ಜನಸ್ನೇಹಿ ಪೊಲೀಸ್ ಕ್ಯೂಆರ್ ಕೋಡ್ ಬಿಡುಗಡೆ : ಪೊಲೀಸ್ ಫೀಡ್ ಬ್ಯಾಕ್ ಆಯಪ್

ಕಲಬುರಗಿ: ”ಪೊಲೀಸ್ ಠಾಣೆಯಲ್ಲಿ ನೊಂದವರಿಗೆ ಸರಿಯಾಗಿ‌ ಸ್ಪಂದನೆ‌ ಸಿಗೋದಿಲ್ಲ. ಪೊಲೀಸರು ಸರಿಯಾದ ರೀತಿ ಸ್ಪಂದಿಸುತ್ತಿಲ್ಲ, ದೂರು ಸ್ವೀಕರಿಸುತ್ತಿಲ್ಲ, ದೂರು ಸ್ವೀಕರಿಸಲು ವಿಳಂಬ ಮಾಡ್ತಾರೆ ಅಥವಾ ದೂರು ನೀಡಲು ಹೋದಾಗ ರಾಜಿ ಮಾಡಿಕೊಳ್ಳುವಂತೆ ಒತ್ತಡ ಹಾಕ್ತಾರೆ. ಇಂತಹ ಆರೋಪಗಳು ಆಗಾಗ ಕೇಳಿ ಬರುತ್ತವೆ. ಪೊಲೀಸ್ ಠಾಣೆಗೆ ಹೋಗಲು‌ ಇಂದಿಗೂ‌ ಅನೇಕ ಮಂದಿ ಹಿಂಜರಿಯುತ್ತಾರೆ. ಇಂತಹ ಹಲವು ಸಮಸ್ಯೆಗಳಿಗೆ ಆಸ್ಪದ ನೀಡದಂತೆ ಪೊಲೀಸ್‌ ವ್ಯವಸ್ಥೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸಲು ಸರ್ಕಾರ ಮತ್ತೊಂದು ಹೆಜ್ಜೆ ಇಟ್ಟಿದೆ. ಪೊಲೀಸ್ ಫೀಡ್ ಬ್ಯಾಕ್ ಆಯಪ್ ಕ್ಯೂಆರ್ […]

₹60 ಲಕ್ಷ ಮೌಲ್ಯದ ವಜ್ರ ಪತ್ತೆ; ಆಂಧ್ರಪ್ರದೇಶದ ಎನ್​ಟಿಆರ್​ ಜಿಲ್ಲೆಯ ಗುಂಟೂರಿನ ಕುಟುಂಬಕ್ಕೆ ಜಾಕ್​ಪಾಟ್​!

ವಿಜಯವಾಡ (ಆಂಧ್ರಪ್ರದೇಶ) : ಆಂಧ್ರಪ್ರದೇಶದ ಅನಂತಪುರ, ಎನ್‌ಟಿಆರ್ ಜಿಲ್ಲೆಗಳ ಕೆಲವು ಗ್ರಾಮಗಳಲ್ಲಿ ಜನರು ವಜ್ರದ ಹುಡುಕಾಟ ನಡೆಸಿದ್ದು ದೊಡ್ಡ ಸುದ್ದಿಯಾಗಿತ್ತು.ಇದೀಗ ಎನ್​ಟಿಆರ್​ ಜಿಲ್ಲೆಯ ಗುಡಿಮೆಟ್ಲಾ ಗ್ರಾಮದಲ್ಲೂ ವಜ್ರ ಶೋಧ ಶುರುವಾಗಿದ್ದು, ಕುಟುಂಬವೊಂದಕ್ಕೆ 60 ಲಕ್ಷ ರೂಪಾಯಿ ಮೌಲ್ಯದ ದೊಡ್ಡ ವಜ್ರದ ಹರಳು ಸಿಕ್ಕಿದೆ ಎಂದು ವರದಿಯಾಗಿದೆ. ಆಂಧ್ರಪ್ರದೇಶದ ಎನ್​ಟಿಆರ್​ ಜಿಲ್ಲೆಯಲ್ಲಿ ಕುಟುಂಬವೊಂದಕ್ಕೆ 60 ಲಕ್ಷ ರೂಪಾಯಿ ಮೌಲ್ಯದ ವಜ್ರ ಸಿಕ್ಕಿದೆ. (ಡೈಮಂಡ್‌ ಚಿತ್ರವನ್ನು ಸಾಂದರ್ಭಿಕವಾಗಿ ಬಳಸಲಾಗಿದೆ) ಇದಕ್ಕೂ ಮೊದಲು, ಚಂದರ್ಲಾಪ್ಡು ಮಂಡಲದ ವ್ಯಾಪ್ತಿಯ ಗ್ರಾಮಗಳಿಗೆ ರಾಜ್ಯದ ಇತರ […]

ಮುಂದಿನ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು : ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಸಭಾಂಗಣದ ಬಳಿ ಇಂದು ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಸಂಪೂರ್ಣ ರದ್ದುಗೊಳಿಸಲಾಗುವುದು ಎಂದರುಮುಂದಿನ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್​ಇಪಿ) ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮುಂದಿನ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ರದ್ದುಗೊಳಿಸಿ ಸಂವಿಧಾನ ರೀತಿಯಲ್ಲಿ ಶಿಕ್ಷಣ ಕೊಡಲು ಪ್ರಯತ್ನ […]

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 503 ಸಿಬ್ಬಂದಿಗಳು ಶ್ಲಾಘನೀಯ ಸೇವಾ ಪ್ರಶಸ್ತಿಗೆ ಆಯ್ಕೆ

ಹುಬ್ಬಳ್ಳಿ : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ (ಎನ್‌ಡಬ್ಲ್ಯೂಕೆಆರ್‌ಟಿಸಿ) ಪ್ರಸ್ತುತ ವರ್ಷ 503 ಸಿಬ್ಬಂದಿಗಳು ಶ್ಲಾಘನೀಯ ಸೇವಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ನಗದು ಬಹುಮಾನದ ಮೊತ್ತವನ್ನು ರೂ.500 ರಿಂದ ರೂ.2,000 ಕ್ಕೆ ಹೆಚ್ಚಿಸಿ ವ್ಯವಸ್ಥಾಪಕ ನಿರ್ದೇಶಕರ ಭರತ್ ಎಸ್. ಆದೇಶ ಹೊರಡಿಸಿದ್ದಾರೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಶ್ಲಾಘನೀಯ ಸೇವಾ ಪ್ರಶಸ್ತಿಗೆ 503 ಸಿಬ್ಬಂದಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕರ ಭರತ್ ಎಸ್. ಮಾಹಿತಿ ನೀಡಿದ್ದಾರೆ ಪ್ರತಿ ಪ್ರಕರಣಕ್ಕೆ ತಕ್ಕಂತೆ ಇದುವರೆಗೂ ರೂ.500ರ ವರೆಗೆ ನಗದು […]

ಎಗ್ಮೋರ್​ ನ್ಯಾಯಾಲಯದಿಂದ ಖ್ಯಾತ ನಟಿ ಜಯಪ್ರದಾಗೆ 6 ತಿಂಗಳ ಶಿಕ್ಷೆ

ಚೆನ್ನೈ, ತಮಿಳುನಾಡು: ಕಾರ್ಮಿಕ ಸರ್ಕಾರಿ ವಿಮಾ ನಿಗಮವು ಚೆನ್ನೈನ ಎಗ್ಮೋರ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿತ್ತು. ಪ್ರಕರಣವನ್ನು ವಜಾಗೊಳಿಸುವಂತೆ ಕೋರಿ ಜಯಪ್ರದಾ ಸೇರಿದಂತೆ ಮೂವರು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅದಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಪರಿಶೀಲಿಸಿದ ಚೆನ್ನೈ ಎಗ್ಮೋರ್ ಕೋರ್ಟ್ ಜಯಪ್ರದಾ ಮತ್ತು ಇತರ ಮೂವರಿಗೆ ಆರು ತಿಂಗಳ ಶಿಕ್ಷೆ ವಿಧಿಸಿದೆ. ಚೆನ್ನೈ ಎಗ್ಮೋರ್ ನ್ಯಾಯಾಲಯ ಖ್ಯಾತ ನಟಿ ಹಾಗೂ ಮಾಜಿ ಸಂಸದೆ ಜಯಪ್ರದಾ ಅವರಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. […]