ಆಸ್ಪತ್ರೆಗೆ ದಾಖಲು : ಕನ್ನಡದ ಹಿರಿಯ ನಟ ಮಂಡ್ಯ ರಮೇಶ್ ದಿಢೀರ್ ಅಸ್ವಸ್ಥ

ಸ್ಯಾಂಡಲ್‌ವುಡ್‌ನ ಖ್ಯಾತ ಕಾಮಿಡಿಯನ್ ಹಾಗೂ ಹಿರಿಯ ನಟ ಮಂಡ್ಯ ರಮೇಶ್ ಅವರು ದಿಢೀರ್ ಅಸ್ವಸ್ಥರಾಗಿದ್ದು.. ಅವರನ್ನು ಬೆಂಗಳೂರಿನ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ..ಸದ್ಯ ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಇದೀಗ ಈ ಬಗ್ಗೆ ಮಂಡ್ಯ ರಮೇಶ್ ಅವರ ಪತ್ನಿ ಸರೋಜಾ ಹೆಗಡೆ ಮಾಹಿತಿ ನೀಡಿದ್ದು, ವೈದ್ಯರ ಸಲಹೆ ಮೇರೆಗೆ ನಾಳೆ ಆಸ್ಪತ್ರೆಯಿಂದ ನಟ ಮಂಡ್ಯ ರಮೇಶ್ ಡಿಸ್ಚಾರ್ಜ್ ಆಗಲಿದ್ದಾರೆ ಎನ್ನಲಾಗಿದೆ.. ಸದ್ಯ ರಮೇಶ್ ಅವರು ಸೂಕ್ತ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಗುಣಮುಖವಾಗುವ ಹಂತದಲ್ಲಿದ್ದಾರೆ ಎನ್ನುವುದು […]
ಮಳೆ ಹುಡುಗಿ ಪೂಜಾ ಗಾಂಧಿಯ ಗೃಹಸ್ಥ ಜೀವನದ ಶುಭಾರಂಭ

ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾ ಗಾಂಧಿ ತಮ್ಮ ದೀರ್ಘ ಕಾಲದ ಗೆಳೆಯ ಉದ್ಯಮಿ ವಿಜಯ್ ಘೋರ್ಪಡೆ ಅವರನ್ನು ಕುವೆಂಪು ಅವರ ಮಂತ್ರ ಮಾಂಗಲ್ಯ ಪದ್ಧತಿಯ ಅನುಸಾರ ಮದುವೆಯಾಗಿ ಗೃಹಸ್ಥ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ರೆಸಾರ್ಟ್‌ನಲ್ಲಿ ಪೂಜಾ ಗಾಂಧಿ ಹಾಗೂ ವಿಜಯ್ ಘೋರ್ಪಡೆ ಅವರ ವಿವಾಹ ಮಹೋತ್ಸವ ಜರುಗಿದ್ದು ಕುಟುಂಬಸ್ಥರು ಹಾಗೂ ಆತ್ಮೀಯರ ಸಮ್ಮುಖದಲ್ಲಿ ಹಾರ ಬದಲಾಯಿಸಿಕೊಂಡು, ಮಂತ್ರ ಮಾಂಗಲ್ಯ ಪದ್ಧತಿಯಂತೆ ಪೂಜಾ ಗಾಂಧಿ ಮತ್ತು ವಿಜಯ್ ಘೋರ್ಪಡೆ ಹೊಸ ಬಾಳಿಗೆ ನಾಂದಿ ಹಾಡಿದ್ದಾರೆ. ಪೂಜಾ […]
ಐ.ಎಫ್.ಎಫ್.ಐ ಪ್ರಶಸ್ತಿಯನ್ನು ಶಂಕರ್ ನಾಗ್ ಅವರಿಗೆ ಅರ್ಪಿಸಿದ ರಿಷಬ್ ಶೆಟ್ಟಿ

