ಬೆಳಗಾವಿಯಲ್ಲಿ ಕಸದ ಗಾಡಿ ಹತ್ತಿ ತ್ಯಾಜ್ಯ ವಿಲೇವಾರಿ ಪರಿಶೀಲಿಸಿದ ಪಾಲಿಕೆ ಆಯುಕ್ತ

ಬೆಳಗಾವಿ :ಕೆಲವು ಕಡೆಗಳಲ್ಲಿ ಸರಿಯಾದ ಸಮಯಕ್ಕೆ ವಾಹನ ತೆರಳುತ್ತಿಲ್ಲವೆಂದು ಆಯುಕ್ತರಿಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದಿದ್ದವು. ಇದರಿಂದ ಎಚ್ಚೆತ್ತುಕೊಂಡ ಆಯುಕ್ತ ಅಶೋಕ ದುಡಗುಂಟಿ ಸೋಮವಾರ ಬೆಳಗ್ಗೆ 5.30ಕ್ಕೆ ಸೈಕಲ್ ಮೇಲೆ ಕಸ ಸಂಗ್ರಹಿಸುವ ವಾಹನಗಳ ಶಾಖೆಗೆ ದಿಢೀರ್ ಭೇಟಿ ನೀಡಿದ್ದರು. ನಗರದ ಕೆಲವು ವಾರ್ಡ್ಗಳಿಗೆ ಕಸ ಸಂಗ್ರಹಿಸುವ ವಾಹನಗಳು ಹೋಗುತ್ತಿರಲಿಲ್ಲ. ಖುದ್ದು ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಫಿಲ್ಡಿಗಿಳಿಯುವ ಮೂಲಕ ಕಸ ವಿಲೇವಾರಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಚಾಲಕರು, ಕ್ಲೀನರ್ ಗಳು ಎಷ್ಟು ಗಂಟೆಗೆ ಡ್ಯೂಟಿಗೆ […]
ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯಿದೆಯಡಿ ಸುಳ್ಳು ಪ್ರಕರಣಗಳು ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ಅಡ್ಡಿಪಡಿಸುತ್ತಿವೆ: ಕರ್ನಾಟಕ ಹೈಕೋರ್ಟ್

ಬೆಂಗಳೂರು: ಎಸ್‌ಸಿ ಮತ್ತು ಎಸ್‌ಟಿ (ದೌರ್ಜನ್ಯ ತಡೆ) ಕಾಯಿದೆ, 1989 ರ ಅಡಿಯಲ್ಲಿ ದಾಖಲಿಸಲಾದ ಸುಳ್ಳು ಪ್ರಕರಣಗಳು ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ಅಡ್ಡಿಪಡಿಸುತ್ತಿವೆ ಮತ್ತು ವಿವಿಧ ನ್ಯಾಯಾಲಯಗಳ ಅಮೂಲ್ಯ ಸಮಯವನ್ನು ಕಳೆಯುತ್ತಿವೆ ಎಂದು ಶಾಸನದ ಅಡಿಯಲ್ಲಿ ಇಬ್ಬರು ಸಹೋದರರ ವಿರುದ್ಧದ ಸಿವಿಲ್ ವಿವಾದದ ವಿಚಾರಣೆಯನ್ನು ರದ್ದುಗೊಳಿಸುವಾಗ ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಹೇಳಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅಂತಹ ಪ್ರಕರಣಗಳನ್ನು “ಕಾನೂನಿನ ಪ್ರಕ್ರಿಯೆಯ ದುರುಪಯೋಗ” ಎಂದು ಬಣ್ಣಿಸಿದ ನ್ಯಾಯಾಲಯ, “ಇವುಗಳನ್ನು ನಿಗ್ರಹಿಸಬೇಕಾಗಿದೆ, ವಿಫಲವಾದರೆ ಅವು […]
ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ

ಬೆಂಗಳೂರು: ಕನ್ನಡ ಚಿತ್ರ ನಟ ಚಿನ್ನಾರಿ ಮುತ್ತ ಖ್ಯಾತಿಯ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಹೃದಯಾಘಾತದಿಂಧ ನಿಧನರಾಗಿದ್ದಾರೆ. ಪತಿ ವಿಜಯ್ ಅವರ ಜೊತೆಗೆ ಬ್ಯಾಂಕಾಕ್ ಗೆ ತೆರಳಿದ್ದಾಗ ಅಲ್ಲಿ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಸುದ್ದಿ ಇಡೀ ಕನ್ನಡ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯಾಗಿದೆ. ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ […]
ತುಳು ಕೂಟದ 50ನೇ ವರ್ಷಾಚರಣೆ: ಉದ್ಯಾನ ನಗರ ಬೆಂಗಳೂರಿನಲ್ಲಿ ಕಂಬಳದ ಕೋಣದ ಓಡಿಸಲು ಭರದ ಸಿದ್ದತೆ

