‘ಚಾರ್ಲಿ 777’ ಗೆ ಉತ್ತಮ ಕನ್ನಡ ಸಿನಿಮಾ : ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ನವದೆಹಲಿ: ಕನ್ನಡ ಚಿತ್ರರಂಗದ ರಕ್ಷಿತ್ ಶೆಟ್ಟಿ ಅವರ ‘ಚಾರ್ಲಿ 777’ ಸಿನಿಮಾ ಉತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. 11 ಸದಸ್ಯರಿದ್ದ ತೀರ್ಪುಗಾರರ ಮುಖ್ಯಸ್ಥ ಚಲನಚಿತ್ರ ನಿರ್ದೇಶಕ ಕೇತನ್ ಮೆಹ್ತಾ 2021ರ ರಾಷ್ಟ್ರೀಯ ಪ್ರಶಸ್ತಿಗಳನ್ನು ಘೋಷಿಸಿದರು. 69ನೇ ಪ್ರತಿಷ್ಠಿತ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಇಂದು (ಗುರುವಾರ) ಪ್ರಕಟಿಸಿದೆ. ಪ್ರತಿಷ್ಠಿತ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಇಂದು ಕೇಂದ್ರ ಸರ್ಕಾರ ಪ್ರಕಟಿಸಿದೆ. ‘ಹೋಮ್’ ಅತ್ಯುತ್ತಮ ಮಲಯಾಳಂ ಚಿತ್ರ. ‘ಸರ್ದಾರ್ ಉಧಮ್’ ಅತ್ಯುತ್ತಮ ಹಿಂದಿ ಚಿತ್ರವಾಗಿ ಆಯ್ಕೆಯಾಗಿದೆ.’ಉಪ್ಪೇನಾ’ ಸಿನಿಮಾವನ್ನು […]
ಹಸೆಮಣೆ ಏರಲು ಸಜ್ಜಾದ ವರುಣ್ ತೇಜ್ - ಲಾವಣ್ಯ ತ್ರಿಪಾಠಿ

ಜೂನ್ 9 ರಂದು ಈ ಜೋಡಿಯ ನಿಶ್ಚಿತಾರ್ಥ ನೆರವೇರಿತ್ತು. ಮೆಗಾ ಬ್ರದರ್ ನಾಗಬಾಬು ಅವರ ಮನೆಯಲ್ಲಿ ಅದ್ಧೂರಿಯಾಗಿ ಸಮಾರಂಭ ನಡೆದಿತ್ತು. ಮೆಗಾಸ್ಟಾರ್ ಚಿರಂಜೀವಿ ಮತ್ತು ಸುರೇಖಾ ದಂಪತಿಯ ಸಮ್ಮುಖದಲ್ಲಿ ಹಾರ ಬದಲಾಯಿಸಿಕೊಂಡಿದ್ದರು. ಇದೀಗ ತಾರಾ ಜೋಡಿಯ ಮದುವೆಗೆ ಮುಹೂರ್ತ ನಿಗದಿಯಾಗಿದೆ. ಮೆಗಾ ಫ್ಯಾಮಿಲಿಯಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಟಾಲಿವುಡ್ ಸೂಪರ್ಸ್ಟಾರ್ ವರುಣ್ ತೇಜ್ ಮತ್ತು ನಟಿ ಲಾವಣ್ಯ ತ್ರಿಪಾಠಿ ಶೀಘ್ರದಲ್ಲೇ ಹಸೆಮಣೆ ಏರಲು ಸಜ್ಜಾಗಿದ್ದಾರೆ.ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಮದುವೆಗೆ ಡೇಟ್ ಫಿಕ್ಸ್ ಆಗಿದೆ. ಇಟಲಿಯಲ್ಲಿ […]
ಹಸೆಮಣೆ ಏರಿದ ಸ್ಯಾಂಡಲ್ವುಡ್ ಸೆಲೆಬ್ರಿಟಿಗಳ ಸಾಲಿಗೆ ಹೊಸದಾಗಿ ಸೇರ್ಪಡೆ : ಹರ್ಷಿಕಾ ಭುವನ್

