ರೇಣುಕಾ ಸ್ವಾಮಿ ಕೊಲೆ ಪ್ರಕರಣ: ‘ಮರ್ಡರ್ ಆಫ್ ರೇಣುಕಾಸ್ವಾಮಿ’ ವಿಕಿಪೀಡಿಯಾದಲ್ಲಿ ಪೇಜ್ ಓಪನ್..

ಬೆಂಗಳೂರು: ದೇಶಾದ್ಯಂತ ತೀವ್ರ ಚರ್ಚೆಯಾಗಿರುವ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಕುರಿತಂತೆ ‘ಮರ್ಡರ್ ಆಫ್ ರೇಣುಕಾಸ್ವಾಮಿ’ ಎಂಬ ಹೆಸರಿನಲ್ಲಿ ವಿಕಿಪೀಡಿಯಾದಲ್ಲಿ ಪೇಜ್ ಸೃಷ್ಟಿಸಲಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅದರಲ್ಲಿ ಹತ್ಯೆ ನಡೆದ ದಿನಾಂಕ, ಮೃತದೇಹ ಪತ್ತೆಯಾಗಿರುವ ಸ್ಥಳ, ಪತ್ನಿಯ ಹೆಸರು, ತಂದೆ-ತಾಯಿ ಹೆಸರು, ಕೊಲೆಗೆ ಕಾರಣರಾದ ಆರೋಪಿಗಳ ಹೆಸರು ಸೇರಿದಂತೆ ಹಲವು ವಿವರಗಳ ಬಗ್ಗೆ ಮಾಹಿತಿ ಲಭ್ಯವಿದೆ. ವಿಕಿಪೀಡಿಯಾದಲ್ಲಿ ಗಣ್ಯರು, ಜನಪ್ರಿಯ ವ್ಯಕ್ತಿಗಳ ಹೆಸರು ಹಾಗೂ ಅವರ ಬಯಾಗ್ರಫಿಗಳು ಸೇರಿದಂತರೆ ಇತರೆ ಹಲವು ಮಾಹಿತಿಗಳ ವಿವರಗಳನ್ನು […]
ದರ್ಶನ ಅವರಿಗೆ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ಇದೊಂದು ಪರೀಕ್ಷೆಯ ಸಮಯ. ನಾವು ತಾಳ್ಮೆ, ಶಾಂತಿಯಿಂದ ಇರೋಣ: ಫ್ಯಾನ್ಸ್‌ಗೆ ವಿಜಯಲಕ್ಷ್ಮಿ ಮನವಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಅರೆಸ್ಟ್ ಆಗಿದ್ದು, ಇದೀಗ ಬೇಸರದಲ್ಲಿರುವ ಅಭಿಮಾನಿಗಳಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಧೈರ್ಯ ತುಂಬಿದ್ದಾರೆ. ತಾಳ್ಮೆಯಿಂದ ಇರಿ, ನ್ಯಾಯಾಲಯದ ಮೇಲೆ ನಂಬಿಕೆ ಇಡಿ ಎಂದು ವಿಜಯಲಕ್ಷ್ಮಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ. ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. […]
ರಾಜ್ಯದಲ್ಲಿ ನಂದಿನಿ ಹಾಲಿನ ದರ ಲೀಟರ್‌ಗೆ 2 ರೂ. ಹೆಚ್ಚಳ: ನಾಳೆಯಿಂದಲೇ ಪರಿಷ್ಕೃತ ದರ ಜಾರಿ.

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆಯಾಗಿದ್ದು, ಪ್ರತಿ ಲೀಟರ್‌ಗೆ 2 ರುಪಾಯಿ ಏರಿಕೆ ಮಾಡಲಾಗಿದ್ದು, ನಾಳೆಯಿಂದ ಒಂದು ಲೀಟರ್ ಹಾಲಿನ ದರ 44 ರೂ. ಆಗುತ್ತಿದೆ. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ನಂದಿನಿ ಹಾಲಿನ ದರ ಹೆಚ್ಚಿಸಿದೆ ಎಂದು ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ಲೀಟರ್ ಹಾಲಿಗೆ 2 ರೂ.ಏರಿಕೆ ಮಾಡಲಾಗಿದೆ. ಹಾಗೂ ಅರ್ಧ ಲೀಟರ್ ಹಾಲಿನ ದರ 22 ರೂ. ನಿಂದ 24 ರೂ.ಗೆ ಹೆಚ್ಚಿಸಲಾಗಿದೆ. […]
Modi 3.0: ಕೇಂದ್ರ ಸಚಿವರಾಗಿ ಕರ್ನಾಟಕದ ನಾಲ್ವರು ಸದಸ್ಯರು ಪ್ರಮಾಣವಚನ ಸ್ವೀಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಂಪುಟದ ಸಚಿವರಾಗಿ ಕರ್ನಾಟಕದ ನಾಲ್ವರು ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು. ಕೇಂದ್ರ ಸಚಿವರಾಗಿ ಹೆಚ್‌ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೊದಲಿಗೆ ದೇವರ ಹೆಸರಲ್ಲಿ ಹೆಚ್‌ಡಿಕೆ ಕೇಂದ್ರ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಪ್ರಹ್ಲಾದ್ ಜೋಶಿ ಹಾಗೂ ಶೋಭಾ ಕರಂದ್ಲಾಜೆ ಅವರು ಎರಡನೇ ಬಾರಿಗೆ ಮೋದಿ ಸಂಪುಟ ಸಚಿವರಾಗಿದ್ದಾರೆ. ಜೊತೆಗೆ ವಿ ಸೋಮಣ್ಣ ಅವರು ಕೂಡ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು.
ಗುಜರಾತ್: ರಾಜ್‌ಕೋಟ್’ನ ಗೇಮಿಂಗ್ ಝೋನ್‌ನಲ್ಲಿ ಅಗ್ನಿ ಅವಘಡ, 24 ಮಂದಿ ಸಾವು.

ಗುಜರಾತ್: ಗುಜರಾತ್‌ನ ರಾಜ್‌ಕೋಟ್‌ನಲ್ಲಿರುವ ಗೇಮಿಂಗ್ ಝೋನ್‌ನಲ್ಲಿ ಶನಿವಾರ ಸಂಜೆ ಭಾರಿ ಬೆಂಕಿ ಕಾಣಿಸಿಕೊಂಡು ಕನಿಷ್ಠ ಇಪ್ಪತ್ತನಾಲ್ಕು ಜನರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದವರನ್ನು ರವಾನಿಸಲಾಗಿದೆ. ಯುವರಾಜ್ ಸಿಂಗ್ ಸೋಲಂಕಿ ಒಡೆತನದ ಟಿಆರ್‌ಪಿ ಗೇಮಿಂಗ್ ಝೋನ್‌ಗೆ ಅಧಿಕಾರಿಗಳಿಂದ ಅಗತ್ಯ ಅಗ್ನಿ ಸುರಕ್ಷತಾ ಕ್ಲಿಯರೆನ್ಸ್ ಇಲ್ಲದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆಯ ನಂತರ ಟಿಆರ್‌ಪಿ ಆಟದ ವಲಯದ ಮಾಲೀಕರು ಮತ್ತು ವ್ಯವಸ್ಥಾಪಕರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ರಾಜ್‌ಕೋಟ್ ನಗರ ಪೊಲೀಸ್ ಕಮಿಷನರ್ ಭಾರ್ಗವ ತಿಳಿಸಿದ್ದಾರೆ.