ಪಾನ್ ಮಸಾಲಾ ವಿವಾದ: ಶಾರುಖ್, ಅಜಯ್, ಟೈಗರ್‌ಗೆ ಸದ್ಯಕ್ಕಿಲ್ಲ ರಿಲೀಫ್ !ಅರ್ಜಿ ವಜಾ ಮಾಡಿದ ಹೈಕೋರ್ಟ್!

ನವದೆಹಲಿ: ಪಾನ್ ಮಸಾಲಾ ಜಾಹೀರಾತು ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ (FDA) ನೀಡಿದ್ದ ಶೋಕಾಸ್ ನೋಟಿಸ್‌ಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಪೀಠವು ಪ್ರಕರಣದ ವಿಚಾರಣೆ ನಡೆಸಿ, ಈ ವಿಷಯವು ದೆಹಲಿ ಹೈಕೋರ್ಟ್‌ನ ಪ್ರಾದೇಶಿಕ ಅಧಿಕಾರ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿ ಅರ್ಜಿಯನ್ನು ತಿರಸ್ಕರಿಸಿದೆ. ಅರ್ಜಿ ಸಲ್ಲಿಸಿದ್ದು ನಟರಲ್ಲ! […]

‘ರಾಮಾಯಣ’ ಚಿತ್ರದ ಮೊದಲ ಹಾಡು ‘ಜೈ ಜೈ ರಾಮ್’ ರಿಲೀಸ್, ಮೋಡಿ ಮಾಡುವ ಸಂಗೀತಕ್ಕೆ ಮರುಳಾದ ಅಭಿಮಾನಿಗಳು!

ಮುಂಬೈ: ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಮೊದಲ ಭಾಗದ ಮೊದಲ ಹಾಡು ‘ಜೈ ಜೈ ರಾಮ್’ ಬಿಡುಗಡೆಯಾಗಿದೆ. ನಿತೇಶ್ ತಿವಾರಿ ನಿರ್ದೇಶನದ ಈ ಚಿತ್ರದಲ್ಲಿ ರಣಬೀರ್ ಕಪೂರ್ ರಾಮನಾಗಿ ಹಾಗೂ ಸಾಯಿ ಪಲ್ಲವಿ ಸೀತೆಯಾಗಿ ಕಾಣಿಸಿಕೊಂಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಸಂಗೀತ ಸಂಯೋಜಿಸಿರುವ ‘ಜೈ ಜೈ ರಾಮ್’ ಹಾಡಿಗೆ ಡಾ. ಕುಮಾರ್ ವಿಶ್ವಾಸ್ ಸಾಹಿತ್ಯ ಬರೆದಿದ್ದಾರೆ. ಅರಿಜಿತ್ ಸಿಂಗ್ ಹಾಗೂ ಶ್ರೇಯಾ ಘೋಷಾಲ್ ಧ್ವನಿ ನೀಡಿದ್ದಾರೆ. ಸೆಪ್ಟೆಂಬರ್ 14ರಂದು ರಣಬೀರ್ ಕಪೂರ್ ಹಾಗೂ ಸಾಯಿ ಪಲ್ಲವಿ […]

ಮತದಾರರ ಪಟ್ಟಿಯಲ್ಲಿ ಹೆಸರು ತಿದ್ದುಪಡಿಗೆ ಶಿವರಾಜ್‌ಕುಮಾರ್ ಮನವಿ

ಬೆಂಗಳೂರು: ಹ್ಯಾಟ್ರಿಕ್ ಹೀರೋ ನಟ ಶಿವರಾಜ್‌ಕುಮಾರ್ ಅವರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ತಿದ್ದುಪಡಿ ಮಾಡುವಂತೆ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿರುವ ಅಪರ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಕಾಂತರಾಜ್, ನಟ ಶಿವರಾಜ್‌ಕುಮಾರ್ ಅವರಿಗೆ ಯಾವುದೇ ನೋಟಿಸ್ ಜಾರಿಯಾಗಿಲ್ಲ ಎಂದು ತಿಳಿಸಿದ್ದಾರೆ. ತಮ್ಮ ಪಾಸ್‌ಪೋರ್ಟ್‌ನಲ್ಲಿರುವಂತೆ ‘ಪುಟ್ಟಸ್ವಾಮಿ ಶಿವರಾಜ್ ಕುಮಾರ್’ ಎಂದು ಮತದಾರರ ಪಟ್ಟಿಯಲ್ಲೂ ಹೆಸರು ದಾಖಲಿಸುವಂತೆ ಶಿವರಾಜ್‌ಕುಮಾರ್ ಅವರೇ ಸ್ವಯಂಪ್ರೇರಿತವಾಗಿ ಮನವಿ ಮಾಡಿಕೊಂಡಿದ್ದಾರೆ ಎಂದು ಅವರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ […]

ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು ಯಾರು? ಅವರ ಹಿನ್ನೆಲೆ ಇಲ್ಲಿದೆ

ಕನ್ನಡ ಕಿರುತೆರೆಯ ಬಹು ನಿರೀಕ್ಷಿತ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 13 ಅದ್ಧೂರಿಯಾಗಿ ಆರಂಭವಾಗಿದೆ. ಸೆಪ್ಟೆಂಬರ್ 6ರಂದು ನಡೆದ ಗ್ರ್ಯಾಂಡ್ ಪ್ರೀಮಿಯರ್‌ನಲ್ಲಿ ಕಿಚ್ಚ ಸುದೀಪ್ ಅವರು ಸ್ಪರ್ಧಿಗಳನ್ನು ಬಿಗ್ ಬಾಸ್ ಮನೆಗೆ ಬರಮಾಡಿಕೊಂಡರು. ಈ ಬಾರಿ ಸಿನಿಮಾ, ಕಿರುತೆರೆ, ಮಾಡೆಲಿಂಗ್, ರಿಯಾಲಿಟಿ ಶೋ ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರತಿಭೆಗಳು ಒಂದೇ ಮನೆಯಲ್ಲಿ ಸೇರಿದ್ದಾರೆ. ಒಟ್ಟು 16 ಸ್ಪರ್ಧಿಗಳು ಈ ಸೀಸನ್‌ನಲ್ಲಿ ಕಣಕ್ಕಿಳಿದಿದ್ದಾರೆ. ಜಗದೀಶ್ ‘ಲವ್ ಮಾಕ್ಟೇಲ್ 3’ ಸಿನಿಮಾದಲ್ಲಿ ‘ಜಗ್ಗ ಮಮ್ಮಿ’ ಪಾತ್ರದ ಮೂಲಕ […]

‘ನನ್ನ ಹಾಟ್‌ ವಿಡಿಯೋಗಳು ತುಂಬಾ ಜನರಿಗೆ ನೆಮ್ಮದಿ ಕೊಡುತ್ತೆ,ಮೈಮಾಟ ತೋರಿಸಿದ್ರೆ ತಪ್ಪೇನು’ ಎಂದ ನಟಿ ಪೂನಂ!

ಮುಂಬೈ: ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಮಾಡೆಲ್‌ ಹಾಗೂ ನಟಿ ಪೂನಂ ಪಾಂಡೆ, ಇದೀಗ ಭಾರತದಲ್ಲಿ ವೇಶ್ಯಾವಾಟಿಕೆಯನ್ನು ಕಾನೂನುಬದ್ಧಗೊಳಿಸುವ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ತಮ್ಮ ವಿಡಿಯೋಗಳನ್ನು ‘ಸಾಮಾಜಿಕ ಸೇವೆ’ ಎಂದು ಬಣ್ಣಿಸಿರುವ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಆರ್‌ವಿಸಿಜೆ ಮೂವೀಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಪೂನಂ ಪಾಂಡೆ, ತಮ್ಮ ಹಾಟ್‌ ವಿಡಿಯೋಗಳು ಒತ್ತಡದಲ್ಲಿರುವ ಜನರಿಗೆ, ವಿಶೇಷವಾಗಿ ಪುರುಷರಿಗೆ, ನೆಮ್ಮದಿ ನೀಡಲು ಸಹಾಯ ಮಾಡಬಹುದು ಎಂದು ಹೇಳಿದ್ದಾರೆ. ‘ನನ್ನ ವಿಡಿಯೋ ಒಬ್ಬರಿಗೆ ನೆಮ್ಮದಿ […]