ಇಂದಿನಿಂದ ರಾಜ್ಯ ರಾಜಧಾನಿಯಲ್ಲಿ ಪೂರ್ಣರಾತ್ರಿ ತಾಳಮದ್ದಲೆ ಕಾರ್ಯಕ್ರಮ

ಬೆಂಗಳೂರು: ಬಣ್ಣ ಬಣ್ಣದ ವೇಷಗಳಿಲ್ಲದೆ, ಮಾತಿನ ವೈಖರಿಯ ಮೂಲಕವೇ ಕಥಾನಕವೊಂದನ್ನು ಕಟ್ಟಿಕೊಡುವ ತಾಳಮದ್ದಲೆ ಎಂಬ ಯಕ್ಷಗಾನದ ರಂಗ ಪ್ರಕಾರವೊಂದು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಪೂರ್ಣರಾತ್ರಿ ನಡೆಯಲಿದೆ. ಕೃಷ್ಣ ಸಂಧಾನ ಹಾಗೂ ಕರ್ಣಾರ್ಜುನ ಯಕ್ಷಗಾನ ತಾಳಮದ್ದಲೆ ಪ್ರಸಂಗಗಳು ಜು.22ರ ರಾತ್ರಿ 10 ರಿಂದ ಯಕ್ಷ ಸಂಕ್ರಾಂತಿ ಹೆಸರಿನಲ್ಲಿ ನಡೆಯಲಿವೆ. ಯಕ್ಷಗಾನ ಸಂಘಟಕ ನಾಗರಾಜ ಶೆಟ್ಟಿ ನೈಕಂಬಿ ಅವರ ಸಂಯೋಜನೆಯಲ್ಲಿ, ಕೃಷ್ಣ ಸಂಧಾನ, ಕರ್ಣಾ ರ್ಜುನ ಕಥಾನಕಗಳು ರವಿಚಂದ್ರ ಕನ್ನಡಿಕಟ್ಟೆ, ಗಣೇಶ್ ಹೆಬ್ರಿ, ಚಂದ್ರಕಾಂತ ಮೂಡುಬೆಳ್ಳೆ […]

ಶಾಲಾ ಮಕ್ಕಳಿಗೆ ಬೈಸಿಕಲ್ ವಿತರಣೆ ಯೋಜನೆ ಪುನರಾರಂಭ ಪರಿಶೀಲನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಶಾಲಾ ಮಕ್ಕಳಿಗೆ ಬೈಸಿಕಲ್‌ ವಿತರಣೆ ಯೋಜನೆಗೆ ಮರು ಚಾಲನೆ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈ ಕುರಿತು ಮತನಾಡಿದ ಸಿಎಂ, ಶಾಲಾ ಮಕ್ಕಳ ಸೈಕಲ್‌ ವಿತರಣೆ ಯೋಜನೆ ಹಲವು ವರ್ಷಗಳಿಂದ ಸ್ಥಗಿತಗೊಂಡಿದ್ದು, ಯೋಜನೆ ಪುನಾರಂಭಿಸುವ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. 2006-07ರಲ್ಲಿ ಆರಂಭಗೊಂಡ ಈ ಯೋಜನೆಯಡಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುವ ಸರಕಾರಿ ಶಾಲಾ ಮಕ್ಕಳಿಗೆ ಸರಕಾರದ ವತಿಯಿಂದ ಉಚಿತವಾಗಿ ಸೈಕಲ್‌ಗ‌ಳನ್ನು […]

