ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪೋಷಕ-ಶಿಕ್ಷಕ ಸಭೆ
ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಮೊದಲನೆ ಪೋಷಕ-ಶಿಕ್ಷಕರ ಸಭೆ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾ ಗಣೇಶ ಮೊಗವೀರ್ ಮಾತನಾಡಿ ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಬಗ್ಗೆ, ಬದಲಾದ ಪರೀಕ್ಷಾ ಪದ್ದತಿಯ ಕುರಿತು ಹಾಗೂ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಕುರಿತು ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಉಡುಪಿಯ ತ್ರಿಷಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಸಿಎ.ಗೋಪಾಲಕೃಷ್ಣ ಭಟ್ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಸಿಎ-ಸಿ.ಎಸ್ […]
ಉಡುಪಿ ಘಟನೆಗೆ ಪ್ರತಿಭಟಿಸಿದ ಬಿಜೆಪಿಯಿಂದ ವಿಟ್ಲ ಮತ್ತು ಮುಲ್ಕಿ ಘಟನೆಗೆ ಮೌನದ ದ್ವಂದ ನೀತಿ: ವೇರೊನಿಕಾ ಕರ್ನೆಲಿಯೋ
ಉಡುಪಿ: ಉಡುಪಿಯ ಪ್ರಕರಣವನ್ನು ರಾಷ್ಟ್ರವ್ಯಾಪಿ ಸುದ್ದಿಯಾಗುವಂತೆ ಪ್ರತಿಭಟಿಸಿದ ಬಿಜೆಪಿ ಹಾಗೂ ಸಂಘ ಪರಿವಾರದ ಮುಖಂಡರು ಮುಲ್ಕಿಯ ಪಕ್ಷಿಕೆರೆ ಎಂಬಲ್ಲಿ ಹಿಂದೂ ಮಹಿಳೆಯೊಬ್ಬರು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುವುದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ ಪ್ರಕರಣದ ವಿಚಾರದಲ್ಲಿ ಯಾಕೆ ಮೌನ ವಹಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರರಾದ ವೇರೊನಿಕಾ ಕರ್ನೆಲಿಯೋ ಪ್ರಶ್ನಿಸಿದ್ದಾರೆ. ಮಹಿಳೆಯನ್ನು ದೇವರೆಂದು ಪೂಜಿಸುವ ಬಿಜೆಪಿಗರಿಗೆ ಆಕೆಗೆ ಅವಮಾನ ಆದಾಗ ಆರೋಪಿಯ ಜಾತಿ ಧರ್ಮ ಮೊದಲು ನೋಡಿ ಮತ್ತೆ ಪ್ರತಿಭಟನೆ ಮಾಡುವುದು ಎನ್ನುವುದು ಇದರಲ್ಲಿ ಎದ್ದು ಕಾಣುತ್ತದೆ. ಮುಲ್ಕಿಯಲ್ಲಿ ಅವಮಾನಕ್ಕೆ […]
ಥ್ಯಾಂಕ್ಯೂ ಫ್ರೆಂಡ್ಸ್: ಫ್ರೆಂಡಶಿಪ್ ಡೇ ವಿಶೇಷ
