ಕನ್ನಡಿಗರೆಲ್ಲಾ ನೋಡಲೇಬೇಕಾದ ಕಾಡೋ ಕಿರುಚಿತ್ರ “ಕನ್ನಡ ಮೀಡಿಯಂ”

ಕನ್ನಡದ ಕಾಳಜಿ, ಪ್ರೀತಿಯ ಕುರಿತು ಕನ್ನಡದಲ್ಲಿ ಕೆಲವೊಂದು ಸಿನಿಮಾಗಳು ಕಿರುಚಿತ್ರಗಳು ಬಂದಿದೆ.ಅವುಗಳಲ್ಲಿ ಕೆಲವೊಂದು ಕಿರುಚಿತ್ರಗಳು ವಿಭಿನ್ನ ನಿರೂಪಣೆ ಮತ್ತು ಹೊಸ ಪ್ರಯತ್ನಗಳಿಂದ ಕಾಡುತ್ತದೆ. ಅಂತಹ ವಿಭಿನ್ನ ಮತ್ತು ಕಾಡುವ ಕಿರುಚಿತ್ರವೊಂದು ರಿಲೀಸ್ ಆಗಿದೆ. ಸಿನಿಮಾದ ಹೆಸರು “ಕನ್ನಡ medium” ಕನ್ನಡ ಭಾಷೆಯ ರಕ್ಷಣೆ ಹಾಗೂ ಸರಕಾರಿ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಈ ಕಿರು ಚಿತ್ರವನ್ನು ಬೆಳಕು ಚೆಲ್ಲುತ್ತದೆ. ಸುಂದರವಾದ ಈ ಚಿತ್ರವನ್ನು ದಶಮಾನೋತ್ಸವ ಆಚರಿಸಿ ವಿದ್ಯಾರ್ಥಿಗಳಿಲ್ಲದೆ ಮುಚ್ಚಲ್ಪಟ್ಟ ಶಿರಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿತ್ರಿಕರಿಸಿದ್ದು, ಅಡ್ಡಹೊಳೆ ಪ್ರಾಥಮಿಕ […]
‘800’ ಚಿತ್ರದಿಂದ ದಯವಿಟ್ಟು ಹೊರಬನ್ನಿ: ನಟ ವಿಜಯ್ ಸೇತುಪತಿಗೆ ಮುರಳಿಧರನ್ ಮನವಿ

ಚೆನ್ನೈ: ಕ್ರಿಕೆಟ್ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳಿಧರನ್ ಅವರ ಜೀವನಾಧಾರಿತ 800 ಚಿತ್ರ ನಿರ್ಮಾಣ ಆಗುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಇದೀಗ ಚಿತ್ರದಲ್ಲಿ ಮುರಳಿಧರನ್ ಪಾತ್ರದಲ್ಲಿ ನಟಿಸಬೇಕಿದ್ದ ನಟ ವಿಜಯ್ ಸೇತುಪತಿ ಅವರನ್ನು ಚಿತ್ರದಿಂದ ಹೊರನಡೆಯುವಂತೆ ಮುತ್ತಯ್ಯ ಮುರಳಿಧರನ್ ಮನವಿ ಮಾಡಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಯೋಪಿಕ್ 800 ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗುತ್ತಿದ್ದಂತೆ ತಮಿಳುನಾಡಿನಲ್ಲಿ ವಿಜಯ್ ಸೇತುಪತಿ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಯಿತು. ಹೀಗಾಗಿ ಚಿತ್ರದಿಂದ ಹೊರನಡೆಯುವಂತೆ ಮುತ್ತಯ್ಯ ಮುರಳಿಧರನ್ ಅವರು ವಿಜಯ್ ಸೇತುಪತಿಗೆ […]
ಡ್ರಗ್ಸ್ ನಂಟಿನ ಆರೋಪ: ಕನ್ನಡದ ಖ್ಯಾತ ನಿರೂಪಕಿ ಕಮ್ ನಟಿಗೆ ಸಿಸಿಬಿಯಿಂದ ಸಮನ್ಸ್

ಮಂಗಳೂರು: ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿ ಖ್ಯಾತ ನಿರೂಪಕಿ, ನಟಿ ಅನುಶ್ರೀ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಕೋರಿ ಮಂಗಳೂರು ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಅನುಶ್ರೀ ಅವರಿಗೆ ಪೊಲೀಸರು ವಾಟ್ಸಾಪ್‌ನಲ್ಲಿ ನೋಟಿಸ್ ನೀಡಿದ್ದಾರೆ. ಡ್ರಗ್ಸ್ ಸೇವನೆ, ಬಳಕೆ ಆರೋಪದಡಿ ಇತ್ತೀಚೆಗೆ ಸಿಸಿಬಿ ಪೊಲೀಸರಿಂದ ಬಂಧನಕೊಳ್ಳಗಾದ ಡ್ಯಾನ್ಸರ್ ಕಿಶೋರ್ ಶೆಟ್ಟಿ ಜತೆ ಸಂಪರ್ಕ ಇರುವ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ. ಅಲ್ಲದೆ, ಕಿಶೋರ್ ಶೆಟ್ಟಿ ತನಗೆ ಅನುಶ್ರಿ ಪರಿಚಯ ಇರುವ ಬಗ್ಗೆ ಹಾಗೂ ಆಕೆ ಮಂಗಳೂರಿನಲ್ಲಿ […]
ಹಿರಿಯ ನಟ ರಾಕ್ ಲೈನ್ ಸುಧಾಕರ್ ಇನ್ನಿಲ್ಲ

ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಟ ರಾಕ್ ಲೈನ್ ಸುಧಾಕರ್ ಅವರು ಇಂದು ಬೆಳಿಗ್ಗೆ ನಿಧನ ಹೊಂದಿದರು. ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಸಿನಿಮಾ ಒಂದರ ಚಿತ್ರೀಕರಣ ಮಾಡುತ್ತಿದ್ದ ವೇಳೆ ಸೆಟ್‌ನಲ್ಲಿಯೇ ಅವರು ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಇತ್ತೀಚೆಗಷ್ಟೆ ನಟ ರಾಕ್‍ಲೈನ್ ಸುಧಾಕರ್ ಕೊರೊನಾ ಟೆಸ್ಟ್ ಮಾಡಿಸಿದ್ದು, ಪಾಸಿಟಿವ್ ಬಂದಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ನಂತರ ಸಿನಿಮಾ ಕೆಲಸಗಳಲ್ಲಿ ಸುಧಾಕರ್ ಸಕ್ರಿಯರಾಗಿದ್ದರು. ಇಂದು ಸಹ ಸುಧಾಕರ್ ಚಿತ್ರೀಕರಣಕ್ಕೆ ಹಾಜರಾಗಿದ್ದರು. ಆದರೆ ಸುಧಾಕರ್ […]
ಡ್ರಗ್ಸ್ ದಂಧೆ: ದೀಪಿಕಾ ಪಡುಕೋಣೆ ಸಹಿತ ಬಾಲಿವುಡ್ ನ ನಾಲ್ವರು ನಟಿಯರಿಗೆ ಎನ್ ಸಿಬಿಯಿಂದ ಸಮನ್ಸ್

ಮುಂಬೈ: ಡ್ರಗ್ಸ್ ದಂಧೆಯ ಆರೋಪದಡಿ ಬಾಲಿವುಡ್ ನಟಿಯರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್, ಸಾರಾ ಅಲಿಖಾನ್ ಹಾಗೂ ರಕುಲ್ ಪ್ರೀತ್ ಸಿಂಗ್ ಅವರಿಗೆ ಮಾದಕ ವಸ್ತುಗಳ ನಿಯಂತ್ರಣ ಸಂಸ್ಥೆ (ಎನ್‌ಸಿಬಿ) ಬುಧವಾರ ಸಮನ್ಸ್ ಜಾರಿ ಮಾಡಿದೆ. ಯಾವ ದಿನ ಇವರು ಎನ್‌ಸಿಬಿಯ ವಿಶೇಷ ತನಿಖಾ ತಂಡದ ಎದುರು ವಿಚಾರಣೆಗಾಗಿ ಹಾಜರಾಗಬೇಕೆಂದು ಇನ್ನೂ ನಿಖರವಾಗಿ ತಿಳಿಸಿಲ್ಲ ಎನ್ನಲಾಗಿದೆ. ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ, ಆಕೆಯ ಸಹೋದರ ಶೋವಿಕ್ ಚಕ್ರವರ್ತಿ, ಜಯಾ ಸಹಾ ಹಾಗೂ ಕೆಲವು ಡ್ರಗ್ಸ್ ಪೆಡ್ಲರ್‌ಗಳು […]