54 ನೇ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾ ‘ಸ್ಪೆಷಲ್ ಜ್ಯೂರಿ ಅವಾರ್ಡ್’ ಗೆ ನಟ ನಿರ್ದೇಶಕ ರಿಷಬ್ ಶೆಟ್ಟಿ ಭಾಗಿಯಾಗಿದ್ದು, ಪ್ರಶಸ್ತಿಯನ್ನು ಕನ್ನಡ ಚಿತ್ರರಂಗದ ಶ್ರೇಷ್ಟ ನಟ ಶಂಕರ್ ನಾಗ್ ಅವರಿಗೆ ಅರ್ಪಿಸಿದ್ದಾರೆ. ಶಂಕರ್ನಾಗ್ ಅವರು ತಮಗೆ ಸ್ಪೂರ್ತಿಯಾಗಿದ್ದು ಒಂದಾನೊಂದು ಕಾಲದಲ್ಲಿ ಚಿತ್ರಕ್ಕೆ 1979 ರಲ್ಲಿ ಅತ್ಯುತ್ತಮ ನಟ ಎಂಬ ಪ್ರಶಸ್ತಿ ಇದೇ ಚಿತ್ರೋತ್ಸವದಲ್ಲಿ ಶಂಕರ್ ನಾಗ್ ಅವರಿಗೆ ದೊರೆತಿದ್ದು, ಅವರ ದಾರಿಯಲ್ಲಿ ನಡೆಯಲು ಪ್ರಯತ್ನಿಸುತ್ತಿರುವ ತನಗೆ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದ್ದು, ಪ್ರಶಸ್ತಿಯನ್ನು ಶಂಕರ್ […]
‘ಅನಿಮಲ್’ : ರಣಬೀರ್- ರಶ್ಮಿಕಾ ಅಭಿನಯದ ‘ಅನಿಮಲ್’ ಚಿತ್ರಕ್ಕೆ ಎಸ್ಎಸ್ ರಾಜಮೌಳಿ, ಮಹೇಶ್ ಬಾಬು ಸಾಥ್

ಹೈದರಾಬಾದ್: ಹೈದರಾಬಾದ್ನಲ್ಲಿ ಇಂದು ಸಂಜೆ ಮುತ್ತಿನ ನಗರಿ ಹೈದರಾಬಾದ್ನಲ್ಲಿ ತಂಡ ಪ್ರಚಾರ ಕಾರ್ಯಕ್ರಮ ನಡೆಸಲಿದೆ. ಈ ಕಾರ್ಯಕ್ರಮದ ಮೆರಗನ್ನು ಹೆಚ್ಚಿಸಲು ಟಾಲಿವುಡ್ ಸ್ಟಾರ್ ನಿರ್ದೇಶಕ ಮತ್ತು ನಟ ಕೂಡ ಮುಂದಾಗಿದ್ದಾರೆ. ಈ ಸಂಬಂಧ ಟೀ ಸೀರಿಸ್ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಿರ್ದೇಶಕ ರಾಜಮೌಳಿ ಮತ್ತು ಮಹೇಶ್ ಬಾಬು ಅವರು ಪ್ರಿರಿಲೀಸ್ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದೆ.ಆಯಕ್ಷನ್ ಥ್ರಿಲ್ಲರ್ ‘ಅನಿಮಲ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರತಂಡ ಬಿಡುವಿಲ್ಲದ ಪ್ರಚಾರ ಕಾರ್ಯದಲ್ಲಿ ನಿರಂತವಾಗಿದೆ.ಹೈದರಾಬಾದನಲ್ಲಿ ನಡೆಯಲಿರುವ […]
ನಿರ್ದೇಶಕ ಅರವಿಂದ್ ಕೌಶಿಕ್: ‘ಅರ್ಧಂಬರ್ಧ ಪ್ರೇಮಕಥೆ’ ಯುವ ಪೀಳಿಗೆಯನ್ನ ಸೆಳೆಯೋ ಚಿತ್ರಕಥೆ

ಶೀರ್ಷಿಕೆಯಿಂದಲೇ ಗಮನ ಸೆಳೆಯುತ್ತಿರೋ ಈ ಚಿತ್ರದ ಟ್ರೈಲರ್ ಬಿಡುಗಡೆ ಆಗಿದ್ದು, ಸಿನಿಪ್ರಿಯರು ಟ್ರೈಲರ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಬಿಗ್‌ಬಾಸ್ ಖ್ಯಾತಿಯ ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆ.ಪಿ ಈ ಚಿತ್ರದಲ್ಲಿ ಯುವ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ.ಕನ್ನಡ ಚಿತ್ರರಂಗದ ತುಘಲಕ್ ಸಿನಿಮಾ ಖ್ಯಾತಿಯ ಅರವಿಂದ್ ಕೌಶಿಕ್ ನಿರ್ದೇಶನದ ಮತ್ತೊಂದು ಪ್ರೇಮ್ ಕಹಾನಿ ‘ಅರ್ಧಂಬರ್ಧ ಪ್ರೇಮಕಥೆ’.ಇತ್ತೀಚೆಗೆ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು, ‘ಅರ್ಧಂಬರ್ಧ ಪ್ರೇಮಕಥೆ’ಯ ಕಿರುನೋಟವನ್ನು ಸಿನಿಪ್ರಿಯರು ಮೆಚ್ಚಿಕೊಂಡಿದ್ದಾರೆ. ಇತ್ತೀಚೆಗೆ ನಡೆದ ಚಿತ್ರದ ಟ್ರೈಲರ್ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ದೇಶಕ ಅರವಿಂದ್ ಕೌಶಿಕ್, […]