ಕೊಡಗು: ಪ್ರೀತಿಸಿ, ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ ಸ್ಯಾಂಡಲ್ವುಡ್ ಸೆಲೆಬ್ರಿಟಿಗಳ ಸಾಲಿಗೆ ಹೊಸದಾಗಿ ಹರ್ಷಿಕಾ ಭುವನ್ ಸೇರಿದ್ದಾರೆ. ಹೌದು, ಇಂದು ಕೊಡವ ಪದ್ಧತಿಯಂತೆ ಶಾಸ್ತ್ರೋಕ್ತವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು.ಕನ್ನಡ ಚಿತ್ರರಂಗದಲ್ಲಿ ನಟಿ ಹರ್ಷಿಕಾ ಪೂಣಚ್ಚ ಮತ್ತು ನಟ ಭುವನ್ ಪೊನ್ನಣ್ಣ ಮದುವೆ ಸಂಭ್ರಮ ಮನೆ ಮಾಡಿದೆ.ಗುರುಹಿರಿಯರ, ಕುಟುಂಬಸ್ಥರ, ಆಪ್ತರ ಸಮ್ಮುಖದಲ್ಲಿ ವಿವಾಹ ಶಾಸ್ತ್ರಗಳು ನೆರವೇರಿತು. ಕೊಡಗಿನ ವಿರಾಜ್ ಪೇಟೆಯಲ್ಲಿ ಅಮ್ಮತಿ ಕೊಡವ ಸಮಾಜದಲ್ಲಿ ಮದುವೆ ಜರುಗಿದೆ. ಕೊಡವ ಸಾಂಪ್ರದಾಯಿಕ ಉಡುಗೆಯಲ್ಲಿ ನಟ – ನಟಿ ಮಿಂಚಿದರು. ಕೊಡವ […]
ಚಂದನವನದತ್ತ ಪ್ರಯಾಣ ಬೆಳೆಸಿದ ಕರಾವಳಿಯ ಹುಡುಗ: ರೂಪೇಶ್ ಶೆಟ್ಟಿ ನಟನೆಯ ಅಧಿಪತ್ರ ಚಿತ್ರದ ಮುಹೂರ್ತ

ಬಿಗ್ ಬಾಸ್ ಖ್ಯಾತಿಯ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಟನೆಯ ಕನ್ನಡ ಚಿತ್ರ ‘ಅಧಿಪತ್ರ’ ಸಿನಿಮಾ ಸೆಟ್ಟೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಚಿತ್ರದ ಮುಹೂರ್ತ ನೆರವೇರಿದೆ. ಈಗಾಗಲೇ ತುಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ರೂಪೇಶ್ ಚಂದನವನದತ್ತ ಪ್ರಯಾಣ ಬೆಳೆಸಿದ್ದಾರೆ. ಈ ಬಗ್ಗೆ ಮಾತನಾಡಿದ ನಟ ರೂಪೇಶ್ ಶೆಟ್ಟಿ, ಬಿಗ್ ಬಾಸ್ ಬಳಿಕ ಕನ್ನಡ ಸಿನಿಮಾ ಯಾವಾಗ ಎಂದು ಎಲ್ಲರೂ ಕೇಳುತ್ತಿದ್ದರು. ಬಿಗ್ ಬಾಸ್ ಗೂ ಮುಂಚೆ ‘ಸರ್ಕಸ್’ ಎಂಬ ತುಳು ಸಿನಿಮಾ ನಿರ್ದೇಶನ ಮಾಡಿ ನಟಿಸಿದ್ದೆ. ಆ […]
ಅಣ್ಣ From Mexico’ ಮೋಷನ್ ಪೋಸ್ಟರ್ ಬಿಡುಗಡೆ: ಹುಟ್ಟುಹಬ್ಬದಂದು ಡಾಲಿ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್

‘ ಅಣ್ಣ From Mexico ‘ ಶಂಕರ್ ಗುರು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಎರಡನೇ ಸಿನಿಮಾವಾಗಿದೆ. ಪಕ್ಕ ಆಯಕ್ಷನ್ ಚಿತ್ರವಾಗಿದ್ದು, ಅಜ್ಜಿ ಮತ್ತು ಮೊಮ್ಮಗನ ಬಾಂಧವ್ಯದ ಕಥೆ ಸಿನಿಮಾದಲ್ಲಿರಲಿದೆ. ಹಾಗೆಯೇ, ಸತ್ಯ ರಾಯಲ್ ನಿರ್ಮಾಣದಲ್ಲಿ ತಯಾರಾಗಲಿರುವ ಈ ಸಿನಿಮಾಕ್ಕೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡಲಿದ್ದು, ಮುಂದಿನ ನವೆಂಬರ್ ತಿಂಗಳಿನಿಂದ ಚಿತ್ರೀಕರಣ ಶುರುವಾಗಲಿದೆ. ಮೆಕ್ಸಿಕೋ ಸೇರಿದಂತೆ ಹಲವೆಡೆ ಶೂಟಿಂಗ್ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.ಬಡವ ರಾಸ್ಕಲ್ ಚಿತ್ರತಂಡ ಮತ್ತೊಂದು ಸಿನಿಮಾ ಘೊಷಿಸಿದೆ. ನಟ ಧನಂಜಯ್ ಹುಟ್ಟುಹಬ್ಬದ ಪ್ರಯುಕ್ತ ‘ಅಣ್ಣ […]