಸೌಜನ್ಯ ಪ್ರಕರಣವನ್ನು ಉದ್ದೇಶಪೂರ್ವಕವಾಗಿ ದಾರಿ ತಪ್ಪಿಸಲಾಗಿದ್ದು ಇದರ ಹಿಂದೆ ಇರುವವರು ಯಾರೆಂದು ನನಗೆ ಗೊತ್ತಿದೆ ಎಂದರು. ನಾನು ಶಾಸಕನಾಗಿದ್ದಾಗ ಅಧಿವೇಶನದಲ್ಲಿ ಸೌಜನ್ಯಾ ಕೇಸ್ ಅನ್ನು ಸಿಬಿಐಗೆ ವಹಿಸಲು ಆಗ್ರಹಿಸಿದ್ದೆ. ಸಿದ್ದರಾಮಯ್ಯನವರು ಕೆಲವರನ್ನ ತುಂಬಾ ಒಳ್ಳೆಯವರು ಎಂದು ನಂಬಿದ್ದರು. ಅಧಿವೇಶನಕ್ಕೂ ಮುನ್ನ […]
ಜ್ಞಾನಸುಧಾ ಕಾಲೇಜಿನಲ್ಲಿ ಎನ್.ಎಸ್.ಎಸ್. ಕಾರ್ಯಚಟುವಟಿಕೆಗಳ ಉದ್ಘಾಟನೆ
ಕಾರ್ಕಳ: ಪಠ್ಯ ಶಿಕ್ಷಣದ ಜೊತೆಗೆ ಎನ್.ಎಸ್.ಎಸ್ ನಂತಹ ಪಠ್ಯೇತರ ಚಟುವಟಿಕೆಗಳು ನಮ್ಮ ಶೈಕ್ಷಣಿಕ ಜೀವನದಲ್ಲಿ ಜೀವನ ಕೌಶಲ್ಯಗಳನ್ನು ಕಲಿಸಿಕೊಡುತ್ತದೆ ಎಂದು ಜ್ಞಾನಸುಧಾ ವಾಣಿಜ್ಯ ವಿಭಾಗದ ಹಳೆವಿದ್ಯಾರ್ಥಿಗಳಾದ ಸಿ.ಎ. ರಘುರಾಮ್ ಪ್ರಭು ಹೇಳಿದರು. ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿನ ಎನ್.ಎಸ್.ಎಸ್. ಕಾರ್ಯಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ಎನ್.ಎಸ್.ಎಸ್.ನ ವಿವಿಧ ಚಟುವಟಿಕೆಗಳು ಶೈಕ್ಷಣಿಕ ಜೀವನದ ನಂತರ ನಮ್ಮ ವೃತ್ತಿ ಜೀವನಕ್ಕೆ, ಸಾಮಾಜಿಕ ಬದುಕಿಗೆ ಸಹಕಾರಿಯಾಗುತ್ತದೆ. ವಾಣಿಜ್ಯ ವಿಭಾಗದ ಸ್ಪರ್ಧಾತ್ಮಕ ಪ್ರಪಂಚಕ್ಕೆ ನಾವು ಕೌಶಲ್ಯಭರಿತರಾಗಿ ತೆರೆದುಕೊಳ್ಳಬೇಕಾಗಿದೆ ಎಂದರು. ಸಿಎ […]
ನೇಕಾರ ಸಂಜೀವ ಶೆಟ್ಟಿಗಾರ್ ಅವರಿಗೆ ರಾಜ್ಯ ಮಟ್ಟದ ಬಹುಮಾನ
ಕಿನ್ನಿಗೋಳಿ: ಸುಪ್ರಸಿದ್ದ ‘ಉಡುಪಿ ಸೀರೆ’ಯ ನೇಕಾರರಾಗಿರುವ ಸಂಜೀವ ಶೆಟ್ಟಿಗಾರ್ ಹತ್ತಿ ಬಟ್ಟೆ ಸೀರೆ ನೇಯ್ಗೆಗಾಗಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಬಹುಮಾನ ಲಭಿಸಿದೆ. ಇವರು ತಾಳಿಪಾಡಿ ನೇಕಾರರ ಸಂಘದ ಸದಸ್ಯರು. ಆ. 07 ರಂದು ಸೋಮವಾರ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯಂದು ಬೆಂಗಳೂರಿನಲ್ಲಿ ಅವರು ರಾಜ್ಯ ಪ್ರಶಸ್ತಿ ಸ್ವೀಕರಿಸಲಿದ್ದಾರೆ. 74 ವಯಸ್ಸಿನ ಸಂಜೀವ ಶೆಟ್ಟಿಗಾರ್ ಈಗ ಇರುವ ಕೇವಲ ಹತ್ತು 80 ಕೌಂಟ್ ನೇಕಾರರಲ್ಲಿ ಒಬ್ಬರು. ಕೈಯಿಂದ ಚಂದದ ಬುಟ್ಟಾ ನೇಯುವಲ್ಲಿ ಪರಿಣಿತರು. 80 ಕೌಂಟ್ ನ ಸಹಜ ಸೀರೆ […]
ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಪ್ರಯುಕ್ತ ಕೈಮಗ್ಗ ಸೀರೆಗಳ ಸೌಂದರ್ಯ ಸ್ಪರ್ಧೆ ಕಾರ್ಯಕ್ರಮ
ಉಡುಪಿ: ಪದ್ಮಶಾಲಿ ನೇಕಾರ ಪ್ರತಿಷ್ಠಾನ, ಉಡುಪಿ ಹಾಗೂ ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟ (ರಿ) ಬೆಂಗಳೂರು ವತಿಯಿಂದ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಪ್ರಯುಕ್ತ ಭಾನುವಾರದಂದು ಕೈಮಗ್ಗ ಸೀರೆಗಳ ಸೌಂದರ್ಯ ಸ್ಪರ್ಧೆ ನಡೆಯಿತು. ಈ ಸಂದರ್ಭದಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಮಾಜಿ ಶಾಸಕ ಕೆ ರಘುಪತಿ ಭಟ್, ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ, ಉದಯಕುಮಾರ್ ಶೆಟ್ಟಿ ಕಿದಿಯೂರು, ಮಟ್ಟಾರು ರತ್ನಾಕರ ಹೆಗ್ಡೆ, ಪದ್ಮಶಾಲಿ ನೇಕಾರ ಪ್ರತಿಷ್ಠಾನದ ಅಧ್ಯಕ್ಷ ರತ್ನಾಕರ ಇಂದ್ರಾಳಿ, […]
ಇತಿಹಾಸದಲ್ಲೆ ಮೊದಲ ಬಾರಿ ಬೆಂಗಳೂರಿನಲ್ಲಿ ನಡೆಯಲಿದೆ ಕಂಬಳ..!
ಬೆಂಗಳೂರು: ಬೆಂಗಳೂರಿನಲ್ಲಿ ಕಂಬಳದ ಇತಿಹಾಸದಲ್ಲಿ ಮೊದಲ ಬಾರಿಗೆ, ರಾಜ ಮಹಾರಾಜ ಜಯ ಚಾಮರಾಜೇಂದ್ರ ಒಡೆಯರ್ ಜೋಡುಕೆರೆ ಕಂಬಳ ನಡೆಯಲಿದ್ದು, ತುಳುನಾಡಿನ ಕಂಬಳದ ಕೋಣಗಳು ಬೆಂಗಳೂರಿನ ಕಡೆಗೆ ಹೊರಡಲಿದೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ನಡೆಯಲಿರುವ ಈ ಕಂಬಳಕ್ಕೆ ಮೈಸೂರು ಅರಸರಿಂದ ಅನುಮತಿ ದೊರೆತಿದೆ. ಕರಾವಳಿ ಕರ್ನಾಟಕದ ಬೇಸಾಯ ವೃತ್ತಿಯೇ ಪ್ರಮುಖವಾಗಿರುವ ಸಮಾಜದಲ್ಲಿ ಕೋಣಗಳು ಅವರ ಬದುಕಿನ ಅವಿಭಾಜ್ಯ ಅಂಗ. ‘ಕಂಬಳ, ಬೇಸಾಯಗಾರರು ಭತ್ತದ ಗದ್ದೆಗಳಲ್ಲಿ ಕೊಯ್ಲಿನ ಬಳಿಕ ಕೋಣಗಳನ್ನು ಓಡಿಸುತ್ತಿದ್ದ ಆಚರಣೆ ಮತ್ತು ಆಟವಷ್ಟೇ […]