ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನ: ಅಪಘಾತದಲ್ಲಿ 241 ಮಂದಿ ಮೃತ್ಯು.

ನವದೆಹಲಿ: ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್‌ಗೆ 242 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು ಜೂ.12 ರಂದು ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ತಕ್ಷಣ ಪತನಗೊಂಡಿತು, ಇದು ಭಾರತದ ಇದುವರೆಗಿನ ಅತ್ಯಂತ ಭೀಕರ ವಿಮಾನ ದುರಂತಗಳಲ್ಲಿ ಒಂದಾಗಿದೆ. ಲಂಡನ್‌ಗೆ ತೆರಳುತ್ತಿದ್ದ ವಿಮಾನದಲ್ಲಿ 230 ಪ್ರಯಾಣಿಕರು, 10 ಸಿಬ್ಬಂದಿ ಮತ್ತು ಇಬ್ಬರು ಪೈಲಟ್‌ಗಳು ಇದ್ದರು. ಸೀಟ್ ಸಂಖ್ಯೆ 11A ಯ ಪ್ರಯಾಣಿಕನೊಬ್ಬ ಅಪಘಾತದಲ್ಲಿ ಬದುಕುಳಿದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ಮಧ್ಯರಾತ್ರಿ […]
242 ಪ್ರಯಾಣಿಕರನ್ನು ಹೊತ್ತು ಗುಜರಾತಿನ ಅಹಮದಾಬಾದಿನಿಂದ ಲಂಡನ್‌ಗೆ ಹೊರಟಿದ್ದ ವಿಮಾನ ಟೇಕ್ ಆಫ್ ಆಗಿ 20 ನಿಮಿಷದಲ್ಲಿ ಪತನ

ಅಹಮದಾಬಾದ್: ಗುರುವಾರ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಗುರುವಾರ (ಜೂ.12) ಮಧ್ಯಾಹ್ನ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದೆ.ಇದೇ ವಿಮಾನದಲ್ಲಿ ಗುಜರಾತಾ ನ ಮಾಜಿ ಸಿಎಂ ವಿಜಯ ರೂಪಾಣಿ ಕೂಡ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದೆ ಎಂದು ರಾಜ್ಯ ಪೊಲೀಸ್ ನಿಯಂತ್ರಣ ಕೊಠಡಿ ದೃಢಪಡಿಸಿದೆ. ಬೋಯಿಂಗ್ 787-8 ಗ್ರೀಮ್‌ಲೈನರ್ ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 […]
ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ: ಕಂಬನಿ ಮಿಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಫಿ ಜಯಿಸಿ ಬೆಂಗಳೂರಿಗೆ ಆಗಮಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಿಂದಾಗಿ 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಂಬನಿ ಮಿಡಿದಿದ್ದಾರೆ. ಆರ್.ಸಿ.ಬಿ ತಂಡದ ಗೆಲುವಿನ ಸಂಭ್ರಮಾಚರಣೆಯ ವೇಳೆ ಸಾವು, ನೋವುಗಳಾಗಿರುವ ಸುದ್ದಿ ತಿಳಿದು, ಮನಸ್ಸಿಗೆ ಅತೀವ ನೋವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಗಳಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಆ ದೇವರು […]
ಶೀಘ್ರದಲ್ಲಿಯೇ ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನ: ಸಚಿವ ವಿ. ಸೋಮಣ್ಣ

ಚಿತ್ರದುರ್ಗ: ಶೀಘ್ರದಲ್ಲಿಯೇ ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲಾಗುವುದು ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಶನಿವಾರ ಹೇಳಿದ್ದಾರೆ. ಕೇಂದ್ರ ಸಚಿವನಾದ ಕೂಡಲೇ ಈ ವಿಷಯವನ್ನು ಕೈಗೆತ್ತಿಕೊಂಡಿದ್ದು, ಮಂಗಳೂರಿನಲ್ಲಿ ಸಭೆ ನಡೆಸಿದ್ದೆ. ಕೊಂಕಣ ರೈಲ್ವೆಗಳನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸುವಂತೆ ಕೇಂದ್ರ ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದ್ದು, ಈ ನಿಟ್ಟಿನಲ್ಲಿ ಕೆಲಸಗಳಾಗುತ್ತಿವೆ ಎಂದರು. ಕೊಂಕಣ ರೈಲ್ವೆ ನಿಗಮದ ಕಾರ್ಯಾಚರಣೆಗೆ ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಅವರ ಕಠಿಣ ಪರಿಶ್ರಮ […]
ಯುಎಇ ಅಥ್ಲೆಟಿಕ್ಸ್: ಕರ್ನಾಟಕದ ಕರಿಶ್ಮಾ ಗೆ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ

ದುಬೈ: ವಿಶ್ವ ಅಥ್ಲೆಟಿಕ್ಸ್ ಕಾಂಟಿನೆಂಟಲ್ ಟೂರ್ ಆಗಿರುವ ಯುಎಇ ಅಥ್ಲೆಟಿಕ್ಸ್ ವಿಮೆನ್ಸ್ ಗಾಲಾ ಕೂಟದಲ್ಲಿ ಕರ್ನಾಟಕದ ಕರಿಶ್ಮಾ ಸನಿಲ್ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಭಾನುವಾರ ನಡೆದ ಮಹಿಳೆಯರ ವಿಭಾಗದ ಸ್ಪರ್ಧೆಯಲ್ಲಿ ಕರಿಶ್ಮಾ 53.33 ಮೀಟರ್ ದೂರಕ್ಕೆ ಜಾವೆಲಿನ್ ಎಸೆದು ಚಾಂಪಿಯನ್ ಎನಿಸಿಕೊಂಡರು. ಉಳಿದಂತೆ ಲಾಂಗ್ ಜಂಪ್‌ನಲ್ಲಿ ಭಾರತದ ಆ್ಯನ್ಸಿ ಸೋಜನ್ (6.54 ಮೀ.) ಚಿನ್ನ ಗೆದ್ದರೆ, ಶೈಲಿ ಸಿಂಗ್ (6.48 ಮೀ.) ಬೆಳ್ಳಿ ಪಡೆದರು.