ನೀಟ್ ಪ್ರತಿಭಟನೆಯ ಬಿಸಿ:ಇಂದು ರಿಲೀಸ್ ಆಗಬೇಕಿದ್ದ ‘ರಾಮಾಯಣ’ಟ್ರೇಲರ್ ಬಿಡುಗಡೆ ಮುಂದಕ್ಕೆ

ನವದೆಹಲಿ: ನಟ ಯಶ್ ಹಾಗೂ ನಿರ್ಮಾಪಕ ನಮಿತ್ ಮಲ್ಹೋತ್ರಾ ಜಂಟಿಯಾಗಿ ನಿರ್ಮಿಸುತ್ತಿರುವ ಬಹು ನಿರೀಕ್ಷಿತ ‘ರಾಮಾಯಣ’ ಚಿತ್ರದ ಟ್ರೇಲರ್ ಬಿಡುಗಡೆಯನ್ನು ಚಿತ್ರತಂಡ ದಿಢೀರ್ ಮುಂದೂಡಿದೆ. ಶುಕ್ರವಾರ ದೆಹಲಿಯ ಭಾರತ್ ಮಂಟಪದಲ್ಲಿ ಮಾಧ್ಯಮಗಳಿಗೆ ವಿಶೇಷ ಪ್ರೀಮಿಯರ್ ಪ್ರದರ್ಶನದ ಬಳಿಕ ಟ್ರೇಲರ್ ಅನ್ನು ಜಾಗತಿಕ ಮಟ್ಟದಲ್ಲಿ ಬಿಡುಗಡೆ ಮಾಡುವ ಯೋಜನೆ ಇತ್ತು. ಆದರೆ, ದೇಶದಾದ್ಯಂತ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಚಿತ್ರತಂಡ ಈ ಕಾರ್ಯಕ್ರಮವನ್ನು ಮುಂದೂಡಲು ನಿರ್ಧರಿಸಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದಂತೆ ದೆಹಲಿ ಸೇರಿದಂತೆ […]

ಬಿಡುಗಡೆಗೆ ಮೊದಲೇ ಅಬ್ಬರಿಸಿದ ‘ಸ್ಪೈಡರ್ ಮ್ಯಾನ್’ ಭಾರತದಲ್ಲಿ 1.55 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳ ದಾಖಲೆ ಮಾರಾಟ: ಹಾಲಿವುಡ್ ಚಿತ್ರಕ್ಕೆ ಮುಗಿಬಿದ್ದ ಭಾರತೀಯರು

ಹಾಲಿವುಡ್‌ನ ಜನಪ್ರಿಯ ಸೂಪರ್‌ಹೀರೋ ಸರಣಿಗಳಲ್ಲೊಂದು ‘Spider-Man’ ಮತ್ತೊಮ್ಮೆ ಭಾರತೀಯ ಸಿನಿಪ್ರಿಯರನ್ನು ರಂಜಿಸಲು ಸಜ್ಜಾಗಿದೆ. ಇದೇ ತಿಂಗಳ ಅಂತ್ಯದಲ್ಲಿ ಬಿಡುಗಡೆಯಾಗಲಿರುವ ‘Spider-Man: Brand New Day’ ಚಿತ್ರದ ಮೇಲೆ ಭಾರೀ ನಿರೀಕ್ಷೆ ವ್ಯಕ್ತವಾಗಿದ್ದು, ಬಿಡುಗಡೆಯ ಮುನ್ನವೇ ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆಗಳತ್ತ ಸಿನಿಮಾ ದಾಪುಗಾಲು ಇಡುತ್ತಿದೆ. ಭಾರತದಲ್ಲಿ ಹಾಲಿವುಡ್ ಸಿನಿಮಾಗಳಿಗೆ ದೊಡ್ಡ ಮಾರುಕಟ್ಟೆಯಿದ್ದು, ಅದರಲ್ಲೂ ಸ್ಪೈಡರ್‌ಮ್ಯಾನ್ ಸರಣಿಗೆ ಅಪಾರ ಅಭಿಮಾನಿ ಬಳಗವಿದೆ. ಇದೇ ಕಾರಣಕ್ಕೆ ಸಿನಿಮಾ ಬಿಡುಗಡೆಯಾಗಲು ಇನ್ನೂ ಎಂಟು ದಿನ ಬಾಕಿ ಇರುವಾಗಲೇ ದೇಶದ ವಿವಿಧ ಮಲ್ಟಿಪ್ಲೆಕ್ಸ್‌ಗಳಲ್ಲಿ […]

