ಸಂಘ ಸಂಸ್ಥೆಗಳು ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಕಾಯಕದಲ್ಲಿ ತೊಡಗಬೇಕು: ಜಗದೀಶ್ ಎಸ್ ಹೆಗ್ಡೆ

ಮಲಾಡ್: ಸಾಂಸ್ಕೃತಿಕ ಸಂಸ್ಕಾರ ಸಮೃದ್ಧ ಜೀವನ ಕಲೆಯನ್ನು ಪೌರಾಣಿಕ ನೀತಿ ಪಾಠದ ಮೂಲಕ ಕಲಿಸುವ ಕಲೆ ಯಕ್ಷಗಾನ . ಕರಾವಳಿ ಕರ್ನಾಟಕದ ಸಮೃದ್ಧ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮಹಾನಗರದಲ್ಲಿ ಯಕ್ಷಗಾನ ಕಲೆಯನ್ನು ಸಮೃದ್ಧಗೊಳಿಸುವ ಕಾಯಕ ಸಂಘ ಸಂಸ್ಥೆಗಳಿಂದ ನಡೆಯಬೇಕು ಎಂದು ಮಲಾಡ್ ಕನ್ನಡ ಸಂಘದ ಅಧ್ಯಕ್ಷ ಅಡ್ವೋಕೇಟ್ ಜಗದೀಶ್ ಎಸ್ ಹೆಗ್ಡೆ ಹೇಳಿದರು. ಮಲಾಡ್ ಪಶ್ಚಿಮದ ಲಿಂಕ್ ರೋಡ್ ಎವರ್ ಶೈನ್ ನಗರದ ಹೋಟೆಲ್ ಸಾಯಿ ಪ್ಯಾಲೇಸ್ ಗ್ರಾಂಡ್ ನಲ್ಲಿ ಮಲಾಡ್ ಕನ್ನಡ ಸಂಘ ಮತ್ತು […]
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿಕೆ: ಕದ್ರಾ ಜಲಾಶಯದಿಂದ ನೀರು ಬಿಡುಗಡೆ
ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿದ್ದು, ಎಲ್ಲ ನದಿಗಳು ತುಂಬಿ ಹರಿಯಲಾರಂಭಿಸಿವೆ. ಕಾಳಿ ನದಿಗೆ ನಿರಂತರವಾಗಿ ನೀರು ಹರಿದುಬರುತ್ತಿರುವ ಕಾರಣ, ಕದ್ರಾ ಜಲಾಶಯದಿಂದ ಮೂರನೇ ದಿನವೂ ನೀರು ಹೊರಬಿಡಲಾಗಿದೆ. ಬೊಮ್ಮನಳ್ಳಿ ಜಲಾಶಯದಿಂದಲೂ ನೀರು ಹೊರಬಿಡುವ ಮುನ್ಸೂಚನೆ ನೀಡಿರುವುದು ಇದೀಗ ನದಿ ಪಾತ್ರದ ಜನರಿಗೆ ಪ್ರವಾಹದ ಭೀತಿ ಎದುರಾಗಿದೆ. ಉತ್ತರಕನ್ನಡದಲ್ಲಿ ಗಾಳಿ ಸಹಿತ ಭಾರಿ ಮಳೆ ಮುಂದುವರೆದಿದೆ. ಇದೀಗ ಕುಮಟಾ ಪಟ್ಟಣದಲ್ಲಿ ಗಂಗಾಧರ ಗೌಡ ಹಾಗೂ ಗಣೇಶ ಗೌಡ ಅವರ ಮನೆ ಮೇಲೆ ಬೃಹತ್ ಆಲದ […]
ಕೊಡಗಿನಲ್ಲಿ ಧಾರಾಕಾರ ಮಳೆ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕೊಡಗು: ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ರಜೆ ಘೋಷಿಸಿದ್ದಾರೆ.ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ನಾಳೆ ಬೆಳಗ್ಗೆವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಾವೇರಿ ಉಗಮಸ್ಥಾನ ತಲಕಾವೇರಿ ಮತ್ತು ಭಾಗಮಂಡಲದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಕಾವೇರಿ ನದಿ ನೀರು ಹೆಚ್ಚಳ ಆಗಿರುವುದರಿಂದ ಭಾಗಮಂಡಲ ಮತ್ತು ತಲಕಾವೇರಿ ರಸ್ತೆಯಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಧಾರಾಕಾರ ಮಳೆಯಿಂದ ಗುಡ್ಡ ಕುಸಿತ ಸಂಭವಿಸುವ […]
ರಫ್ತು ಚಟುವಟಿಕೆಯಲ್ಲಿ ರಾಜ್ಯವನ್ನು ಮೊದಲನೇ ಸ್ಥಾನಕ್ಕೇರಿಸುವ ಗುರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಉದ್ಯಮಿಗಳೊಂದಿಗೆ ವಿಸ್ತೃತವಾಗಿ ಚರ್ಚಿಸಿ, ರಫ್ತಿಗೆ ಉತ್ತೇಜನ ನೀಡುವಂತಹ ಹೊಸ ಕೈಗಾರಿಕಾ ನೀತಿಯನ್ನು ರಾಜ್ಯ ಸರಕಾರವು ತ್ವರಿತವಾಗಿ ಜಾರಿಗೆ ತರಲಿದೆ. ರಫ್ತು ಚಟುವಟಿಕೆಯಲ್ಲಿ ದೇಶದ ಮಟ್ಟದಲ್ಲಿ ಮೂರನೇ ಸ್ಥಾನದಲ್ಲೇ ಇರುವ ರಾಜ್ಯವು ಮೊದಲ ಸ್ಥಾನಕ್ಕೆ ಏರಬೇಕೆಂಬುದು ನಮ್ಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ ಶನಿವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಿದ್ದ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಈ […]
ಪ್ರತಿಕೂಲ ಹವಾಮಾನದ ಹಿನ್ನೆಲೆ ಎರಡು ವಿಮಾನಗಳು ಡೈವರ್ಟ್ ಆಗಿ ಮತ್ತೆ ಮಂಗಳೂರಿಗೆ

ಮಂಗಳೂರು: ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಾಗಿದ್ದ ಎರಡು ವಿಮಾನಗಳನ್ನು ಡೈವರ್ಟ್ ಮಾಡಿ ಬಳಿಕ ಮತ್ತೆ ಮಂಗಳೂರಿನಲ್ಲಿ ಇಳಿಸಲಾಯಿತು.ಮುಂಬೈನಿಂದ ಮಂಗಳೂರಿಗೆ ಬರುತ್ತಿದ್ದ ವಿಮಾನವನ್ನು ಕೂಡ ಹವಾಮಾನ ವೈಪರೀತ್ಯದಿಂದಾಗಿ ಬೆಂಗಳೂರಿಗೆ ಡೈವರ್ಟ್ ಮಾಡಲಾಯಿತು. ಬೆಂಗಳೂರಿನಿಂದ ಹೊರಟು ಮಂಗಳೂರು ಏರ್ಪೋರ್ಟ್ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನ ಕಣ್ಣೂರಿಗೆ ಡೈವರ್ಟ್ ಮಾಡಲಾಯಿತು. ಬೆಂಗಳೂರಿನಿಂದ 9.55ಕ್ಕೆ ಹೊರಟಿದ್ದ ಇಂಡಿಗೋ ವಿಮಾನ ಬೆಳಗ್ಗೆ 11 ಗಂಟೆಗೆ ಮಂಗಳೂರು ಏರ್ಪೋರ್ಟ್ನಲ್ಲಿ ಲ್ಯಾಂಡ್ ಆಗಬೇಕಿತ್ತು. ಪ್ರತಿಕೂಲ ಹವಾಮಾನ ಹಿನ್ನೆಲೆ ಕೇರಳದ ಕಣ್ಣೂರು ಏರ್ಪೋರ್ಟ್ನಲ್ಲಿ […]