ಹೊಸ ಏರ್‌ಪೋರ್ಟ್‌ಗೆ 2 ಸ್ಥಳ ಶಾರ್ಟ್‌ಲಿಸ್ಟ್ ಮಾಡಿದ ವಿಜಯ್ ಸರ್ಕಾರ

ಚೆನ್ನೈ: ಟಿವಿಕೆ ನೇತೃತ್ವದ ತಮಿಳುನಾಡು ಸರ್ಕಾರ (Tamil Nadu Govt) ರಾಜ್ಯದಲ್ಲಿ ಮತ್ತೊಂದು ಹೊಸ ವಿಮಾನ ನಿಲ್ದಾಣ ಸ್ಥಾಪಿಸಲು 2 ಸ್ಥಳಗಳನ್ನ ಶಾರ್ಟ್‌ಲಿಸ್ಟ್ ಮಾಡಿದೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ (C Joseph Vijay) ಅವರು ಪರಂದೂರು ಏರ್‌ಪೋರ್ಟ್ ಯೋಜನೆ ಅಧಿಕೃತವಾಗಿ ಕೈಬಿಟ್ಟ ನಂತರ ಈ ಬೆಳವಣಿಗೆ ನಡೆದಿದೆ. ಈ ಬಗ್ಗೆ ಉನ್ನತ ಮೂಲಗಳನ್ನು ಆಧರಿಸಿ ಮಾಧ್ಯಮಗಳು ವರದಿ ಮಾಡಿವೆ. ಹೊಸ ವಿಮಾನ ನಿಲ್ದಾಣಕ್ಕಾಗಿ ಸಿಎಂ ವಿಜಯ್ ನೇತೃತ್ವದ ಸರ್ಕಾರ ಮಣೆಲ್ಲೂರು ಹಾಗೂ ಚೆಯ್ಯೂರು ಸ್ಥಳಗಳನ್ನ […]
ನಾಳೆಯಿಂದ ದಸರಾ ಆನೆಗಳ ತಾಲೀಮು ಆರಂಭ

ಮೈಸೂರು: ಅರಮನೆಯ ಆವರಣದಲ್ಲಿರುವ ದಸರಾ ಗಜಪಡೆಗೆ ನಾಳೆಯಿಂದ (ಸೆ.6) ತಾಲೀಮು ಆರಂಭವಾಗಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೂ ಈ ತಾಲೀಮು ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ನಡೆಯಲಿದೆ. ನಾಳೆಯಿಂದಲೇ ಆನೆಗಳಿಗೆ ಭಾರ ಹೊರಿಸುವ ತಾಲೀಮು ನಡೆಸಲಾಗುತ್ತದೆ. ಮೂರರಿಂದ ನಾಲ್ಕು ಆನೆಗಳಿಗೆ ಹಂತ ಹಂತವಾಗಿ ಭಾರ ಹೊರಿಸುವ ತಾಲೀಮು ನಡೆಸುತ್ತೇವೆ. ತಾಲೀಮು ನಡೆಯುವ ವೇಳೆ ಆನೆಗಳನ್ನು ನೋಡಲು ಹೆಚ್ಚು ಜನರು ಸೇರುತ್ತಾರೆ. ಹೀಗಾಗಿ ಜನರು ಆನೆಗಳಿಂದ ಅಂತರ ಕಾಯ್ದುಕೊಳ್ಳಬೇಕು. ದೂರದಿಂದಲೇ ಆನೆಗಳನ್ನು ನೋಡಿ ಆನಂದಿಸಬೇಕು ಎಂದು ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ತಿಳಿಸಿದ್ದಾರೆ. […]
ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ KSRTC ಬಸ್‌ಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ 37 ಪ್ರಯಾಣಿಕರು ಪಾರು!