ನನ್ನ ಹೆಸರು ಆಶಾ ನನ್ನ ಗೆಳತಿ ಹೆಸರು ಅಶ್ವಿನಿ ನಾನು ಉಡುಪಿಯ ಕಿನ್ನಿಮೂಲ್ಕಿಯವಳು. ನನ್ನ ಗೆಳತಿ ನನಗೆ ತುಂಬಾ ಸಹಾಯ ಮಾಡಿದ್ದಾಳೆ ನನ್ನ ಜೀವನದಲ್ಲಿ ತುಂಬಾ ಧೈರ್ಯವನ್ನು ತುಂಬಿದ್ದಾರೆ ಅದಕ್ಕಾಗಿ ನಾನು ಅವಳ ಗೆಳೆತನವನ್ನು ಎಂದಿಗೂ ಮರೆಯುವುದಿಲ್ಲ — ಕೈ-ಕುಲುಕಿ ಹೋಗುವ ಸಾವಿರ ಗೆಳೆಯರಿಗಿಂತ, ಕಷ್ಟದ ಸಮಯದಲ್ಲಿ ಅಪ್ಪುಗೆಯ ನೀಡಿ ಸಮಾಧಾನ ಮಾಡುವ ಇಂತಾ ಒಬ್ಬ ಗೆಳೆಯನಿದ್ದರೆ ಸಾಕು… My name : Vinay devadiga ,Friend name: Ajay Shetty, Place : kundapura — […]
ಕಕ್ಷಿದಾರರಿಗೆ ಶೀಘ್ರ ನ್ಯಾಯ ಒದಗಿಸಲು ರಾಜ್ಯದ ಸಿವಿಲ್ ಪ್ರೊಸೀಜರ್ ಕೋಡ್‌ಗೆ ತಿದ್ದುಪಡಿ: ಹೆಚ್.ಕೆ.ಪಾಟೀಲ್
ಉಡುಪಿ: ರಾಜ್ಯದಲ್ಲಿ ಕಕ್ಷಿದಾರರಿಗೆ ಶೀಘ್ರದಲ್ಲಿ ನ್ಯಾಯದಾನ ವ್ಯವಸ್ಥೆ ತಲುಪಿಸುವ ಉದ್ದೇಶದಿಂದ ರಾಜ್ಯದ ಸಿವಿಲ್ ಪ್ರೊಸೀಜರ್ ಕೋಡ್ ತಿದ್ದುಪಡಿ ಮಾಡಲು ವಿಧಾನಸಭೆಯ 2 ಸದನಗಳಲ್ಲಿ ಅನುಮೋದನೆ ಪಡೆದಿದ್ದು, ಇದನ್ನು ರಾಷ್ಟ್ರಪತಿಗಳ ಅಂಕಿತಕ್ಕಾಗಿ ಸಲ್ಲಿಸಲಾಗಿದೆ ಎಂದು ಕಾನೂನು, ಸಂಸದೀಯ ವ್ಯವಹಾರ, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಹೆಚ್. ಕೆ. ಪಾಟೀಲ್ ತಿಳಿಸಿದರು. ಅವರು ಶನಿವಾರ ಜಿಲ್ಲಾ ನ್ಯಾಯಾಂಗ ಉಡುಪಿ, ಲೋಕೋಪಯೋಗಿ ಇಲಾಖೆ ಉಡುಪಿ ಮತ್ತು ವಕೀಲರ ಸಂಘ ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಾವರದಲ್ಲಿ ನೂತನವಾಗಿ ಸೃಜಿಸಲ್ಪಟ್ಟ ಬ್ರಹ್ಮಾವರ […]
ಬೈಲೂರು ಮಹಿಷಮರ್ಧಿನಿ ದೇವಸ್ಥಾನ ರಸ್ತೆ ಅಗಲೀಕರಣ: ವಾಹನ ಸಂಚಾರ ತಾತ್ಕಾಲಿಕ ನಿಷೇಧ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಬೈಲೂರು ಮಹಿಷಮರ್ಧಿನಿ ದೇವಸ್ಥಾನ ರಸ್ತೆಯನ್ನು ಅಗಲೀಕರಣಗೊಳಿಸಿ, ರಸ್ತೆ ಕಾಂಕ್ರೀಟೀಕರಣ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಯನ್ನು ನಗರಸಭೆ ಹಾಗೂ ಪಿ.ಡಬ್ಲ್ಯೂ.ಡಿ ಇಲಾಖೆ ವತಿಯಿಂದ ನಿರ್ವಹಿಸುತ್ತಿದ್ದು, ಸದ್ರಿ ರಸ್ತೆಯಲ್ಲಿ ಆಗಸ್ಟ್ 6 ರಿಂದ ಸೆಪ್ಟಂಬರ್ 5 ರ ವರೆಗೆ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿರುತ್ತದೆ. ಬದಲಿ ಮಾರ್ಗವಾಗಿ ಕಿನ್ನಿಮೂಲ್ಕಿ ಗೋಪುರದಿಂದ ಬಲೈಪಾದೆ ಜಂಕ್ಷನ್‌ನಿಂದ ಮುಂದೆ ಎಡಕ್ಕೆ ಹಾಗೂ ಚಿಟ್ಪಾಡಿ ಹನುಮಾನ್ ಗ್ಯಾರೇಜ್ ರಸ್ತೆಯಿಂದ ವಾಹನಗಳು ಸಂಚರಿಸಬಹುದಾಗಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ […]