ಉಡುಪಿ: ಲಾರಿಯಲ್ಲಿ ಸಾಗಿಸುತ್ತಿದ್ದ 65 ಕೆ.ಜಿ ತೂಕದ ಗಾಂಜಾ ವಶಪಡಿಸಿಕೊಂಡ ಪೊಲೀಸರು; ಇಬ್ಬರ ಬಂಧನ

ಉಡುಪಿ: ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪಾರ ಮೌಲ್ಯದ ಗಾಂಜಾವನ್ನು ಉಡುಪಿ ಸೆನ್ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡ ಘಟನೆ ಉಡುಪಿ ಕಿನ್ನಿಮೂಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಲಾರಿಯನ್ನು ತಡೆದು 65 ಕೆ.ಜಿ ತೂಕದ ಗಾಂಜಾವನ್ನು ವಶಕ್ಕೆ ಪಡೆದುಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಉಡುಪಿ: ಬೇಟೆಗಾಗಿ ಗುಂಡು ಹಾರಿಸಿದ ಇಬ್ಬರು ಆರೋಪಿಗಳ ಬಂಧನ

ಉಡುಪಿ: ಬೇಟೆಯ ವೇಳೆ ಬಂದೂಕಿನಿಂದ ಹಾರಿದ ಗುಂಡು ಕಾರು ಮತ್ತು ಮನೆ ಬಾಗಿಲಿಗೆ ಬಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ. ಕುದಿ ಗ್ರಾಮದ ಕೊಂಡಾಡಿಯ ಪ್ರದೀಪ್ (32) ಹಾಗೂ ಹಿರಿಯಡ್ಕ ಗುಡ್ಡೆಯಂಗಡಿಯ ಮನೋಜ್ (25) ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರು ಹಿರಿಯಡಕ ಕಣಜಾರು ಗುರುರಾಜ್ ಮಂಜಿತ್ತಾಯರ ಮನೆಯ ಸಮೀಪದ ಹಾಡಿಯ ಬಳಿ ಶಿಕಾರಿ ಮಾಡುವ ಉದ್ದೇಶದಿಂದ ಹೋಗಿದ್ದರು. ಈ ವೇಳೆ ಬಂದೂಕಿನಿಂದ ಹಾರಿದ ಗುಂಡು ಕಾರಿನ ಗಾಜಿಗೆ ತಾಗಿ, ಮರದ ಬಾಗಿಲಿಗೆ […]
ಫಾರಿನ್ಗೆ ಅನ್ನಭಾಗ್ಯ ಅಕ್ಕಿ ಸಾಗಾಣೆ: ವಾಹನಗಳಿಗೆ ಜಿಪಿಎಸ್ ಟ್ರ್ಯಾಕರ್, ಗೋದಮುಗಳಿಗೆ ಸಿಸಿಟಿವಿ ಕಡ್ಡಾಯ; ಸಿಎಂ ಖಡಕ್ ಸೂಚನೆ

ಬೆಂಗಳೂರು: ಅನರ್ಹ ಬಿಪಿಎಲ್ ಕಾರ್ಡ್ಗಳ ಆಪರೇಷನ್ಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಆಹಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಮುನಿಯಪ್ಪ, ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಫಾರಿನ್ಗೆ ಅನ್ನಭಾಗ್ಯ ಅಕ್ಕಿ ಸಾಗಾಣೆ ಪ್ರಕರಣದಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ಆಹಾರ ಧಾನ್ಯಗಳ ಸರಬರಾಜು ವಾಹನಗಳಿಗೆ ಜಿಪಿಎಸ್ ಟ್ರ್ಯಾಕರ್, ಗೋದಮುಗಳಿಗೆ ಸಿಸಿಟಿವಿ ಕಡ್ಡಾಯ ಅಳವಡಿಕೆಗೆ ಸಿಎಂ ಆದೇಶಿಸಿದ್ದಾರೆ. ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. […]
ಉಡುಪಿಯ ಪ್ಲೇಸ್ ಮೆಂಟ್ ಆಫೀಸಿನಲ್ಲಿ ಉದ್ಯೋಗವಕಾಶ!

ಉಡುಪಿ:ಉಡುಪಿಯ ಪ್ಲೇಸ್ ಮೆಂಟ್ ಆಫೀಸಿನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: 🔹ಟೆಲಿಕಾಲರ್ -2 🔹ಆಫೀಸ್ ಸ್ಟಾಫ್ -2 ಫ್ರೆಶರ್ಸ್ ನವರಿಗೆ ಮೊದಲ ಆದ್ಯತೆ.ಕೆಲಸದ ಅವಧಿ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ.ಆದಿತ್ಯವಾರ ರಜಾ ದಿನವಾಗಿರುತ್ತದೆ. ಮಾಹಿತಿಗಾಗಿ ಸಂಪರ್ಕಿಸಿ:9663579219
ಉಡುಪಿ: ಸೆ.14ರಂದು ಕೇರಳ ಸಮಾಜಂ ಉಡುಪಿ ವತಿಯಿಂದ “ಓಣಂ ಸಂಭ್ರಮಾಚರಣೆ”

ಉಡುಪಿ: ಕೇರಳ ಸಮಾಜಂ ಉಡುಪಿ ಇದರ ಆಶ್ರಯದಲ್ಲಿ ಪ್ರಥಮ ವರ್ಷದ “ಓಣಂ ಸಂಭ್ರಮಾಚರಣೆ”ಯನ್ನು ಇದೇ ಸೆಪ್ಟೆಂಬರ್ 14ರ ಭಾನುವಾರದಂದು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಕೇರಳ ಸಮಾಜಂನ ಅಧ್ಯಕ್ಷ ಅರುಣ್ ಕುಮಾರ್ ಹೇಳಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 10.30ಕ್ಕೆ ಗೋವಾ ರಾಜ್ಯಪಾಲ ಶ್ರೀಧರನ್ ಪಿಳ್ಳೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಯಶ್ಪಾಲ್ ಸುವರ್ಣ, ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ,ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ […]