ಸೌಜನ್ಯ ಪ್ರಕರಣಕ್ಕೆ ನ್ಯಾಯ ಸಿಗುವವರೆಗೂ ಧರ್ಮಸ್ಥಳಕ್ಕೆ ಹೋಗಲ್ಲ ಎಂದು ಹೇಳಿಕೆ ನೀಡಿದ ನಟ ವಿನೋದ್ ಪ್ರಭಾಕರ್

ಬೆಂಗಳೂರು: ಕನ್ನಡ ಖ್ಯಾತ ನಟ ದಿ. ಟೈಗರ್ ಪ್ರಭಾಕಾರ್ ಮಗ ನಟ ವಿನೋದ್ ಟೈಗರ್ ಪ್ರಭಾಕರ್ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿಗೆ ನ್ಯಾಯ ಸಿಗುವವರೆಗೂ ನಾನು ಧರ್ಮಸ್ಥಳ ಮಂಜುನಾಥನ ದರ್ಶನ ಪಡೆಯುವುದಿಲ್ಲ ಎಂದು ಬರೆದುಕೊಂಡಿದ್ದಾರೆ . ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿರುವ ನಟ ವಿನೋದ್, ಮಹೇಶ್ ಶೆಟ್ಟಿ ಸರ್ ನಿಮ್ಮ ಕೆಲಸದ ಮೇಲೆ ನನಗೆ ಅಪಾರ ಗೌರವವಿದೆ, ನಾನು ಧರ್ಮಸ್ಥಳ ಮಂಜುನಾಥ ಮತ್ತು ಅಣ್ಣಪ್ಪನಲ್ಲಿ ಪ್ರಾರ್ಥಿಸುತ್ತೇನೆ. ಸೌಜನ್ಯ ನ್ಯಾಯ ಕೊಡಲಿ. ಸೌಜನ್ಯ ಸಾವಿಗೆ ನ್ಯಾಯ ಸಿಗುವವರೆಗೂ […]

ಪಂಚಭೂತಗಳಲ್ಲಿ ಲೀನರಾದ ಸ್ಪಂದನಾ : ಪತ್ನಿಗೆ ಕಣ್ಣೀರಿನ ಮೂಲಕ ವಿದಾಯ ಹೇಳಿದ ವಿಜಯ ರಾಘವೇಂದ್ರ

ಕನ್ನಡ ಚಿತ್ರರಂಗದ ಜನಪ್ರಿಯ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಇನ್ನು ನೆನಪು ಮಾತ್ರ. ಬ್ಯಾಂಕಾಕ್​ನಲ್ಲಿ ಹೃದಯಾಘಾತಕ್ಕೊಳಗಾಗಿ ಸ್ಪಂದನಾ ಕೊನೆಯುಸಿರೆಳೆದ ಸುದ್ದಿ ಚಿತ್ರರಂಗ ಮಾತ್ರವಲ್ಲ, ಕನ್ನಡಿಗರ ಆಘಾತಕ್ಕೆ ಕಾರಣವಾಗಿತ್ತು. ನಿನ್ನೆ (ಮಂಗಳವಾರ) ರಾತ್ರಿ ಪಾರ್ಥಿವ ಶರೀರವನ್ನು ಬ್ಯಾಂಕಾಕ್​ನಿಂದ ವಿಮಾನದ ಮೂಲಕ ಬೆಂಗಳೂರಿಗೆ ತರಲಾಗಿತ್ತು. ಮಲ್ಲೇಶ್ವರಂನ ನಿವಾಸದಲ್ಲಿ ಇಂದು ಮುಂಜಾನೆ 6 ಗಂಟೆಯಿಂದ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಅಂತ್ಯಸಂಸ್ಕಾರ ನೆರವೇರಿದ್ದು, ಪಂಚಭೂತಗಳಲ್ಲಿ ಸ್ಪಂದನಾ ಲೀನರಾಗಿದ್ದಾರೆ.ಇಂದು ಸಂಜೆ 5 ಗಂಟೆಗೆ ವಿಜಯ್ ರಾಘವೇಂದ್ರ ಅವರ ಪತ್ನಿ […]

