ಮುಂಬೈ:ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ದುಷ್ಕರ್ಮಿಗಳಿಂದ ಚಾಕು ಇರಿತ; ಆಸ್ಪತ್ರೆಗೆ ದಾಖಲು

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ಜ.16ರಂದು ನಡೆದ ಬಗ್ಗೆ ವರದಿಯಾಗಿದೆ. ಬಾಂದ್ರಾ (ಪಶ್ಚಿಮ) ದಲ್ಲಿರುವ ಅವರ ನಿವಾಸದೊಳಗೆ ನುಗ್ಗಿದ ದುಷ್ಕರ್ಮಿಗಳು ಚೂರಿಯಿಂದ 2-3 ಬಾರಿ ಇರಿದ ಪರಿಣಾಮ ನಟ ಗಾಯಗೊಂಡಿದ್ದಾರೆ. ಮುಂಬೈ ನ ಲೀಲಾವತಿ ಆಸ್ಪತ್ರೆಯಲ್ಲಿ ನಟ ಚಿಕಿತ್ಸೆ ಪಡೆಯುತ್ತಿದ್ದಾರೆ. ಜ.16ರ ಗುರುವಾರ ಮುಂಜಾನೆ 2:30 ರ ಸುಮಾರಿಗೆ ನಟ ತನ್ನ ಇತರ ಕುಟುಂಬ ಸದಸ್ಯರೊಂದಿಗೆ ತನ್ನ ಮನೆಯಲ್ಲಿ ಮಲಗಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತದೆ. […]

ಅಲ್ಲು ಅರ್ಜುನ್ ವಿರುದ್ಧ ಕೇಸ್ ಮೇಲೆ ಕೇಸ್: ಈಗ ಮತ್ತೊಂದು ಕೇಸ್ ದಾಖಲು

ಪುಷ್ಪ 2 ಖ್ಯಾತಿ ಅಲ್ಲು ಅರ್ಜುನ್ ಇತ್ತೀಚೆಗೆ ಭಾರೀ ಸುದ್ದಿಯಲ್ಲಿರುವುದು ನಿಮಗೆಲ್ಲಾ ಗೊತ್ತೇ ಇದೆ. ಈಗ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಸಿನಿಮಾ ಮೂಲಕ ಅಲ್ಲ, ಇನ್ನೊಂದು ಕೇಸ್ ಮೂಲಕ, ಹೌದು. ಪುಷ್ಪಾ 2 ಸಿನಿಮಾದಲ್ಲಿ, ಪೊಲೀಸರಿಗೆ ಅವಮಾನ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಅಲ್ಲು ಅರ್ಜುನ್ ವಿರುದ್ದ ದೂರು ನೀಡಿದ್ದಾರೆ. ಪುಷ್ಪ 2’ ಚಿತ್ರದಲ್ಲಿರುವ ರಕ್ತಚಂದನ ಕಳ್ಳಸಾಗಣೆ ಮಾಡುವ ಪುಷ್ಪರಾಜ್ ಹಾಗೂ ಪೊಲೀಸ್ ಅಧಿಕಾರಿ ಬನ್ವರ್ ಸಿಂಗ್ ಶೇಖಾವತ್ ನಡುವಿನ ಘರ್ಷಣೆ ಬಗ್ಗೆ. ಹಾಗು ಚಿತ್ರದಲ್ಲಿ ಬಳಸಿರುವ ಬಹುತೇಕ […]

ಹೈದರಾಬಾದ್: ಅಕ್ಕಿನೇನಿ ಕುಟುಂಬದಲ್ಲಿ ಮದುವೆ ಸಂಭ್ರಮ: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು ಎಂಬ ಪ್ರಶ್ನೆಗೆ ನಾಗಾರ್ಜುನ್ ಸ್ಪಷ್ಟನೆ