ಆಗಸ್ಟ್ 1 ರಿಂದ ನಂದಿನ ಹಾಲಿನ ದರ 3 ರೂ ನಷ್ಟು ಹೆಚ್ಚಳ: ಕೆಎಂಎಫ್ ಪ್ರಸ್ತಾವನೆ

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ಆಗಸ್ಟ್ 1 ರಿಂದ ರಾಜ್ಯಾದ್ಯಂತ ನಂದಿನಿ ಹಾಲಿನ ದರವನ್ನು 3 ರೂ ನಷ್ಟು ಹೆಚ್ಚಿಸಲು ಮುಂದಾಗಿದೆ. ಈ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಕಳುಹಿಸಲಾಗಿದೆ ಮತ್ತು ಸಂಪುಟ ಅನುಮೋದನೆ ನಂತರ ಕರ್ನಾಟಕ ಸರ್ಕಾರವು ನಿರ್ಧಾರವನ್ನು ಪ್ರಕಟಿಸಲಿದೆ. ಶುಕ್ರವಾರ ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಕರ್ನಾಟಕ ಸಹಕಾರ ಸಚಿವ ಕೆ ರಂಜಣ್ಣ, ಹಾಲಿನ ಉತ್ಪಾದನಾ ವೆಚ್ಚದ ಏರಿಕೆಯನ್ನು ಪರಿಹರಿಸಲು ಮತ್ತು ಉತ್ಪಾದಕರಿಗೆ ಸಹಾಯ ಮಾಡಲು ಹಾಲಿನ ದರವನ್ನು ಹೆಚ್ಚಿಸುವ ಪ್ರಸ್ತಾಪವಿದೆ. […]

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿದ್ದು, ಶುಕ್ರವಾರ ಇರುವಕ್ಕಿಯಲ್ಲಿ ನಡೆದ 8ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಡಾಕ್ಟರೇಟ್ ಪ್ರದಾನ ಮಾಡಿದರು. “ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಜೀ ಮತ್ತು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಇಂದು ನೀಡಿದ ಗೌರವ ಡಾಕ್ಟರೇಟ್ ಸನ್ಮಾನ, ವಿಶೇಷವಾಗಿ ನಮ್ಮ ಅನ್ನದಾತ ರೈತರ ಹಕ್ಕು ಹಾಗೂ ಹಿತರಕ್ಷಣೆ ನಿಟ್ಟಿನಲ್ಲಿ […]

ಧಾರಾಕಾರ ಮಳೆ ಖಾನಾಪುರದ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಚಿಕ್ಕೋಡಿ:ಒಳಹರಿವು ಹೆಚ್ಚಳವಾದ ಹಿನ್ನೆಲೆ ಸೇತುವೆಗಳು ಜಲಾವೃತ: ನಿಪ್ಪಾಣಿ ತಾಲೂಕಿನ ಕಾರದಗಾ -ಭೋಜ, ಭೋಜವಾಡಿ-ಕುನ್ನೂರ, ಸಿದ್ದಾಳ-ಅಕ್ಕೋಳ, ಜತಾಟ-ಭಿವಶಿ, ಮಮದಾಪೂರ-ಹುನ್ನರಗಿ, ಕುನೂರ-ಬಾರವಾಡ ಸೇತುವೆಗಳು ನದಿಯಲ್ಲಿ ಒಳಹರಿವು ಹೆಚ್ಚಳವಾದ ಹಿನ್ನೆಲೆ ಜಲಾವೃತವಾಗಿವೆ. ಮುಂಜಾಗ್ರತಾ ಕ್ರಮವಾಗಿ ಚಿಕ್ಕೋಡಿ ನಿಪ್ಪಾಣಿ ಪೊಲೀಸರು ಸೇತುವೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಬ್ಯಾರಿಕೇಡ್ ಅಳವಡಿಸಿ ಸಂಚಾರ ಬಂದ್ ಮಾಡಿದ್ದಾರೆ ಹಾಗೂ ಯಾರು ಸೇತುವೆ ಮೇಲೆ ಸಂಚಾರ ಮಾಡಿದಂತೆ ನಾಮಫಲಕ ಅಳವಡಿಸಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ವರುಣನ ಆರ್ಭಟಕ್ಕೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ನದಿಗಳಲ್ಲಿ […]