ಬೆಂಗಳೂರು: ಬೆಂಗಳೂರು ತುಳು ಕೂಟದ 50ನೇ ವರ್ಷಾಚರಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಕಂಬಳ ನಡೆಸುವ ಬಗ್ಗೆ ಚಿಂತನೆ ನಡೆದಿದೆ. ಇದಕ್ಕೆ ತಕ್ಕಂತೆ ಬೆಂಗಳೂರಿನಲ್ಲಿ ಕಂಬಳವನ್ನು ಆಯೋಜಿಸಲು ತಂಡ ಸಿದ್ಧವಾಗಿದೆ. ಕಂಬಳದ ಕೋಣಗಳನ್ನು ಓಡಿಸಲು ಸ್ಥಳದ ಅವಶ್ಯಕತೆ ಇದ್ದು ಇದಕ್ಕಾಗಿ ಸ್ಥಳವನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳದ ಕೋಣಗಳನ್ನು ಓಡಿಸಿ, ತುಳುನಾಡಿನ ಸಾಂಪ್ರದಾಯಿಕ ಕ್ರೀಡೆಯನ್ನು ಬೆಂಗಳೂರಿಗರಿಗೆ ಪರಿಚಯಿಸುವ ನಿಟ್ಟಿನಲ್ಲಿ ಕಾರ್ಯಗಳು ನಡೆಯುತ್ತಿವೆ. ಬೆಂಗಳೂರಿನಲ್ಲಿ ಕಂಬಳ ಆಯೋಜನೆ ಮಾಡುವ ಬಗ್ಗೆ ಪುತ್ತೂರು ಶಾಸಕ ಹಾಗೂ ಉಪ್ಪಿನಂಗಡಿ ವಿಜಯ-ವಿಕ್ರಮ ಜೋಡುಕೆರೆ […]
ತೆಲುಗಿನ ಜನಪ್ರಿಯ ಕ್ರಾಂತಿಕಾರಿ ಗಾಯಕ ಗುಮ್ಮಡಿ ವಿಠ್ಠಲ್ ರಾವ್ ಆಲಿಯಾಸ್ ಗದ್ದರ್ ನಿಧನ

ಹೈದರಾಬಾದ್ (ತೆಲಂಗಾಣ): ಹೃದಯ ಸಂಬಂಧಿ ಖಾಯಿಲೆಗೆ ಇವರು ಚಿಕಿತ್ಸೆ ಪಡೆಯುತ್ತಿದ್ದರು. ಪತ್ನಿ ವಿಮಲಾ ಹಾಗು ಮಕ್ಕಳಾದ ಸೂರ್ಯ, ಚಂದ್ರ ಹಾಗೂ ವೆನ್ನೆಲ ಅವರನ್ನು ಅಗಲಿದ್ದಾರೆ. ತೆಲುಗಿನ ಕ್ರಾಂತಿಕಾರಿ ಗಾಯಕರೆಂದೇ ಪ್ರಸಿದ್ಧಿ ಪಡೆದಿದ್ದ ಗದ್ದರ್ (74) ಇಂದು ಇಲ್ಲಿನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ತೆಲುಗಿನ ಕ್ರಾಂತಿಕಾರಿ ಗಾಯಕ ಗುಮ್ಮಡಿ ವಿಠ್ಠಲ್ ರಾವ್ ಆಲಿಯಾಸ್ ಗದ್ದರ್ ಅವರು ಹೈದರಾಬಾದ್ನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ‘ಗದ್ದರ್’ ಆಲ್ಬಂ: 1969ರ ತೆಲಂಗಾಣ ಚಳವಳಿಯಲ್ಲಿ ಸಕ್ರಿಯರಾಗಿದ್ದ ಗದ್ದರ್, ಪ್ರತ್ಯೇಕ ತೆಲಂಗಾಣ ರಾಜ್ಯ […]