ಹೈದರಾಬಾದ್:‌ ಅಕ್ಕಿನೇನಿ ನಾಗಾರ್ಜುನ್‌ (Akkineni Nagarjuna) ಕುಟುಂಬದಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ನಾಗ ಚೈತನ್ಯ – ಶೋಭಿತಾ ವಿವಾಹಕ್ಕೆ ಅಕ್ಕಿನೇನಿ ಕುಟುಂಬ ಸಜ್ಜಾಗಿದೆ. ಆತ್ಮೀಯರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯುವ ವಿವಾಹಕ್ಕೆ ದಿನಗಣನೆ ಶುರುವಾಗಿದೆ. ಇತ್ತೀಚೆಗೆ ನಾಗಚೈತನ್ಯ (Naga Chaitanya) ಮತ್ತು ಶೋಭಿತಾ ಧೂಳಿಪಾಲ (Sobhita Dhulipala) ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ದರಾಗಿದ್ದಾರೆ. ಇದೇ ಡಿಸೆಂಬರ್‌ನಲ್ಲಿ ಅನ್ನಪೂರ್ಣ ಸ್ಟುಡಿಯೋಸ್ ನಲ್ಲಿ ವಿವಾಹ ಸಮಾರಂಭ ನಡೆಯಲಿದೆ. ಈ ನಡುವೆ ಇತ್ತೀಚೆಗೆ ನಾಗಚೈತನ್ಯ ಸಹೋದರ […]

IC 814 ವೆಬ್ ಸೀರೀಸ್ ವಿವಾದ: ತಪ್ಪನ್ನು ಸರಿಪಡಿಸುವುದಾಗಿ ಭಾರತ ಸರ್ಕಾರಕ್ಕೆ Netflix India ಭರವಸೆ.

ನವದೆಹಲಿ: ಒಟಿಟಿ Netflix India “IC 814 ವೆಬ್ ಸೀರೀಸ್” ನ ಕಂಟೆಂಟ್ ವಿವಾದಕ್ಕೆ ಸಂಬಂಧಿಸಿದಂತೆ ತನ್ನ ತಪ್ಪನ್ನು ಸರಿಪಡಿಸುವುದಾಗಿ ಭಾರತ ಸರ್ಕಾರಕ್ಕೆ ಭರವಸೆ ನೀಡಿದೆ. IC-814- ದಿ ಕಂದಹಾರ್ ಹೈಜಾಕ್ ಕುರಿತ ವೆಬ್ ಸೀರೀಸ್ ನಲ್ಲಿ ಹೈಜಾಕ್ ಮಾಡಿದವರನ್ನು ಚಿತ್ರಿಸಿದ ರೀತಿ ವಿವಾದಕ್ಕೀಡಾಗಿರುವ ಹಿನ್ನೆಲೆಯಲ್ಲಿ Netflix India ಮುಖ್ಯಸ್ಥರಿಗೆ ಭಾರತ ಸರ್ಕಾರ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿದ್ದ Netflix India ಮುಖ್ಯಸ್ಥರು ಕಂಟೆಂಟ್ ನ್ನು ಪರಿಷ್ಕರಿಸುವುದಾಗಿ […]

ಕಾಪಿರೈಟ್​​ ಉಲ್ಲಂಘನೆ ಆರೋಪ: ನಟ ರಕ್ಷಿತ್​ ಶೆಟ್ಟಿ ವಿರುದ್ಧ ಬೆಂಗಳೂರಿನಲ್ಲಿ ಕೇಸು ದಾಖಲು.

ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ಯ ಎರಡು ಹಾಡುಗಳನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ನವೀನ್ ಅವರು ಆರೋಪಿಸಿದ್ದಾರೆ. ಹಕ್ಕುಸ್ವಾಮ್ಯ, ಪ್ರಸಾರದ ಹಕ್ಕನ್ನು ಖರೀದಿಸದೆ ಹಾಡುಗಳ ಬಳಕೆ ಮಾಡಿದ್ದಾಗಿ ರಕ್ಷಿತ್ ಶೆಟ್ಟಿ ಅವರ ವಿರುದ್ಧ ಕೇಸ್ ದಾಖಲಾಗಿದೆ. ಕಾಪಿರೈಟ್​​ ಉಲ್ಲಂಘನೆ ಆರೋಪದಡಿ ನಟ ರಕ್ಷಿತ್​ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಎರಡು ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಆರೋಪದಡಿಯಲ್ಲಿ ರಕ್ಷಿತ್ ಶೆಟ್ಟಿ ಅವರಿಗೆ ಸಂಕಷ್ಟ ಎದುರಾಗಿದೆ. ಈಗಾಗಲೇ ದೂರವಾಣಿ ಕರೆ ಮಾಡಿ […]