‘ಶಿಕ್ಷಣವೇ ಮುಂದಿನ ಟ್ರೆಂಡ್ ಆಗಬೇಕು, ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳ ಬಗ್ಗೆ ನನ್ನ ಹೃದಯ ಮಿಡಿಯುತ್ತದೆ’ ನೀಟ್ ಪ್ರತಿಭಟನೆಗೆ ಬೆಂಬಲಿಸಿ ಬಾಲಿವುಡ್ ನಟ ಸಲ್ಮಾನ್ ಖಾನ್ ಪೋಸ್ಟ್

ದೆಹಲಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅವರು ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಸಲ್ಮಾನ್ ಖಾನ್ ತಮ್ಮ ಪೋಸ್ಟ್‌ನಲ್ಲಿ, “ಇದು ಆರಂಭದಲ್ಲಿ ಅತ್ಯಂತ ಶಾಂತಿಯುತ ಪ್ರತಿಭಟನೆಯಾಗಿತ್ತು. ಆದರೆ ಅದು ಹಿಂಸಾತ್ಮಕ ತಿರುವು ಪಡೆದುಕೊಂಡಿರುವುದು ನಿಜಕ್ಕೂ ನೋವುಂಟು ಮಾಡಿದೆ. ಗಾಯಗೊಂಡ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳ […]

“ನಂಗೆ ಏನೂ ಆಗಿಲ್ಲ, ಆರೋಗ್ಯವಾಗಿದ್ದೇನೆ” ಅಭಿಮಾನಿಗಳಿಗೆ ಸ್ಪಷ್ಟನೆ ಕೊಟ್ಟ ಬಿಗ್ ಬಿ! ವದಂತಿಗಳಿಗೆ ಕಂಗಾಲಾಗಿದ್ದವರು ಈಗ ಖುಷ್

ಮುಂಬೈ: ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಅವರ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವದಂತಿಗಳಿಗೆ ಸ್ವತಃ ಬಿಗ್ ಬಿ ಸ್ಪಷ್ಟನೆ ನೀಡಿದ್ದಾರೆ. ಇತ್ತೀಚೆಗೆ ಆಸ್ಪತ್ರೆ, ಶಸ್ತ್ರಚಿಕಿತ್ಸೆ ಹಾಗೂ ಐಸಿಯು ಕುರಿತು ಅವರು ಬರೆದಿದ್ದ ಬ್ಲಾಗ್‌ ಪೋಸ್ಟ್ ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು. ಆದರೆ, ಅದು ತಮ್ಮ ಆರೋಗ್ಯಕ್ಕೆ ಸಂಬಂಧಿಸಿದ ಬರಹವಲ್ಲ ಎಂದು ಅಮಿತಾಬ್ ತಿಳಿಸಿದ್ದಾರೆ. ಇತ್ತೀಚೆಗೆ ಪ್ರಕಟಿಸಿದ್ದ ಬ್ಲಾಗ್‌ನಲ್ಲಿ ಆಸ್ಪತ್ರೆ, ಶಸ್ತ್ರಚಿಕಿತ್ಸೆ, ಐಸಿಯು ಹಾಗೂ ಚೇತರಿಕೆ ಕುರಿತು ಉಲ್ಲೇಖಿಸಿದ್ದರಿಂದ ಅಮಿತಾಬ್ ಆರೋಗ್ಯ ಹದಗೆಟ್ಟಿದೆ ಎಂಬ ಸುದ್ದಿ […]

ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಖಂಡಿಸಿದ ನಟ ಯುವ ರಾಜ್ ಕುಮಾರ್, ಮಾನವೀಯತೆಗೆ ಸರ್ಕಾರ ಬೆಲೆ ಕೊಡದಿದ್ದರೆ ಹೇಗೆ ಎಂದು ಪ್ರಶ್ನಿಸಿದ ನಟ

ನವದೆಹಲಿ: ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಕನ್ನಡ ನಟ ಯುವ ರಾಜ್‌ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದು, “ಇದಕ್ಕೆಲ್ಲಾ ಯಾರು ಹೊಣೆ?” ಎಂದು ಪ್ರಶ್ನಿಸಿದ್ದಾರೆ. ಸಿಜೆಪಿ ನೇತೃತ್ವದಲ್ಲಿ ಸೋಮವಾರ (ಜು. 20) ನಡೆದ ಪ್ರತಿಭಟನೆಯಲ್ಲಿ ಸಾವಿರಕ್ಕೂ ಹೆಚ್ಚು ಯುವಕರು ಭಾಗವಹಿಸಿದ್ದರು. ಪ್ರತಿಭಟನೆಯ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದು, ಹಲವರು ಗಾಯಗೊಂಡಿರುವ ವರದಿಗಳ ನಡುವೆ ಈ […]