ಚೆನ್ನೈನಲ್ಲಿ ಜೈಲರ್ ಸಕ್ಸಸ್ ಸೆಲೆಬ್ರೇಶನ್

ಜೈಲರ್ ಈ ಹಿಂದಿನ ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿದಿದೆ. ಭಾರತದ ಅತ್ಯಂತ ಪ್ರಸಿದ್ಧ ನಟ ರಜನಿಕಾಂತ್ ಅವರ ಜೈಲರ್ ಸಿನಿಮಾ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಮುಂದುವರಿಸಿದೆ. ನೆಲ್ಸನ್ ದಿಲೀಪ್ ಕುಮಾರ್ ಆಯಕ್ಷನ್ ಕಟ್ ಹೇಳಿರುವ ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಸಖತ್ ಸದ್ದು ಮಾಡುತ್ತಿದೆ.ಚೆನ್ನೈನಲ್ಲಿ ಜೈಲರ್ ಸಿನಿಮಾ ಸಕ್ಸಸ್ ಸೆಲೆಬ್ರೇಶನ್ ನಡೆದಿದೆ. ಗಲ್ಲಾಪೆಟ್ಟಿಗೆ ಅಂಕಿ ಅಂಶ ಎಲ್ಲರ ಹುಬ್ಬೇರುವಂತೆ ಮಾಡಿದೆ. ತಲೈವಾ 2 ವರ್ಷಗಳ ಬ್ರೇಕ್ ಬಳಿಕ ಜೈಲರ್ನೊಂದಿಗೆ ಪರದೆ ಮೇಲೆ ಬಂದಿದ್ದು, 2023ರ ಬ್ಲಾಕ್ಬಸ್ಟರ್ ಚಿತ್ರವಾಗಿ […]
‘ಪೌಡರ್’ ದೂದ್ ಪೇಡಾ ದಿಗಂತ್ ನಟನೆಯ ಚಿತ್ರಕ್ಕೆ ಕಿಚ್ಚ ಸುದೀಪ್ ಸಾಥ್
ದಿಗಂತ್ ನಟನೆಯ ‘ಪೌಡರ್’ ಸಿನಿಮಾದ ಮುಹೂರ್ತ ಸಮಾರಂಭವು ನಿನ್ನೆ ವರಮಹಾಲಕ್ಷ್ಮಿ ಹಬ್ಬದಂದು ನೆರವೇರಿತು. ಚಿತ್ರಕ್ಕೆ ‘ಪೌಡರ್’ ಎಂದು ವಿಭಿನ್ನವಾಗಿ ಟೈಟಲ್ ಇಡಲಾಗಿದೆ. ಈ ಸಿನಿಮಾದ ಮುಹೂರ್ತ ಸಮಾರಂಭವು ನಿನ್ನೆ ವರಮಹಾಲಕ್ಷ್ಮಿ ಹಬ್ಬದಂದು ನೆರವೇರಿತು.ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಕಥೆಯ ಚಿತ್ರಗಳ ಮೂಲಕ ಪ್ರೇಕ್ಷಕರ ಮನಸ್ಸು ಗೆದ್ದಿರುವ ನಟ ದೂದ್ ಪೇಡಾ ದಿಗಂತ್. ಫಿಟ್ನೆಸ್ ಹೀರೋ ಅಂತಲೇ ಕರೆಸಿಕೊಂಡಿರುವ ಈ ಹ್ಯಾಂಡ್ಸಮ್ ಹಂಕ್ ಹೊಸ ಸಿನಿಮಾದೊಂದಿಗೆ ತೆರೆ ಮೇಲೆ ಬರಲು ಸಜ್ಜಾಗಿದ್ದಾರೆ.ದೂದ್ ಪೇಡಾ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಚಿತ್ರದ […]
‘ಚಾರ್ಲಿ 777’ ಗೆ ಉತ್ತಮ ಕನ್ನಡ ಸಿನಿಮಾ : ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ನವದೆಹಲಿ: ಕನ್ನಡ ಚಿತ್ರರಂಗದ ರಕ್ಷಿತ್ ಶೆಟ್ಟಿ ಅವರ ‘ಚಾರ್ಲಿ 777’ ಸಿನಿಮಾ ಉತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. 11 ಸದಸ್ಯರಿದ್ದ ತೀರ್ಪುಗಾರರ ಮುಖ್ಯಸ್ಥ ಚಲನಚಿತ್ರ ನಿರ್ದೇಶಕ ಕೇತನ್ ಮೆಹ್ತಾ 2021ರ ರಾಷ್ಟ್ರೀಯ ಪ್ರಶಸ್ತಿಗಳನ್ನು ಘೋಷಿಸಿದರು. 69ನೇ ಪ್ರತಿಷ್ಠಿತ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಇಂದು (ಗುರುವಾರ) ಪ್ರಕಟಿಸಿದೆ. ಪ್ರತಿಷ್ಠಿತ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಇಂದು ಕೇಂದ್ರ ಸರ್ಕಾರ ಪ್ರಕಟಿಸಿದೆ. ‘ಹೋಮ್’ ಅತ್ಯುತ್ತಮ ಮಲಯಾಳಂ ಚಿತ್ರ. ‘ಸರ್ದಾರ್ ಉಧಮ್’ ಅತ್ಯುತ್ತಮ ಹಿಂದಿ ಚಿತ್ರವಾಗಿ ಆಯ್ಕೆಯಾಗಿದೆ.’ಉಪ್ಪೇನಾ’ ಸಿನಿಮಾವನ್ನು […]
ಹಸೆಮಣೆ ಏರಲು ಸಜ್ಜಾದ ವರುಣ್ ತೇಜ್ - ಲಾವಣ್ಯ ತ್ರಿಪಾಠಿ

ಜೂನ್ 9 ರಂದು ಈ ಜೋಡಿಯ ನಿಶ್ಚಿತಾರ್ಥ ನೆರವೇರಿತ್ತು. ಮೆಗಾ ಬ್ರದರ್ ನಾಗಬಾಬು ಅವರ ಮನೆಯಲ್ಲಿ ಅದ್ಧೂರಿಯಾಗಿ ಸಮಾರಂಭ ನಡೆದಿತ್ತು. ಮೆಗಾಸ್ಟಾರ್ ಚಿರಂಜೀವಿ ಮತ್ತು ಸುರೇಖಾ ದಂಪತಿಯ ಸಮ್ಮುಖದಲ್ಲಿ ಹಾರ ಬದಲಾಯಿಸಿಕೊಂಡಿದ್ದರು. ಇದೀಗ ತಾರಾ ಜೋಡಿಯ ಮದುವೆಗೆ ಮುಹೂರ್ತ ನಿಗದಿಯಾಗಿದೆ. ಮೆಗಾ ಫ್ಯಾಮಿಲಿಯಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಟಾಲಿವುಡ್ ಸೂಪರ್ಸ್ಟಾರ್ ವರುಣ್ ತೇಜ್ ಮತ್ತು ನಟಿ ಲಾವಣ್ಯ ತ್ರಿಪಾಠಿ ಶೀಘ್ರದಲ್ಲೇ ಹಸೆಮಣೆ ಏರಲು ಸಜ್ಜಾಗಿದ್ದಾರೆ.ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಮದುವೆಗೆ ಡೇಟ್ ಫಿಕ್ಸ್ ಆಗಿದೆ. ಇಟಲಿಯಲ್ಲಿ […]
ಹಸೆಮಣೆ ಏರಿದ ಸ್ಯಾಂಡಲ್ವುಡ್ ಸೆಲೆಬ್ರಿಟಿಗಳ ಸಾಲಿಗೆ ಹೊಸದಾಗಿ ಸೇರ್ಪಡೆ : ಹರ್ಷಿಕಾ ಭುವನ್

ಕೊಡಗು: ಪ್ರೀತಿಸಿ, ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ ಸ್ಯಾಂಡಲ್ವುಡ್ ಸೆಲೆಬ್ರಿಟಿಗಳ ಸಾಲಿಗೆ ಹೊಸದಾಗಿ ಹರ್ಷಿಕಾ ಭುವನ್ ಸೇರಿದ್ದಾರೆ. ಹೌದು, ಇಂದು ಕೊಡವ ಪದ್ಧತಿಯಂತೆ ಶಾಸ್ತ್ರೋಕ್ತವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು.ಕನ್ನಡ ಚಿತ್ರರಂಗದಲ್ಲಿ ನಟಿ ಹರ್ಷಿಕಾ ಪೂಣಚ್ಚ ಮತ್ತು ನಟ ಭುವನ್ ಪೊನ್ನಣ್ಣ ಮದುವೆ ಸಂಭ್ರಮ ಮನೆ ಮಾಡಿದೆ.ಗುರುಹಿರಿಯರ, ಕುಟುಂಬಸ್ಥರ, ಆಪ್ತರ ಸಮ್ಮುಖದಲ್ಲಿ ವಿವಾಹ ಶಾಸ್ತ್ರಗಳು ನೆರವೇರಿತು. ಕೊಡಗಿನ ವಿರಾಜ್ ಪೇಟೆಯಲ್ಲಿ ಅಮ್ಮತಿ ಕೊಡವ ಸಮಾಜದಲ್ಲಿ ಮದುವೆ ಜರುಗಿದೆ. ಕೊಡವ ಸಾಂಪ್ರದಾಯಿಕ ಉಡುಗೆಯಲ್ಲಿ ನಟ – ನಟಿ ಮಿಂಚಿದರು. ಕೊಡವ […]