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ವೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಶನಿವಾರ ರಾತ್ರಿ ಸುಬ್ರಹ್ಮಣ್ಯ–ಗುಂಡ್ಯ ರಾಜ್ಯ ಹೆದ್ದಾರಿಯ ಎರ್ಮಾಯಿಲ್ ಎಂಬಲ್ಲಿ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದ ಬಸ್‌ನಲ್ಲಿದ್ದ 37 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಿಂದ ಹಾಸನ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಬಿ.ಸಿ.ರೋಡ್ ಡಿಪೋಗೆ ಸೇರಿದ ಕೆಎಸ್ಸಾರ್ಟಿಸಿ ಬಸ್ ಎರ್ಮಾಯಿಲ್ ಸಮೀಪ ತಲುಪಿದಾಗ ಬಸ್‌ನಿಂದ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ತಕ್ಷಣವೇ ಬಸ್‌ನ್ನು ನಿಲ್ಲಿಸಿ ಪ್ರಯಾಣಿಕರಿಗೆ ವಿಷಯ ತಿಳಿಸಿದ್ದಾನೆ. ಬಳಿಕ ಯಾವುದೇ […]
ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7 ಮೀಸಲಾತಿ ಶೀಘ್ರ ಜಾರಿ; ಸರ್ಕಾರವೇ ಜನರ ಮನೆ ಬಾಗಿಲಿಗೆ: ಡಿಕೆಶಿ

ಬಳ್ಳಾರಿ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಆಂತರಿಕವಾಗಿ ಶೇ.7ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಶೀಘ್ರದಲ್ಲೇ ಮೀಸಲಾತಿ ಜಾರಿಯ ರೂಪುರೇಷೆ ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ. ವಿಜಯನಗರ ಜಿಲ್ಲೆಯಲ್ಲಿ ಆಯೋಜಿಸಿದ್ದ ನೂತನ ‘ಪ್ರಜಾಸೇವಾ ಇಲಾಖೆ ಹಾಗೂ ಆಡಳಿತ ವಿಕೇಂದ್ರೀಕರಣ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜನರ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳು ಕಚೇರಿಗಳಲ್ಲೇ ಕುಳಿತು ಆಡಳಿತ ನಡೆಸುವ ಬದಲು ಜನರ ಮನೆ ಬಾಗಿಲಿಗೆ ತೆರಳಬೇಕು ಎಂದು ಸೂಚಿಸಿದರು. […]
ಬಸ್ ಪ್ರಯಾಣಿಕರಿಗೆ ದರ ಏರಿಕೆ ಶಾಕ್: ಶೀಘ್ರದಲ್ಲೇ ಟಿಕೆಟ್ ದರ ಪರಿಷ್ಕರಣೆ

ಬೆಂಗಳೂರು: ಬೆಲೆ ಏರಿಕೆಯ ಬಿಸಿಯಿಂದ ಕಂಗೆಟ್ಟಿರುವ ಜನಸಾಮಾನ್ಯರಿಗೆ ಇದೀಗ ಬಸ್ ಪ್ರಯಾಣವೂ ದುಬಾರಿಯಾಗುವ ಸಾಧ್ಯತೆ ಎದುರಾಗಿದೆ. ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಟಿಕೆಟ್ ದರವನ್ನು ಶೀಘ್ರದಲ್ಲೇ ಪರಿಷ್ಕರಿಸಲು ಸರ್ಕಾರ ಮುಂದಾಗಿದೆ. ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಈ ಕುರಿತು ಸುಳಿವು ನೀಡಿದ್ದು, ಜನಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗದ ರೀತಿಯಲ್ಲಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ. ಕಳೆದ ಎಂಟು ತಿಂಗಳಲ್ಲಿ ಕೇಂದ್ರ ಸರ್ಕಾರ ತೈಲೋತ್ಪನ್ನಗಳ ಬೆಲೆಯನ್ನು ಹೆಚ್ಚಿಸಿದ್ದರೂ ರಾಜ್ಯದಲ್ಲಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಿಲ್ಲ. […]