ಪರಪ್ಪನ ಅಗ್ರಹಾರ ಜೈಲಿನಲ್ಲಿ 45 ಸಾವಿರಕ್ಕೆ ಮೊಬೈಲ್‌ ಮಾರಾಟ ದಂಧೆ: ವಿಚಾರಣಾಧೀನ ಕೈದಿ ಅಲ್ಫೋನ್ಸಾ ರಾಜ ಬಂಧಿಸಿದ CCB

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಎಗ್ಗಿಲ್ಲದೆ ಮೊಬೈಲ್ ಬಳಸುತ್ತಿರುವ ಘಟನೆಯನ್ನು ಸಿಸಿಬಿ ಪೊಲೀಸರು ಭೇದಿಸಿದ್ದು, ರೌಡಿ ಮಿಲ್ಟ್ರಿ ಸತೀಶ್ ಕೊಲೆ ಪ್ರಕರಣದ ವಿಚಾರಣಾಧೀನ ಕೈದಿ ಅಲ್ಫೋನ್ಸಾ ಅಲಿಯಾಸ್ ಮಚ್ಚಾ ಎಂಬ ಕೈದಿ ಜೈಲಿನಲ್ಲಿದ್ದುಕೊಂಡೇ ಸಹಕೈದಿಗಳಿಗೆ 45,000 ರೂ. ಸ್ಮಾರ್ಟ್‌ಫೋನ್ ಮಾರಾಟ ಮಾಡ್ತಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಜೈಲಿನ ಶೌಚಾಲಯದಲ್ಲಿ ಪತ್ತೆಯಾಗಿದ್ದ ಫೋನ್‌ಗಳ ಸುಳಿವು ಬೆನ್ನತ್ತಿದ ಸಿಸಿಬಿ, ಆರೋಪಿಯನ್ನು ಬಾಡಿ ವಾರಂಟ್ ಮೇಲೆ ವಶಕ್ಕೆ ಪಡೆದು ತನಿಖೆ ನಡೆಸಿದ್ದು, ಈ ವೇಳೆ ಸತ್ಯ ಹೊರಬಂದಿದೆ. ಆದರೆ, […]

ಒಕ್ಕೂಟ ವ್ಯವಸ್ಥೆಯನ್ನು ತಮಿಳುನಾಡು ರಾಜಕೀಯ ನಾಯಕರು ಗೌರವಿಸಬೇಕು: CM ಶಿವಕುಮಾರ್

ತಮಿಳುನಾಡಿನ ರಾಜಕೀಯ ನಾಯಕರು ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಬೇಕು ಹಾಗೂ ಇತರ ರಾಜ್ಯಗಳ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಒತ್ತಾಯಿಸಿದರು. ಬೆಂಗಳೂರು: ಚಾಮರಾಜನಗರ ಜಿಲ್ಲೆಯಲ್ಲಿ ಕೆಲವು ದಿನಗಳ ಹಿಂದೆ ಅರಣ್ಯ ಸಿಬ್ಬಂದಿಯೊಂದಿಗೆ ನಡೆದಿತ್ತು ಎನ್ನಲಾದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಹನೂರು ಎನ್‌ಕೌಂಟರ್ ಪ್ರಕರಣದ ಕುರಿತು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಒ. ಪನ್ನೀರಸೆಲ್ವಂ ನೀಡಿರುವ ಹೇಳಿಕೆ ಬಗ್ಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮಿಳುನಾಡಿನ ರಾಜಕೀಯ ನಾಯಕರು ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಬೇಕು ಹಾಗೂ ಇತರ ರಾಜ್ಯಗಳ ವ್ಯವಹಾರಗಳಲ್ಲಿ […]

ಎಚ್ಚರ, ಫುಟ್‌ಪಾತ್ ಮೇಲೆ ವಾಹನ ಚಲಾಯಿಸಿದ್ರೆ ಬೀಳುತ್ತೆ ₹5,000 ದಂಡ!

