ಚಿಟ್ ರಿಜಿಸ್ಟ್ರಾರ್ ನೀಡಿದ ಬಹಿರಂಗ ನೊಟೀಸ್‌ಗೆ ಹೈಕೋರ್ಟ್ ತಡೆ

ಅಮರಾವತಿ (ಆಂಧ್ರ ಪ್ರದೇಶ): ಮಾರ್ಗದರ್ಶಿ ಚಿಟ್ ಗ್ರೂಪ್ಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವ ಕುರಿತು ಚಿಟ್ ರಿಜಿಸ್ಟ್ರಾರ್ ಹೊರಡಿಸಿದ್ದ ಸಾರ್ವಜನಿಕ ನೊಟೀಸ್‌ಗೆ ಆಂಧ್ರ ಪ್ರದೇಶ ಹೈಕೋರ್ಟ್ ತಡೆಯಾಜ್ಞೆ ಕೊಟ್ಟಿದೆ.ಮಾರ್ಗದರ್ಶಿ ಚಿಟ್ ಗ್ರೂಪ್ಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವ ಕುರಿತು ಚಿಟ್ ರಿಜಿಸ್ಟ್ರಾರ್ ಹೊರಡಿಸಿದ್ದ ಸಾರ್ವಜನಿಕ ನೊಟೀಸ್‌ಗೆ ಆಂಧ್ರ ಪ್ರದೇಶ ಹೈಕೋರ್ಟ್ ಇಂದು ತಡೆ ನೀಡಿತು. ಸಾರ್ವಜನಿಕ ನೊಟೀಸ್ ಆಧಾರದ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳುವುದಕ್ಕೆ ಹೈಕೋರ್ಟ್ ತಡೆ ಕೊಟ್ಟಿದೆ. ಚಂದಾದಾರರು ಈಗಾಗಲೇ ಸಲ್ಲಿಸಿರುವ ಅರ್ಜಿಗಳ ಕುರಿತಂತೆ ಮಧ್ಯಂತರ ಆದೇಶ ಹೊರಡಿಸಲಾಗಿದೆ. […]
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಅಜಯ್ ಸಿಂಗ್ ನೇಮಕ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಅಧ್ಯಕ್ಷರನ್ನಾಗಿ ಅಜಯ್ ಸಿಂಗ್ ಅವರನ್ನು ನೇಮಿಸಿ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.ಅಜಯ್ ಸಿಂಗ್ ಅವರನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಜೇವರ್ಗಿ ಶಾಸಕರ ಅಸಮಾಧಾನ ತಗ್ಗಿಸುವ ಕಸರತ್ತು ನಡೆಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧಿನಿಯಮ 2013ರ ನಿಯಮಿತ ಅನ್ವಯ ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ 11 ಸದಸ್ಯರನ್ನೊಳಗೊಂಡಂತೆ ಮಂಡಳಿ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ. ಸಚಿವ ಸ್ಥಾನ ಸಿಗದಿದ್ದಕ್ಕೆ ಜೇವರ್ಗಿ ಕ್ಷೇತ್ರದ […]
ಆಗಸ್ಟ್ 27ರಂದು ರಾಜ್ಯಾದ್ಯಂತ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

ಬೆಂಗಳೂರು : ಇಂದು ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಆಗಸ್ಟ್ 27ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಲಾಗುತ್ತದೆ ಎಂದು ಹೇಳಿದರು. ರಾಜ್ಯ ಸರ್ಕಾರದ ‘ಬಹುನಿರೀಕ್ಷಿತ’ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 27ರಂದು ಚಾಲನೆ ನೀಡಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ […]
ಸಚಿವ ಈಶ್ವರ ಖಂಡ್ರೆ ಮಾಹಿತಿ: ಕರ್ನಾಟಕದಲ್ಲಿ ಆನೆಗಳ ಸಂಖ್ಯೆ 350ರಷ್ಟು ಹೆಚ್ಚಳ

ಬೆಂಗಳೂರು : ರಾಜ್ಯದ ಆನೆಗಳ ಸಂಖ್ಯೆಯಲ್ಲಿ 350ರಷ್ಟು ಹೆಚ್ಚಳವಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಆನೆಗಳ ಗಣತಿಯ ವರದಿ ಬಿಡುಗಡೆ ಮಾಡಿ ಮಾತನಾಡಿದ ಅವರು, 2017ರಲ್ಲಿ ರಾಜ್ಯದಲ್ಲಿ ಸುಮಾರು 6049 ಆನೆಗಳಿದ್ದವು. ಈ ಬಾರಿ ಗಣತಿಯ ವೇಳೆ 6,395 ಆನೆಗಳಿವೆ ಎಂದು ಅಂದಾಜು ಮಾಡಲಾಗಿದ್ದು, ಸುಮಾರು 350ರಷ್ಟು ಹೆಚ್ಚಳವಾಗಿದೆ ಎಂದರು.ಆನೆಗಳು ಬಲಿಷ್ಠ ವನ್ಯಜೀವಿಗಳಾದರೂ ಭಾರತ ಸೇರಿದಂತೆ ವಿಶ್ವಾದ್ಯಂತ ಅಪಾಯದಲ್ಲಿವೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ […]
ಕರ್ನಾಟಕ ಬ್ಯಾಂಕ್‌ನ ಮಾಜಿ ಎಂಡಿ ಪೊಳಲಿ ಜಯರಾಮ ಭಟ್ ನಿಧನ

ಮಂಗಳೂರು: ಕರ್ಣಾಟಕ ಬ್ಯಾಂಕ್‌ನ ಮಾಜಿ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಪೊಳಲಿ ಜಯರಾಮ ಭಟ್ ಬುಧವಾರ ನಿಧನರಾದರು ಮಧ್ಯಾಹ್ನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ದುರಾದೃಷ್ಟವಶಾತ್ ಕೊನೆಯುಸಿರೆಳೆದಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಪೊಳಲಿಯಲ್ಲಿ ಜನಿಸಿದ ಭಟ್ ಅವರು 1972 ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ತಮ್ಮ ಎಂಎಸ್ಸಿ ಕಾರ್ಯಕ್ರಮದಲ್ಲಿ ಉನ್ನತ ಶ್ರೇಣಿಯನ್ನು ಪಡೆಯುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದರು. ಶಿಕ್ಷಣತಜ್ಞರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿ, ಪಿ ಜಯರಾಮ ಭಟ್ ಅವರ […]