ಮುಂದಿನ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು : ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಸಭಾಂಗಣದ ಬಳಿ ಇಂದು ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಸಂಪೂರ್ಣ ರದ್ದುಗೊಳಿಸಲಾಗುವುದು ಎಂದರುಮುಂದಿನ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮುಂದಿನ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ರದ್ದುಗೊಳಿಸಿ ಸಂವಿಧಾನ ರೀತಿಯಲ್ಲಿ ಶಿಕ್ಷಣ ಕೊಡಲು ಪ್ರಯತ್ನ […]
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 503 ಸಿಬ್ಬಂದಿಗಳು ಶ್ಲಾಘನೀಯ ಸೇವಾ ಪ್ರಶಸ್ತಿಗೆ ಆಯ್ಕೆ

ಹುಬ್ಬಳ್ಳಿ : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ (ಎನ್‌ಡಬ್ಲ್ಯೂಕೆಆರ್‌ಟಿಸಿ) ಪ್ರಸ್ತುತ ವರ್ಷ 503 ಸಿಬ್ಬಂದಿಗಳು ಶ್ಲಾಘನೀಯ ಸೇವಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ನಗದು ಬಹುಮಾನದ ಮೊತ್ತವನ್ನು ರೂ.500 ರಿಂದ ರೂ.2,000 ಕ್ಕೆ ಹೆಚ್ಚಿಸಿ ವ್ಯವಸ್ಥಾಪಕ ನಿರ್ದೇಶಕರ ಭರತ್ ಎಸ್. ಆದೇಶ ಹೊರಡಿಸಿದ್ದಾರೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಶ್ಲಾಘನೀಯ ಸೇವಾ ಪ್ರಶಸ್ತಿಗೆ 503 ಸಿಬ್ಬಂದಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕರ ಭರತ್ ಎಸ್. ಮಾಹಿತಿ ನೀಡಿದ್ದಾರೆ ಪ್ರತಿ ಪ್ರಕರಣಕ್ಕೆ ತಕ್ಕಂತೆ ಇದುವರೆಗೂ ರೂ.500ರ ವರೆಗೆ ನಗದು […]
ಎಗ್ಮೋರ್ ನ್ಯಾಯಾಲಯದಿಂದ ಖ್ಯಾತ ನಟಿ ಜಯಪ್ರದಾಗೆ 6 ತಿಂಗಳ ಶಿಕ್ಷೆ

ಚೆನ್ನೈ, ತಮಿಳುನಾಡು: ಕಾರ್ಮಿಕ ಸರ್ಕಾರಿ ವಿಮಾ ನಿಗಮವು ಚೆನ್ನೈನ ಎಗ್ಮೋರ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿತ್ತು. ಪ್ರಕರಣವನ್ನು ವಜಾಗೊಳಿಸುವಂತೆ ಕೋರಿ ಜಯಪ್ರದಾ ಸೇರಿದಂತೆ ಮೂವರು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅದಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಪರಿಶೀಲಿಸಿದ ಚೆನ್ನೈ ಎಗ್ಮೋರ್ ಕೋರ್ಟ್ ಜಯಪ್ರದಾ ಮತ್ತು ಇತರ ಮೂವರಿಗೆ ಆರು ತಿಂಗಳ ಶಿಕ್ಷೆ ವಿಧಿಸಿದೆ. ಚೆನ್ನೈ ಎಗ್ಮೋರ್ ನ್ಯಾಯಾಲಯ ಖ್ಯಾತ ನಟಿ ಹಾಗೂ ಮಾಜಿ ಸಂಸದೆ ಜಯಪ್ರದಾ ಅವರಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. […]
ಚಿಟ್ ರಿಜಿಸ್ಟ್ರಾರ್ ನೀಡಿದ ಬಹಿರಂಗ ನೊಟೀಸ್‌ಗೆ ಹೈಕೋರ್ಟ್ ತಡೆ

ಅಮರಾವತಿ (ಆಂಧ್ರ ಪ್ರದೇಶ): ಮಾರ್ಗದರ್ಶಿ ಚಿಟ್ ಗ್ರೂಪ್ಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವ ಕುರಿತು ಚಿಟ್ ರಿಜಿಸ್ಟ್ರಾರ್ ಹೊರಡಿಸಿದ್ದ ಸಾರ್ವಜನಿಕ ನೊಟೀಸ್‌ಗೆ ಆಂಧ್ರ ಪ್ರದೇಶ ಹೈಕೋರ್ಟ್ ತಡೆಯಾಜ್ಞೆ ಕೊಟ್ಟಿದೆ.ಮಾರ್ಗದರ್ಶಿ ಚಿಟ್ ಗ್ರೂಪ್ಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವ ಕುರಿತು ಚಿಟ್ ರಿಜಿಸ್ಟ್ರಾರ್ ಹೊರಡಿಸಿದ್ದ ಸಾರ್ವಜನಿಕ ನೊಟೀಸ್‌ಗೆ ಆಂಧ್ರ ಪ್ರದೇಶ ಹೈಕೋರ್ಟ್ ಇಂದು ತಡೆ ನೀಡಿತು. ಸಾರ್ವಜನಿಕ ನೊಟೀಸ್ ಆಧಾರದ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳುವುದಕ್ಕೆ ಹೈಕೋರ್ಟ್ ತಡೆ ಕೊಟ್ಟಿದೆ. ಚಂದಾದಾರರು ಈಗಾಗಲೇ ಸಲ್ಲಿಸಿರುವ ಅರ್ಜಿಗಳ ಕುರಿತಂತೆ ಮಧ್ಯಂತರ ಆದೇಶ ಹೊರಡಿಸಲಾಗಿದೆ. […]
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಅಜಯ್ ಸಿಂಗ್ ನೇಮಕ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಅಧ್ಯಕ್ಷರನ್ನಾಗಿ ಅಜಯ್ ಸಿಂಗ್ ಅವರನ್ನು ನೇಮಿಸಿ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.ಅಜಯ್ ಸಿಂಗ್ ಅವರನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಜೇವರ್ಗಿ ಶಾಸಕರ ಅಸಮಾಧಾನ ತಗ್ಗಿಸುವ ಕಸರತ್ತು ನಡೆಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧಿನಿಯಮ 2013ರ ನಿಯಮಿತ ಅನ್ವಯ ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ 11 ಸದಸ್ಯರನ್ನೊಳಗೊಂಡಂತೆ ಮಂಡಳಿ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ. ಸಚಿವ ಸ್ಥಾನ ಸಿಗದಿದ್ದಕ್ಕೆ ಜೇವರ್ಗಿ ಕ್ಷೇತ್ರದ […]