ಗಂಡ ಕಪ್ಪೆಂದು ಅವಮಾನಿಸಿ ಪ್ರತ್ಯೇಕವಾಗಿ ವಾಸಿಸಿ ಸುಳ್ಳು ಆರೋಪ ಹೊರಿಸಿದ ಪತ್ನಿ: ಕ್ರೌರ್ಯದ ಹಿನ್ನೆಲೆಯಲ್ಲಿ ವಿವಾಹ ವಿಸರ್ಜಿಸಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ಪತಿಯ ಮೈ ಬಣ್ಣವನ್ನು ‘ಕಪ್ಪು’ ಎಂದು ಅವಮಾನಿಸಿ ಪತ್ನಿ ಅದೇ ಕಾರಣಕ್ಕೆ ಆತನಿಂದ ದೂರವಿರುವುದು ಮತ್ತು ವಿಷಯವನ್ನು ಮುಚ್ಚಿಡಲು ಅಕ್ರಮ ಸಂಬಂಧಗಳ ಸುಳ್ಳು ಆರೋಪಗಳನ್ನು ಪತಿಯ ಮೇಲೆ ಹೊರಿಸುವುದು ಕ್ರೌರ್ಯದ ಪರಿಧಿಯಲ್ಲಿ ಬರುವುದು ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪತಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ಅನಂತ್ ರಾಮನಾಥ್ ಹೆಗ್ಡೆ ಅವರಿದ್ದ ವಿಭಾಗೀಯ ಪೀಠವು ಅಂಗೀಕರಿಸಿತು ಮತ್ತು ವಿಚ್ಛೇದನದ ತೀರ್ಪು ನಿರಾಕರಿಸಿದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ತಳ್ಳಿಹಾಕಿತು. “ಗಂಡ ಕಪ್ಪಾಗಿದ್ದಾನೆ ಎಂಬ ಕಾರಣಕ್ಕಾಗಿ […]

ಟೊಮೆಟೊ ಮಾರಿ ಎಸ್.ಯು.ವಿ ಖರೀದಿಸಿದ ರೈತ: ಉದ್ಯೋಗಪತಿಗಳು ಮಾತ್ರವಲ್ಲ, ರೈತರಿಗೂ ಒಂದು ಕಾಲ ಬರುವುದೆಂದು ತೋರಿದ ಟೊಮೆಟೊ!!

ಚಾಮರಾಜನಗರ: ಕೃಷಿ ಜೀವನ, ರೈತರಾಗಿರುವುದೆಂದರೆ ಸದಾ ಬಡತನದಲ್ಲೇ ದಿನಗಳೆಯುವುದು ಎನ್ನುವ ಮಾತಿಗೆ ಗಗನಕ್ಕೇರಿದ ಟೊಮೆಟೊ ಬೆಲೆ ಛಾಟಿ ಬೀಸಿದೆ. ವಿವಿಧ ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಟೊಮೆಟೊ ಬೆಳೆದು ಮಂಡಿಗಳಲ್ಲಿ ಟೊಮೆಟೋವನ್ನು ಭಾರಿ ಬೆಲೆಗೆ ಮಾರಾಟ ಮಾಡಿ ಅನೇಕ ರೈತರು ಕೋಟ್ಯಾಧಿಪತಿಗಳಾಗಿದ್ದಾರೆ. ಇದೇ ರೀತಿಯ ಘಟನೆಯಲ್ಲಿ, ಚಾಮರಾಜನಗರದ ರೈತ ರಾಜೇಶ್ ತಾನು ಬೆಳೆದ ಟೊಮೆಟೊ ಮಾರಾಟ ಮಾಡುವ ಮೂಲಕ ಸುಮಾರು 40 ಲಕ್ಷ ರೂ. ಸಂಪಾದಿಸಿದ್ದಾರೆ. ಬೆಲೆ ಹೆಚ್ಚಾಗುವ ಮೊದಲು ಅವರು ತಮ್ಮ 12 ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆದಿದ್ದರು. […]

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಲುಮರದ ತಿಮ್ಮಕ್ಕ, ಆರೋಗ್ಯ ವಿಚಾರಿಸಿದ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಮನೆಯಲ್ಲಿ ಜಾರಿ ಬಿದ್ದು ಬೆನ್ನುಮೂಳೆಗೆ ಪೆಟ್ಟುಬಿದ್ದ ಕಾರಣ ಜಯನಗರದ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶತಾಯುಷಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಲುಮರದ ತಿಮ್ಮಕ್ಕರನ್ನು ಅರಣ್ಯ ಹಾಗೂ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. “ಮರಗಳನ್ನೇ ಮಕ್ಕಳಂತೆ ಮಮಕಾರದಿಂದ ಸಾಕಿರುವ ಮಹಾತಾಯಿಯಾದ ನಿಮಗೆ ಇಡೀ ಕರುನಾಡಿ ಜನರಷ್ಟೇ ಅಲ್ಲದೇ ವಿಶ್ವ ಪರಿಸರ ಪ್ರೇಮಿಗಳ ದಿವ್ಯ ಶುಭ ಹಾರೈಕೆ ಇದೆ. ನೀವು ಶೀಘ್ರ ಗುಣಮುಖರಾಗುತ್ತೀರಿ” ಎಂದು ಸಚಿವರು ಹಾರೈಸಿದರು. ಬೆನ್ನುಮೂಳೆಗೆ ಪೆಟ್ಟುಬಿದ್ದು […]