ಬೆಂಗಳೂರು: ಫುಟ್‌ಪಾತ್ ಮೇಲೆ ವಾಹನ ಚಲಾಯಿಸುವ ಸವಾರರಿಗೆ ಇನ್ಮುಂದೆ ಭಾರಿ ದಂಡ ವಿಧಿಸುವ ಸಾಧ್ಯತೆ ಇದೆ. ಸಂಚಾರ ನಿಯಮ ಉಲ್ಲಂಘಿಸುವವರಿಗೆ ಪ್ರಸ್ತುತ ಇರುವ ದಂಡಕ್ಕಿಂತ ಹಲವು ಪಟ್ಟು ಹೆಚ್ಚಿಸುವಂತೆ ಸಾರಿಗೆ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಸದ್ಯ ಫುಟ್‌ಪಾತ್ ಮೇಲೆ ವಾಹನ ಚಲಾಯಿಸಿದರೆ ₹500 ದಂಡ ವಿಧಿಸಲಾಗುತ್ತಿದೆ. ಇದೀಗ ಮೊದಲ ಬಾರಿಗೆ ನಿಯಮ ಉಲ್ಲಂಘಿಸುವವರಿಗೆ ₹5,000 ದಂಡ ವಿಧಿಸುವಂತೆ ಸಾರಿಗೆ ಇಲಾಖೆ ಪ್ರಸ್ತಾವನೆ ಮಾಡಿದೆ. ಅದೇ ರೀತಿ, ಎರಡನೇ ಬಾರಿಗೆ ನಿಯಮ ಉಲ್ಲಂಘಿಸಿದರೆ ₹10,000 ದಂಡ ವಿಧಿಸುವಂತೆ […]

ಮಾಜಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನಿಧನ

ಬೆಂಗಳೂರು: ತೀವ್ರ ಅನಾರೋಗ್ಯ ಬಳಲುತ್ತಿದ್ದ ಮಾಜಿ ಶಿಕ್ಷಣ ಸಚಿವ, ತಿಪಟೂರು ಮಾಜಿ ಶಾಸಕ ಬಿ.ಸಿ ನಾಗೇಶ್ ಅವರು ಇಂದು ನಿಧನರಾಗಿದ್ದಾರೆ. 67 ವರ್ಷದ ಬಿ.ಸಿ ನಾಗೇಶ್‌ ಅವರು ಕಳೆದ ಒಂದು ವರ್ಷದಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದರು. ಎರಡು ಸಲ ಆಪರೇಷನ್‌ ಕೂಡ ಆಗಿತ್ತು. ಬೆಂಗಳೂರಿನಲ್ಲೇ ಮಗಳ ಮನೆಯಲ್ಲಿದ್ದ ಅವರು ಮಂಗಳವಾರ (ಆ.18) ಕೊನೆಯುಸಿರೆಳೆದಿದ್ದಾರೆ. ಓರ್ವ ಮಗ ಹಾಗೂ ಮಗಳನ್ನು ಅಗಲಿದ್ದು, ನಾಳೆ (ಆ.19) ಹುಟ್ಟೂರು ತಿಪಟೂರಿನಲ್ಲಿ ಅಂತಿಮ‌ ಸಂಸ್ಕಾರ ನಡೆಯಲಿದೆ. 1959ರ ಜುಲೈ 1ರಂದು ಜನಿಸಿದ್ದ ಬಿ.ಸಿ. ನಾಗೇಶ್ […]

25 ಖೈದಿಗಳಿರೋ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್,”ನಂಗೆ ಈ ಜಾಗ ಬೇಡ, ಇಲ್ಲಿ ನಂಗೆ ಸೋಂಕು ಹರಡುತ್ತೆ”ಎಂದು ರಗಳೆ ಮಾಡಿದ ಪ್ರಜ್ವಲ್!

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಪತ್ತೆಯಾದ ಬಳಿಕ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೇರೆ ಬ್ಯಾರಕ್‌ಗೆ ಸ್ಥಳಾಂತರಿಸಲಾಗಿದ್ದು, ಇದೀಗ ಹೊಸ ಬ್ಯಾರಕ್‌ನಲ್ಲಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಡಿಜಿಪಿ ಸೂಚನೆ ಮೇರೆಗೆ ಪ್ರಜ್ವಲ್ ರೇವಣ್ಣ ಅವರನ್ನು ವಿಶೇಷ ಭದ್ರತಾ ವಿಭಾಗದ ಬ್ಯಾರಕ್‌ನಿಂದ ಸಾಮಾನ್ಯ ಕೈದಿಗಳಿರುವ ಬ್ಯಾರಕ್‌ಗೆ ಸ್ಥಳಾಂತರಿಸಲಾಗಿದೆ. ಸುಮಾರು 25 ಮಂದಿ ಕೈದಿಗಳಿರುವ ಈ ಬ್ಯಾರಕ್‌ನಲ್ಲಿ ಕೆಮ್ಮು, ಕಜ್ಜಿ ಸೇರಿದಂತೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ […]