ಕೋಟದ ಪಂಚವರ್ಣ ಸಂಸ್ಥೆಯ ರಜತ ಗೌರವ ಪ್ರದಾನ ಸಮಾರಂಭ

ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಬೆಳ್ಳಿ ಹಬ್ಬದ ಅಂಗವಾಗಿ ರಜತ ಗೌರವಾರ್ಪಣೆ ಎಂಟನೇ ಸಾಧಕ ಶಕ್ತಿ ರಾಜ್ಯದ ಪ್ರಸಿದ್ಧ ಆಯುರ್ವೇದ ವೈದ್ಯ ವೆರಿಕೋಸ್೯ ತಜ್ಞ ಡಾ. ಎಂ.ವಿ ಉರಾಳರಿಗೆ ಪಂಚವರ್ಣ ರಜತ ಗೌರವ ಕಾರ್ಯಕ್ರಮ ನಡೆಯಿತು.ಉರಾಳರ ವ್ಯಕ್ತಿತವೇ ಸಾಧಕರಿಗೆ ದಾರಿ ದೀಪ ಎಂದು ಸಾಹಿತಿ , ಶಿಕ್ಷಕ ನರೇಂದ್ರ ಕುಮಾರ್ ಕೋಟ ಹೇಳಿದರು. ವೆರಿಕೋಸ್೯ ಎನ್ನುವ ರೋಗವನ್ನು ಗುಣಪಡಿಸುವ ಜೊತೆಗೆ ರಾಜ್ಯಾದ್ಯಂತ ತನ್ನ ಶಾಖೆಗಳನ್ನು ತೆರೆದು ಅದೆಷ್ಟೊ ಬಡ […]
ಚಿಕ್ಕಮಗಳೂರು: ಮುಳ್ಳಯ್ಯನಗಿರಿಯಲ್ಲಿ ಗುಡ್ಡ ಕುಸಿತ; ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ಚಿಕ್ಕಮಗಳೂರು: ಇಲ್ಲಿನ ಮನಮೋಹಕ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿ ತಪ್ಪಲಿನ ರಸ್ತೆಗಳಲ್ಲಿ ಮಳೆಯಿಂದ ಗುಡ್ಡ ಕುಸಿಯುತ್ತಿರುವುದರಿಂದಾಗಿ ಸಂಚಾರಕ್ಕೆ ತೊಡಕಾಗುತ್ತಿದೆ. ಅನಾಹುತಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಮುಂಜಾಗರೂಕತಾ ಕ್ರಮವಾಗಿ ಜಿಲ್ಲಾಡಳಿತವು ಮುಳ್ಳಯ್ಯನಗಿರಿಗೆ ಪ್ರವಾಸಿಗರ ಭೇಟಿಗೆ ನಿರ್ಬಂಧ ಹೇರಿದೆ. ದತ್ತಪೀಠ ಮಾರ್ಗದಲ್ಲಿ ಮುಳ್ಳಯ್ಯನಗಿರಿಗೆ ತಿರುವು ತೆಗೆದುಕೊಳ್ಳುವ ಸ್ಥಳದಲ್ಲೇ ಪೋಲಿಸರು ಬ್ಯಾರಿಕೇಡ್ ಅಳವಡಿಸಿ ಪ್ರವಾಸಿಗರನ್ನು ತಡೆಯುತ್ತಿದ್ದಾರೆ. ದತ್ತಪೀಠಕ್ಕೆ ತೆರಳುವ ಮಾರ್ಗದಲ್ಲೂ ಗುಡ್ಡ ಕುಸಿದು ಅರ್ಧದಷ್ಟು ರಸ್ತೆ ಮಣ್ಣಿನಿಂದ ಮುಚ್ಚಿ ಹೋಗಿದ್ದು ಮಳೆ ಮುಂದುವರಿದಲ್ಲಿ ಪೀಠದ ಮಾರ್ಗವೂ ಸಂಪೂರ್ಣ ಬಂದ್ ಆಗುವ ಭೀತಿ ಎದುರಾಗಿದೆ.
ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜುಲೈ 25ರಂದು (ಮಂಗಳವಾರ) ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ ಕಾರಣ ಜಿಲ್ಲೆಯಲ್ಲಿ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಮುನ್ಸೂಚನೆ ನೀಡಿದ್ದು , ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು, ಹಳ್ಳಗಳು, ತೋಡುಗಳು ತುಂಬಿ ಹರಿಯುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು, ಬೀಚ್ ಗಳು, ನದಿಗಳು ಹಾಗು ಜಲಪಾತಗಳ ಬಳಿ ತೆರಳದಂತೆ ಹಾಗೂ ಫೋಟೋ […]
ಉಡುಪಿಯ ಆಭರಣ ತಯಾರಕಾ ಘಟಕದಲ್ಲಿ ವಿಷ ಅನಿಲ ಸೋರಿಕೆ

ನಗರದ ಮಧ್ಯಭಾಗದಲ್ಲಿನ ಆಭರಣ ತಯಾರಕ ಘಟಕದಲ್ಲಿನ ವಿಷ ಅನಿಲ ಸೋರಿಕೆ ಸ್ಥಳೀಯರಲ್ಲಿ ಭಯ ಮೂಡಿಸಿದೆ . ಇದರ ಹೊಗೆ ಬಹಳ ವಿಷಯುಕ್ತವಾಗಿದ್ದು ನಗರ ಮಧ್ಯ ಭಾಗದಲ್ಲಿ ಈ ರೀತಿಯ ಹರಡುತ್ತಿದ್ದರೂ ನಗರ ಸಭಾ ಅಧಿಕಾರಿಗಳು ಮೌನಕ್ಕೆ ಜಾರಿದ್ದಾರೆ . ಹಗಲು ಹೊತ್ತಿನಲ್ಲೂ ಈ ರೀತಿಯ ಹೊಗೆ ಬಿಡುತ್ತಿದ್ದು ಈ ಆಭರಣ ತಯಾರಕ ವರ್ಕ್ ಶಾಪ್ ಬಳಿಯೇ ಪ್ರಾಥಮಿಕ ಸರಕಾರಿ ಶಾಲೆ ಇದ್ದು ಶಾಲಾ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀಳುವ ಸಾಧ್ಯತೆಯಿದ್ದು ನಗರದ ಆಭರಣ ತಯಾರಕ ಸಂಸ್ಥೆಯು […]
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯ ಪರಿಣಾಮ ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿ ಬಂದ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶನಿವಾರ ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಜಿಲ್ಲೆಯ ನದಿ, ತೊರೆಗಳು ತುಂಬಿ ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಮಳೆ, ಗಾಳಿಗೆ ಈವರೆಗೆ 50ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. 300ಕ್ಕೂ ಅಧಿಕ ವಿದ್ಯುತ್ ಕಂಬಗಳು ಮುರಿದುಬಿದ್ದಿವೆ. 10ಕ್ಕೂ ಅಧಿಕ ಟ್ರಾನ್ಸ್ಫಾರ್ಮರ್ಗಳು ಕೆಟ್ಟು ಹೋಗಿವೆ. ತೋಟಗಾರಿಕಾ ಬೆಳೆಗಳು ನೆಲಕಚ್ಚಿದ್ದರೆ, ನದಿಗಳ ಪ್ರವಾಹದಿಂದ ಅಲ್ಲಲ್ಲಿ ಭತ್ತದ ಬೆಳೆ ಪ್ರವಾಹಕ್ಕೆ ಕೊಚ್ಚಿಹೋಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, 50ಕ್ಕೂ ಅಧಿಕ […]